ಶಾಲೆಯಲ್ಲಿ ಕಿರುಕುಳ ಆರೋಪ; ಡೆತ್‌ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಐ ಹೆಟ್​ ಯು ಪ್ರಿನ್ಸಿಪಲ್​ ಎಂದು ಹೆಸರು ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿನ್ನೆ (ಫೆಬ್ರವರಿ 18) ಶೆಟ್ಟಿಹಳ್ಳಿ ಬಳಿ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ರಮ್ಯಮೂರ್ತಿ ಸಾವಿಗೆ ಶರಣಾಗಿದ್ದಾಳೆ.

ಶಾಲೆಯಲ್ಲಿ ಕಿರುಕುಳ ಆರೋಪ; ಡೆತ್‌ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ವಿದ್ಯಾರ್ಥಿನಿ ರಮ್ಯಾ ಮೂರ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
Follow us
TV9 Web
| Updated By: preethi shettigar

Updated on:Feb 18, 2022 | 2:48 PM

ಬೆಂಗಳೂರು: ನಗರದ ಟಿ.ದಾಸರಹಳ್ಳಿಯ ಸೌಂದರ್ಯ ಶಾಲೆಯಲ್ಲಿ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್‌ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿ(Student) ರಮ್ಯಾ ಮೂರ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಈ ಹಿಂದೆ ಶಾಲಾ ಆಡಳಿತ ಮಂಡಳಿ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ವಿದ್ಯಾರ್ಥಿನಿ ತಾಯಿ(Mother) ದೂರು ನೀಡಿದ್ದರು. ಇದೇ ವಿಚಾರವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಸದ್ಯ ಈ ಸಂಬಂಧ ಬೆಂಗಳೂರು ನಗರದ ಯಶವಂತಪುರ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐ ಹೆಟ್​ ಯು ಪ್ರಿನ್ಸಿಪಲ್​ ಎಂದು ಹೆಸರು ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿನ್ನೆ (ಫೆಬ್ರವರಿ 18) ಶೆಟ್ಟಿಹಳ್ಳಿ ಬಳಿ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ರಮ್ಯಮೂರ್ತಿ ಸಾವಿಗೆ ಶರಣಾಗಿದ್ದಾಳೆ.

ಕೆಎಸ್ ಲೇಔಟ್​ನಲ್ಲಿ ತಂದೆಯ ತಿಥಿ ಕಾರ್ಯಕ್ಕೆಂದು ಅಡುಗೆ ಮಾಡುವಾಗ ಗ್ಯಾಸ್ ಸೋರಿಕೆಯಾಗಿ ಮಗಳ ದಾರುಣ ಸಾವು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನ ಕಲಕುವ ಘಟನೆಯೊಂದು ನಡೆದಿದೆ. ತಂದೆಯ ತಿಥಿ ಕಾರ್ಯದ ದಿನವೇ ಮಗಳ ದಾರುಣ ಸಾವಾಗಿದೆ. ತಿಥಿ ಕಾರ್ಯಕ್ಕೆಂದು ಅಡುಗೆ ಮಾಡುವಾಗ ಗ್ಯಾಸ್ ಸೋರಿಕೆಯಾಗಿ ಅನಾಹುತ ಸಂಭವಿಸಿದ್ದು ಪರಮೇಶ್ವರಿ(42) ಮೃತಪಟ್ಟಿದ್ದಾರೆ.ನಗರದ ಕೆಎಸ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಮನೆಯೊಂದರಲ್ಲಿ ತಿಥಿ ಕಾರ್ಯಕ್ಕೆಂದು ಸಿದ್ಧತೆ ನಡೆದಿತ್ತು.

