AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮತಾಂತರದ ಆರೋಪ; 70 ರಿಂದ 80 ಮಕ್ಕಳನ್ನು ಸೇರಿಸಿ ಕ್ರೈಸ್ತ ಪ್ರಾರ್ಥನೆ ಮಾಡಿದ ವಿಡಿಯೋ ವೈರಲ್

ಬ್ಯಾಡರಹಳ್ಳಿ ಪೊಲೀಸರು, ನಾರಾಯಣಸ್ವಾಮಿ ಮನೆಗೆ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ಮಾಡಿದ್ದಾರೆ. ಆ ಮನೆಯಲ್ಲಿ ಕೇವಲ ಪ್ರಾರ್ಥನೆ ಮಾಡಿದ್ದಾರಷ್ಟೇ. ಆದರೆ ಮತಾಂತರ ಮಾಡಿಲ್ಲವೆಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಕೊವಿಡ್ ನಿಯಮ ಉಲ್ಲಂಘಿಸಿ ಪ್ರಾರ್ಥನೆ ಹಿನ್ನೆಲೆ ನಾರಯಣಸ್ವಾಮಿ ವಿರುದ್ಧ ಎನ್​ಡಿಎಮ್​ಎ ಕೇಸ್ ದಾಖಲಿಸಲಾಗಿದೆ.

ಬೆಂಗಳೂರು: ಮತಾಂತರದ ಆರೋಪ; 70 ರಿಂದ 80 ಮಕ್ಕಳನ್ನು ಸೇರಿಸಿ ಕ್ರೈಸ್ತ ಪ್ರಾರ್ಥನೆ ಮಾಡಿದ ವಿಡಿಯೋ ವೈರಲ್
ಮತಾಂತರದ ಆರೋಪ
TV9 Web
| Edited By: |

Updated on:Sep 28, 2021 | 12:11 PM

Share

ಬೆಂಗಳೂರು:ನಗರದಲ್ಲಿ ಮತಾಂತರದ ಆರೋಪ ಕೇಳಿಬಂದಿದ್ದು, ಆರ್​ಎಸ್​ಎಸ್​ (RSS) ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ನಾರಾಯಣಸ್ವಾಮಿ ಎಂಬುವವರ ಮನೆಯಲ್ಲಿ ಸುಮಾರು 70 ರಿಂದ 80 ಮಕ್ಕಳನ್ನು ಸೇರಿಸಿ ಕ್ರೈಸ್ತ ಪ್ರಾರ್ಥನೆ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಈ ಕುರಿತು ಕಳೆದ ಭಾನುವಾರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಮತಾಂತರಕ್ಕೆ ಪ್ರಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.

ಆರ್​ಎಸ್​ಎಸ್ ಕಾರ್ಯಕರ್ತರಿಂದ ಮಾಹಿತಿ ಪಡೆದ ಬ್ಯಾಡರಹಳ್ಳಿ ಪೊಲೀಸರು, ನಾರಾಯಣಸ್ವಾಮಿ ಮನೆಗೆ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ಮಾಡಿದ್ದಾರೆ. ಕಳೆದ ಹತ್ತು ವರ್ಷದಿಂದ ಆ ಮನೆಯಲ್ಲಿ ಕೇವಲ ಪ್ರಾರ್ಥನೆ ಮಾಡಿದ್ದಾರಷ್ಟೇ. ಆದರೆ ಮತಾಂತರ ಮಾಡಿಲ್ಲವೆಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಕೊವಿಡ್ ನಿಯಮ ಉಲ್ಲಂಘಿಸಿ ಪ್ರಾರ್ಥನೆ ಹಿನ್ನೆಲೆ ನಾರಯಣಸ್ವಾಮಿ ವಿರುದ್ಧ ಎನ್​ಡಿಎಮ್​ಎ (NDMA) ಕೇಸ್ ದಾಖಲಿಸಲಾಗಿದೆ.

