AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ರಾಘವೇಶ್ವರ ಶ್ರೀ, ಕಲ್ಲಡ್ಕ ಭಟ್ ವಿರುದ್ಧದ ಪ್ರಕರಣ ರದ್ದು

ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಸಂಬಂಧ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಶ್ರೀ ಮತ್ತು ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಂಡಿದೆ.

ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ರಾಘವೇಶ್ವರ ಶ್ರೀ, ಕಲ್ಲಡ್ಕ ಭಟ್ ವಿರುದ್ಧದ ಪ್ರಕರಣ ರದ್ದು
ರಾಘವೇಶ್ವರ ಭಾರತೀ ಶ್ರೀ ಮತ್ತು ಕಲ್ಲಡ್ಕ ಪ್ರಭಾಕರ ಭಟ್‌
Rakesh Nayak Manchi
|

Updated on:Apr 20, 2023 | 11:01 PM

Share

ಬೆಂಗಳೂರು: ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ (Syama Prasad Shastri Suicide Case) ಪ್ರಚೋದನೆ ಆರೋಪ ಸಂಬಂಧ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಶ್ರೀ (Raghaveshwara Bharathi Sri) ಮತ್ತು ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ (Kalladka Prabhakar Bhat) ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಂಡಿದೆ. ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಸಂತ್ರಸ್ತೆ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ ಹಿನ್ನೆಲೆ 2014ರ ಸೆ.1ರಂದು ಪುತ್ತೂರಿನ ಕೆದಿಲ ಗ್ರಾಮದಲ್ಲಿ ಶಾಸ್ತ್ರಿ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಆರೋಪಪಟ್ಟಿ ದಾಖಲಿಸಿದ್ದರು. ಸದ್ಯ ನ್ಯಾ.ಹೇಮಂತ ಚಂದನಗೌಡರ್‌ರಿದ್ದ ಹೈಕೋರ್ಟ್‌ ಪೀಠ, ಶ್ರೀಗಳ ಮತ್ತು ಕಲ್ಲಡ್ಕ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.

ಏನಿದು ಪ್ರಕರಣ?

ರಾಘವೇಶ್ವರ ಭಾರತಿ ಸ್ವಾಮಿ ವಿರುದ್ಧ ಅತ್ಯಾಚಾರದ ಆರೋಪ ಪ್ರಕರಣದಲ್ಲಿ ಶ್ಯಾಮ್ ಪ್ರಸಾದ್ ಶಾಸ್ತ್ರಿ ಪ್ರಮುಖ ಸಾಕ್ಷಿಯಾಗಿದ್ದರು. ಶ್ಯಾಮ್ ​ಪ್ರಸಾದ್ ಶಾಸ್ತ್ರಿ ಸಂತ್ರಸ್ತೆ ಮಹಿಳೆಯ ಮೈದುನ. ಆದರೆ, 2014, ಆಗಸ್ಟ್ 31ರಂದು ಇವರು ತಮ್ಮ ಮನೆಯಲ್ಲಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಶಾಸ್ತ್ರಿ ಪತ್ನಿ ಸಂಧ್ಯಾಲಕ್ಷ್ಮೀ ಅವರು ಮೂವರ ವಿರುದ್ಧ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಇನ್ಮುಂದೆ ಕೋರ್ಟ್ ತೀರ್ಪು ಕನ್ನಡದಲ್ಲೇ ಓದಿ: ಕನ್ನಡ ಭಾಷೆ ತೀರ್ಪುಗಳು ಇರುವ ವೆಬ್ ಸೈಟ್​​ ಆರಂಭಿಸಿದ ಹೈಕೋರ್ಟ್

ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನದಂದು ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಬೋಳಂತಾಯ ಶಿವಶಂಕರ್ ಭಟ್ ಅವರು ತಮ್ಮ ಪತಿಗೆ ಕರೆ ಮಾಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ರಾಘವೇಶ್ವರ ಶ್ರೀಗಳ ಪರವಾಗಿ ಸಾಕ್ಷಿ ಹೇಳಬೇಕು. ರಾಮಚಂದ್ರಾಪುರ ಮಠಕ್ಕೆ ಹೋಗಿ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು. ಅಣ್ಣ-ಅತ್ತಿಗೆ ಮಾಡಿದ್ದು ತಪ್ಪು ಎಂದು ಒಪ್ಪಿ ಲಿಖಿತವಾಗಿ ಬರೆದುಕೊಡಬೇಕು ಎಂದು ತಮ್ಮ ಪತಿಗೆ ಬೆದರಿಕೆ ಹಾಕಿದ್ದಾಗಿ ಸಂಧ್ಯಾಲಕ್ಷ್ಮೀ ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 pm, Thu, 20 April 23