ಮನೆ ಚಿಕ್ಕದಿದ್ದ ಕಾರಣ ಕೋಣೆಯೊಂದರಲ್ಲಿ ಸ್ಟವ್ ಇಟ್ಟು ಅಡುಗೆ ಮಾಡಲು ಮೃತರ ಕುಟುಂಬಸ್ಥರು ತಯಾರಿ ನಡೆಸಿದ್ದರು. ತಿಥಿ ಕಾರ್ಯಕ್ಕೆ ನಾನ್ ವೆಜ್ ಅಡುಗೆ ಮಾಡಲು ಕುಟುಂಬಸ್ಥರು‌ ಸಿಲಿಂಡರ್ ತರಿಸಿದ್ದರು. ಇದೇ ವೇಳೆ ಗ್ಯಾಸ್ ಸೋರಿಕೆಯಾಗಿ ಬೆಂಕಿಯ ತೀವ್ರತೆಗೆ ಗ್ಯಾಸ್ ಫ್ಲೇಮ್ ದೊಡ್ಡದಾಗಿ ಹೊತ್ತಿಕೊಂಡಿದೆ. ಈ ಪರಿಣಾಮ ಅಡುಗೆ ಮಾಡ್ತಿದ್ದ ಮೃತನ ಮಗಳು ಪರಮೇಶ್ವರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಆರು ಮಂದಿಗೆ ಗಾಯಗಳಾಗಿದ್ದು, ವಿಕ್ಟೋರಿಯಾ ಬರ್ನಿಂಗ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯುವತಿ ರಕ್ಷಣೆ ಮಾಡಲು ಹೋಗಿ ಯುವಕ ನೀರುಪಾಲು

ವಿಜಯನಗರ: ಸಾಲದ ಸುಳಿಗೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಜಮೀನಿನಲ್ಲಿ ಮರಕ್ಕೆ‌ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗರಗದ ನಾಗರಾಜ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡಿದ್ದ ನಾಗರಾಜ, ಸಾಲಕ್ಕೆ ಸೋತು ಸಾವಿಗೆ ಶರಣಾಗಿದ್ದಾರೆ. ಕೂಟ್ಟೂರು ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬಳ್ಳಾರಿ: ಕೆರೆ ನೋಡಲು ಹೋಗಿದ್ದಾಗ ಕಾಲು ಜಾರಿ ಬಿದ್ದಿದ್ದ ಯುವತಿ ರಕ್ಷಣೆ ಮಾಡಲು ಹೋಗಿ ಯುವಕ ನೀರುಪಾಲು ಆದ ದುರ್ಘಟನೆ ನಡೆದಿದೆ. ಸಂಡೂರು ತಾಲೂಕಿನ ಹೊಸದರೋಜಿ ಕೆರೆಯಲ್ಲಿ ಮುಳುಗಿ ಬಿಬಿಎ ವಿದ್ಯಾರ್ಥಿ ಸಂದೀಪ್ ಸಾವನ್ನಪ್ಪಿದ್ದಾರೆ. ಯುವತಿಯನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಹಿಜಾಬ್ ಧರಿಸಿದ್ದಕ್ಕೆ ತರಗತಿಗಳಿಗೆ ಹಾಜರಾಗಲು ಅನುಮತಿ ಪಡೆಯದ ವಿದ್ಯಾರ್ಥಿನಿಯರು, ಮುಸ್ಲಿಮೇತರ ಸಹಪಾಠಿಗಳನ್ನು ಗೇಲಿ ಮಾಡಿದರು!

ಚಿಕಿತ್ಸೆಗಾಗಿ 2 ವರ್ಷಗಳಿಂದ ಆಶ್ರಮದಲ್ಲಿದ್ದು ಈಗ ಆತ್ಮಹತ್ಯೆ ಮಾಡಿಕೊಂಡ ಯುವತಿ; ಟ್ವಿಟರ್​​ನಲ್ಲಿ ಟ್ರೆಂಡ್​ ಆದ ಜಸ್ಟೀಸ್ ಫಾರ್​ ಹೇಮಮಾಲಿನಿ ಹ್ಯಾಶ್​ಟ್ಯಾಗ್​

Published On - 2:32 pm, Fri, 18 February 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್