ಪ್ರಾರ್ಥನ ಮಂದಿರದ ಮೇಲೆ‌ ಕ್ರಮಕ್ಕೆ ಈಗಾಗಲೇ ಬಿಬಿಎಂಪಿಗೆ ಮಾಹಿತಿ ನೀಡಲಾಗಿದೆ. ಅಲ್ಲದೇ ಪ್ರಾರ್ಥನೆ ನಡೆಸುತ್ತಿದ್ದ ಮನೆ ಮಾಲೀಕ ನಾರಾಯಣಸ್ವಾಮಿಗೆ ನೋಟಿಸ್ ನೀಡಲಾಗಿದೆ.

ಯಾದಗಿರಿ, ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಮತಾಂತರದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಅಲ್ಲಲ್ಲಿ ಮತಾಂತರದ ಘಟನೆಗಳು ನಡೆಯುತ್ತಿವೆ. ಇಂಥದ್ದಕ್ಕೆಲ್ಲ ಅವಕಾಶ ಕೊಡದಂತೆ ಡಿಸಿಗೆ ಸೂಚಿಸಲಾಗಿದೆ. ಬಲವಂತದ ಮತಾಂತರ ತಡೆಯಲು ಕಾನೂನು ತರುತ್ತೇವೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಕಡೆ ಅನೇಕ ಕಡೆ ಮತಾಂತರದ ಆರೋಪ ಕೇಳಿ ಬಂದಿತ್ತು.

ಹಾಸನ:ಹಿಂದೂಪರ ಸಂಘಟನೆಗಳಿಂದ ತರಾಟೆ ಮತಾಂತರಕ್ಕೆ ಯತ್ನಿಸುತ್ತಿದ್ದ ಆರೋಪದಡಿ ಸಾರ್ವಜನಿಕರು ಮಹಿಳೆಯೋರ್ವಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಹಾಸನ ನಗರದ ಮಹಾರಾಜ ಪಾರ್ಕ್ನಲ್ಲಿ ನಡೆದಿದೆ. ರಾಧಮ್ಮ ಎಂಬ ಮಹಿಳೆಯ ಮೇಲೆ ಮತಾಂತರಕ್ಕೆ ಯತ್ನಿಸುತ್ತಿದ್ದ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಬಂದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜತೆಗೆ ಸ್ಥಳೀಯರು ಮತಾಂತರ ಯತ್ನದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆರೋಪಿತ ಮಹಿಳೆ ಪ್ರತಿದಿನ ಉದ್ಯಾನವನಕ್ಕೆ ಆಗಮಿಸಿ ಅಲ್ಲಿಗೆ ಬರುತ್ತಿದ್ದ ಸ್ಥಳೀಯರನ್ನು ಮತಾಂತರವಾಗುವಂತೆ ಪುಸಲಾಯಿಸುತ್ತಿದ್ದರು ಎಂದು ಆರೋಪ ಕೇಳಿಬಂದಿದೆ. ಈ ವಿಷಯ ಇಂದು ಸ್ಥಳೀಯರ ಮೂಲಕ ಹಿಂದೂಪರ ಸಂಘಟನೆಗಳಿಗೆ ತಿಳಿದಿದೆ.  ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿ ಮಹಿಳೆಯ ಬಳಿ ಇದ್ದ ಮತಾಂತರಕ್ಕೆ ಬಳಸುವ ಪುಸ್ತಕಗಳು ಮತ್ತು ಕರ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಸನದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾಸನದಲ್ಲಿ ಮತಾಂತರಕ್ಕೆ ಯತ್ನ ಆರೋಪ; ಹಿಂದೂಪರ ಸಂಘಟನೆಗಳಿಂದ ತರಾಟೆ; ಕೇಸ್ ದಾಖಲು

ಉಡುಪಿ: ಮಕ್ಕಳು, ಮಹಿಳೆಯರನ್ನು ಕೂಡಿಹಾಕಿ ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪ; ಹಿಂದೂ ಪರ ಸಂಘಟನೆಯಿಂದ ದಾಳಿ

Published On - 9:53 am, Tue, 28 September 21

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