ಕೊನೆಗೂ ಅಲೋಕ್ ಕುಮಾರ್​​ಗೆ ಸಿಕ್ತು ಮುಂಬಡ್ತಿ: ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS

ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇತ್ತೀಚೆಗೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್​ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಆದೇಶಿಸಿದ್ದ ತನಿಖೆಯನ್ನು ರದ್ದುಗೊಳಿಸಿ ಬಡ್ತಿಗೆ ಆದೇಶಿಸಿತ್ತು. ಈ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ.

ಕೊನೆಗೂ ಅಲೋಕ್ ಕುಮಾರ್​​ಗೆ ಸಿಕ್ತು ಮುಂಬಡ್ತಿ: ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS
Alok Kumar

Updated on: Dec 10, 2025 | 8:26 PM

ಬೆಂಗಳೂರು, ಡಿಸೆಂಬರ್​ 10: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (IPS Alok Kumar) ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇತ್ತೀಚೆಗೆ ರದ್ದುಗೊಳಿಸಿತ್ತು. ಈ ಬೆನ್ನಲ್ಲೇ ಇದಿಗ ಅಲೋಕ್ ಕುಮಾರ್​ಗೆ ಎಡಿಜಿಪಿಯಿಂದ ಡಿಜಿಪಿಯಾಗಿ ಬಡ್ತಿ ನೀಡಿದ ರಾಜ್ಯ ಸರ್ಕಾರ, ಕಾರಾಗೃಹ ಇಲಾಖೆಗೆ ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ 8 ತಿಂಗಳ ಹೋರಾಟಕ್ಕೆ ಜಯ ಸಿಕ್ಕಿದೆ.

ಅಲೋಕ್ ಕುಮಾರ್‌ಗೆ ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ವರ್ಗಾವಣೆ ಹಿನ್ನಲೆ ಪೊಲೀಸ್ ತರಬೇತಿ ಇಲಾಖೆಯ ಎಡಿಜಿಪಿಯಾಗಿ ಬಿ.ದಯಾನಂದ್​​​ರನ್ನು ವರ್ಗಾವಣೆ ಮಾಡಿದೆ.

ಇದನ್ನೂ ಓದಿ: IPS ಅಲೋಕ್‌ ಕುಮಾರ್‌ಗೆ ಮುಂಬಡ್ತಿ ನೀಡದೇ 6 ವರ್ಷದ ಹಳೆ ಕೇಸ್‌ ಕೆದಕಿದ ಸರ್ಕಾರಕ್ಕೆ ಶಾಕ್

2019 ರಲ್ಲಿ ನಡೆದಿದ್ದ ಫೋನ್ ಟ್ಯಾಪಿಂಗ್ ಹಗರಣ ಪ್ರಕರಣದಲ್ಲಿ ಅಲೋಕ್ ಕುಮಾರ್ ಸೇರಿ ಕೆಲ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶ ಹೊರಡಿಸಿತ್ತು. ಈ ವೇಳೆ ಅಲೋಕ್ ಕುಮಾರ್ ನಗರ ಪೊಲೀಸ್ ಆಯುಕ್ತರಾಗಿದ್ದರು. ಸಿಬಿಐ ಪ್ರಕರಣದ ಬಗ್ಗೆ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಆದರೆ 2025 ಮೇ ತಿಂಗಳಿನಲ್ಲಿ ಇಲಾಖಾ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಅವರು ಇತ್ತೀಚೆಗೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ವಾದಿಸಿದ್ದರು.

ಅಲೋಕ್ ಕುಮಾರ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯ ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದರು. ಹೀಗಾಗಿ ವಿಚಾರಣೆ ಸಿಎಟಿ ಮುಖ್ಯಸ್ಥ ನ್ಯಾಯಮೂರ್ತಿ ರಣ್‌ಜೀತ್ ಬಳಿಗೆ ಹೋಗಿತ್ತು. ಈ ವೇಳೆ ವಾದ ಪ್ರತಿವಾದದ ಬಳಿಕ ಅಕ್ಟೋಬರ್ 14 ತನಿಖೆಯನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಲಾಗಿತ್ತು. ಜೊತೆಗೆ ತಡೆಹಿಡಿಯಲಾಗಿದ್ದ ಬಡ್ತಿ ಮತ್ತು ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿತ್ತು. ಆ ಮೂಲಕ ಅಲೋಕ್ ಕುಮಾರ್​​ ಅವರು ಗೆದ್ದು ಬೀಗಿದ್ದರು.

ಇದನ್ನೂ ಓದಿ: ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ

ಇತ್ತ ಸರ್ಕಾರ ಸಿಐಟಿ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ ಸಿಎಟಿ ಆದೇಶಕ್ಕೆ  ಹೈಕೋರ್ಟ್ ತಡೆ ನೀಡಲು ನಿರಾಕರಿಸಿತ್ತು. ಹೀಗಾಗಿ ಇದೀಗ ಅಲೋಕ್ ಕುಮಾರ್​ಗೆ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ವರದಿ: ಪ್ರದೀಪ್​​ ಚಿಕ್ಕಾಟೆ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:20 pm, Wed, 10 December 25

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us