ಹೊಸ ವರ್ಷಕ್ಕೆ ಮಧ್ಯರಾತ್ರಿ 3 ಗಂಟೆವರೆಗೂ ಹೋಟೆಲ್ ತೆರೆಯಲು ಅನುಮತಿ ಕೊಡಿ; ಪೊಲೀಸ್ ಇಲಾಖೆಗೆ ಹೋಟೆಲ್ ಮಾಲೀಕರ ಮನವಿ
2 ವರ್ಷದ ಬಳಿಕ ಅದ್ಧೂರಿಯಾಗಿ ಹೊಸ ವರ್ಷ ಆಚರಣೆಗೆ ಸಿದ್ಧತೆ ನಡೆಯುತ್ತಿದ್ದು ಮಧ್ಯರಾತ್ರಿ 3 ಗಂಟೆವರೆಗೂ ಹೋಟೆಲ್ ತೆರೆಯಲು ಅನುಮತಿ ಕೊಡಿ ಎಂದು ಪೊಲೀಸ್ ಇಲಾಖೆಗೆ ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ.
ಬೆಂಗಳೂರು: ಕಳೆದ ಎರಡು ವರ್ಷದಿಂದ ಮಹಾಮಾರಿ ಕೊರೊನಾದಿಂದಾಗಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿತ್ತು. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಹೀಗಾಗಿ ಈ ಬಾರಿ ಮಧ್ಯರಾತ್ರಿ 3 ಗಂಟೆವರೆಗೂ ಹೋಟೆಲ್ ತೆರೆಯಲು ಅನುಮತಿ ಕೊಡಿ ಎಂದು ಪೊಲೀಸ್ ಇಲಾಖೆಗೆ ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ.
ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ ಇವೆ. ಕೊರೊನಾದಿಂದಾಗಿ ಕಳೆದ ಎರಡು ವರ್ಷದಿಂದ ಭರ್ಜರಿಯಾಗಿ ಆಚರಣೆ ಮಾಡಲಾಗದಿದ್ದ ಹೊಸ ವರ್ಷವನ್ನು ಈ ಬಾರಿ ಅದ್ದೂರಿಯಾಗಿ ಮಾಡಬೇಕೆಂದು ಸಿದ್ದತೆಗಳು ಶುರುವಾಗಿವೆ. ಕ್ರಿಸ್ಮಸ್, ಹೊಸ ವರ್ಷಕ್ಕೆ ಈಗಾಗಲೇ ಸಿದ್ಧತೆಗಳು ಶುರುವಾಗಿವೆ. ಮಾಲ್ಗಳಲ್ಲಿ ಕ್ರಿಸ್ಮಸ್ ಅಲಂಕಾರ ಜನರನ್ನು ಸೆಳೆಯುತ್ತಿವೆ. ಮತ್ತೊಂದೆಡೆ ಕೊರೊನಾದಿಂದ ಕಂಗಾಲಾಗಿದ್ದ ಹೋಟೆಲ್ ಮಾಲೀಕರು ಹೊಸ ವರ್ಷಕ್ಕೆ ಹಣ ಮಾಡಿಕೊಳ್ಳುವ ಪ್ಲಾನ್ನಲ್ಲಿದ್ದಾರೆ.
ಇದನ್ನೂ ಓದಿ: VV Puram Food Street: ಫುಡ್ ಸ್ಟ್ರೀಟ್‌ಗೆ ನಿಮ್ಮ ಆಯ್ಕೆಯ ಹೆಸರು ನೀಡಲು ಮುಕ್ತ ಅವಕಾಶ
2 ವರ್ಷದ ಬಳಿಕ ಅದ್ಧೂರಿಯಾಗಿ ಹೊಸ ವರ್ಷ ಆಚರಣೆಗೆ ಸಿದ್ಧತೆ ನಡೆಯುತ್ತಿದ್ದು ಮಧ್ಯರಾತ್ರಿ 3 ಗಂಟೆವರೆಗೂ ಹೋಟೆಲ್ ತೆರೆಯಲು ಅನುಮತಿ ಕೊಡಿ ಎಂದು ಪೊಲೀಸ್ ಇಲಾಖೆಗೆ ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ. ರಾತ್ರಿ 3 ಗಂಟೆಯವರೆಗೆ ಹೋಟೆಲ್ ತೆರಯಲು ಅನುಮತಿ ಕೊಟ್ಟರೆ ನಮಗೆ ಅನುಕೂಲವಾಗುತ್ತೆ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರಲ್ಲಿ ಹೊಸ ವರ್ಷದ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಯತ್ನ
ಬೆಂಗಳೂರು ನಗರದ ಮೂರು ಕಡೆ ಸಿಸಿಬಿ ಪೊಲೀಸರು ದಾಳಿ ನಡೆಸಿ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತರಿಂದ 35 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.ಡ್ರಗ್ಸ್ ಪೆಡ್ಲರ್ಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ನಗರದಲ್ಲಿ ಹೊಸ ವರ್ಷದ ಪಾರ್ಟಿಗಳಲ್ಲಿ ಡ್ರಗ್ಸ್ ಸಪ್ಲೆ ಮಾಡಲು ಪ್ರಯತ್ನ ನಡೆಯುತ್ತಿದ್ದು ಈ ಬಗ್ಗೆ ಸಹ ಸಿಸಿಬಿ ಪೊಲೀಸರು ನಿಗಾ ನಿಟ್ಟಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:11 am, Wed, 14 December 22