ಅಪ್ರಾಪ್ತರು ಮಾದಕ ವಸ್ತು ಸೇವನೆ​​​​​ ಆರೋಪ: ಬೆಂಗಳೂರಿನ ಹುಕ್ಕಾ ಬಾರ್​ ಮೇಲೆ ಸಿಸಿಬಿ ದಾಳಿ

ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿಯಿಂದ ರೇಡ್ ಮಾಡಿದ್ದು, ಅಪ್ರಾಪ್ತರು ಹುಕ್ಕಾ ಬಾರ್​ನಲ್ಲಿ ಮಾದಕ ವಸ್ತು ಸೇವನೆ​​​​​ ಆರೋಪ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಸಿಸಿಬಿ ದಾಳಿ ನಡೆಸಿದೆ.

ಅಪ್ರಾಪ್ತರು ಮಾದಕ ವಸ್ತು ಸೇವನೆ​​​​​ ಆರೋಪ: ಬೆಂಗಳೂರಿನ ಹುಕ್ಕಾ ಬಾರ್​ ಮೇಲೆ ಸಿಸಿಬಿ ದಾಳಿ
ಸಿಸಿಬಿ (ಸಂಗ್ರಹ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 28, 2022 | 12:34 PM

ಬೆಂಗಳೂರು: ನಗರದ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ಲೋ ಹುಕ್ಕಾ ಬಾರ್​​​ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಹುಕ್ಕಾ ಬಾರ್​​​​ನ ಪರಿಕರಗಳು, 80 ಸಾವಿರ ಹುಕ್ಕಾ ಪ್ಲೇವರ್ ಮತ್ತು​​​ 6,050 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿಯಿಂದ ರೇಡ್ ಮಾಡಿದ್ದು, ಅಪ್ರಾಪ್ತರು ಹುಕ್ಕಾ ಬಾರ್​ನಲ್ಲಿ ಮಾದಕ ವಸ್ತು ಸೇವನೆ​​​​​ ಆರೋಪ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಸಿಸಿಬಿ ದಾಳಿ ನಡೆಸಿದೆ. ಹುಕ್ಕಾ ಬಾರ್ ಮಾಲೀಕರು, ಮ್ಯಾನೇಜರ್​ ವಿರುದ್ಧ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹೃದಯಾಘಾತದಿಂದ ಕರ್ತವ್ಯ ನಿರತ BSF ಯೋಧ ಸಾವು

ಧಾರವಾಡ: ಹೃದಯಾಘಾತದಿಂದ ಕರ್ತವ್ಯ ನಿರತ ಧಾರವಾಡದ BSF ಯೋಧ ಸಾವನ್ನಪ್ಪಿರುವಂತಹ ಘಟನೆ ಪಶ್ಚಿಮ ಬಂಗಾಳದ ಕುಚ್ ಬಿಹಾರ್​​ನಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಗಂಗಾಧರಯ್ಯ ಹಿರೇಮಠ(49) ಮೃತ ಯೋಧ. ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದ ಯೋಧ. ಬಾಂಗ್ಲಾ ಗಡಿಯಲ್ಲಿ ಸೇವೆ ಸಲ್ಲಿಸ್ತಿದ್ದ ಯೋಧ ಗಂಗಾಧರಯ್ಯ, BSF ಬೆಟಾಲಿಯನ್ 138ರಲ್ಲಿ ಸೇವೆ ಸಲ್ಲಿಸ್ತಿದ್ದರು. 28 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಂದು ರಾತ್ರಿ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು, ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ: tumakur news: ಹಣ ಡಬ್ಲಿಂಗ್ ಆಸೆ ತೋರಿಸಿ ಮಹಿಳೆಯಿಂದ 9.60 ಲಕ್ಷ ರೂ. ವಂಚನೆ: ಐದು ಜನರ ಬಂಧನ

ರೈಲಿಗೆ ಸಿಲುಕಿ ವ್ಯಕ್ತಿ ಸಾವು

ನೆಲಮಂಗಲ: ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ತುಮಕೂರು-ಬೆಂಗಳೂರು ರೈಲು ಮಾರ್ಗದ ದಾಬಸ್‌ಪೇಟೆ ಬಳಿ ನಡೆದಿದೆ. ದಾಬಸ್‌ಪೇಟೆ ನಿವಾಸಿ ಗಂಗಾಧರ್ (31) ಮೃತ ವ್ಯಕ್ತಿ. ಕಳೆದ ಒಂದುವರೆ ವರ್ಷದ ಹಿಂದೆ ಮದುವೆಯಾಗಿದ್ದ. ಮೃತನ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳೀಯವಾಗಿ ಕ್ಯಾಂಟರ್ ಚಾಲಕನಾಗಿದ್ದ ಮೃತ ಗಂಗಾಧರ್, ಯಶವಂತಪುರ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 12:23 pm, Sun, 28 August 22

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