ಸರ್ಕಾರದ ಬೊಕ್ಕಸಕ್ಕೆ 150 ಕೋಟಿ ವಂಚನೆ ಆರೋಪ; ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಬಂಧನ
ನಿಗಮದ ಎಂ.ಡಿ ಲೀಲಾವತಿ, ಜನರಲ್ ಮ್ಯಾನೇಜರ್ ನಾಗರಾಜಪ್ಪ ಮನೆಗಳ ಮೇಲೆ ದಾಳಿ ನಡೆಸಿದ್ದ ಎಸಿಬಿ ತನಿಖೆಗೆ ಅಗತ್ಯ ದಾಖಲೆಗಳನ್ನ ಸಲ್ಲಿಸದೇ ಇರುವ ಹಿನ್ನೆಲೆ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.
ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿ(ACB) ಪೊಲೀಸರು ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿಯವರನ್ನು(Bhovi Development Corporation Managing Director) ಬಂಧಿಸಿದ್ದಾರೆ. ಅಭಿವೃದ್ಧಿ ಯೋಜನೆ ಹೆಸರಿನಲ್ಲಿ ವಂಚಿಸಿದ್ದಾರೆ ಎಂಬ ಆರೋಪ ನಿಗಮದ ವಿರುದ್ಧ ಕೇಳಿ ಬಂದಿತ್ತು. ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ 150 ಕೋಟಿ ವಂಚಿಸಿದ್ದ ಆರೋಪವಿತ್ತು. ನಿಗಮದ ಎಂ.ಡಿ ಲೀಲಾವತಿ, ಜನರಲ್ ಮ್ಯಾನೇಜರ್ ನಾಗರಾಜಪ್ಪ ಮನೆಗಳ ಮೇಲೆ ದಾಳಿ ನಡೆಸಿದ್ದ ಎಸಿಬಿ ತನಿಖೆಗೆ ಅಗತ್ಯ ದಾಖಲೆಗಳನ್ನ ಸಲ್ಲಿಸದೇ ಇರುವ ಹಿನ್ನೆಲೆ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.
ಭೋವಿ ನಿಗಮದ ಪ್ರಧಾನ ವ್ಯವಸ್ಥಾಪಕ ಮನೆ ಮೇಲೆ ಎಸಿಬಿ ದಾಳಿ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ಮನೆ ಮೇಲೆ ಎಸಿಬಿ ದಾಳಿ ಪ್ರಕರಣದಲ್ಲಿ ಎಸಿಬಿ ತನಿಖೆ ಮುಂದುವರೆದಿದೆ. ಪ್ರಕರಣ ಸಂಬಂಧ ಮಾಗಡಿ ರಸ್ತೆಯ ಸನ್ ಫ್ಲವರ್ ಅಪಾರ್ಟ್‌ಮೆಂಟಿನಲ್ಲಿ ನಾಗರಾಜಪ್ಪಗೆ ಸೇರಿದ ಫ್ಲ್ಯಾಟ್ ಮೇಲೆ ದಾಳಿ ನಡೆದಿತ್ತು. ವಿಜಯನಗರದ ಎಂ.ಸಿ. ಲೇಔಟಿನಲ್ಲಿ ವಾಸದ ಮನೆ, 1 ಕಾರು, 1 ದ್ವಿಚಕ್ರ ವಾಹನ, 26 ಸಾವಿರ ರೂ ಮೌಲ್ಯದ ಗೃಹೋಪಯೋಗಿ ವಸ್ತುಗಳು ಜಪ್ತಿಯಾಗಿವೆ. ಬೇನಾಮಿ ಹೆಸರಿನ ಖಾತೆಗಳಲ್ಲಿ 29.40 ಲಕ್ಷ ಠೇವಣಿ ಪತ್ತೆಯಾಗಿದೆ. ಅಸಮತೋಲಿತ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಆಧರಿಸಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದನ್ನೂ ಓದಿ: ಐಎಎಸ್ ಅಧಿಕಾರಿ ಅಕ್ರಮ ಕುರಿತು ದಾಖಲೆಗಳ ಬಿಡುಗಡೆ ಮಾಡಿ, ನನ್ನ ಜೀವಕ್ಕೆ ಬೆದರಿಕೆ ಇದೆ ಎಂದ ಭೋವಿ ಅಭಿವೃದ್ಧಿ ನಿಗಮ ಎಂಡಿ ಲೀಲಾವತಿ
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:08 pm, Wed, 15 June 22