ಬೇಸಿಗೆ ಜೊತೆಗೆ ಮಕ್ಕಳಲ್ಲಿ ಶುರುವಾಯ್ತು ಇನ್ಫೆಕ್ಷನ್​ಗಳ ಹಾವಳಿ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಲು ವೈದ್ಯರ ಸಲಹೆ

| Updated By: ಆಯೇಷಾ ಬಾನು

Updated on: Mar 25, 2024 | 3:21 PM

ಕೂಲ್ ಸಿಟಿ ಅಂತಾನೇ ಕರೆಸಿಕೊಳ್ಳುವ ಸಿಲಿಕಾನ್ ಸಿಟಿ ಬೆಂಗಳೂರು ಸದ್ಯ ಹಾಟ್ ಸಿಟಿಯಾಗಿ ಬದಲಾಗಿದೆ. ಕುಡಿಯುವ ನೀರಿನ ಸಮಸ್ಯೆಯಿಂದ ರಾಜಧಾನಿಯಲ್ಲಿ ಬರಗಾಲದ ಎಫೆಕ್ಟ್ ಕೂಡಾ ಶುರುವಾಗಿದೆ. ಈ ಮಧ್ಯೆ ಏರಿಕೆಯ ತಾಪಮಾನ, ಬೇಸಿಗೆ ಎಫೆಕ್ಟ್ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು ನಾನಾ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಪೋಷಕರು ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಬೇಸಿಗೆ ಜೊತೆಗೆ ಮಕ್ಕಳಲ್ಲಿ ಶುರುವಾಯ್ತು ಇನ್ಫೆಕ್ಷನ್​ಗಳ ಹಾವಳಿ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಲು ವೈದ್ಯರ ಸಲಹೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಮಾರ್ಚ್​.25: ಬೇಸಿಗೆ.. ಅಂದುಕೊಂಡದಕ್ಕಿಂದ ಈ ಸಲ ಸೆಕೆ ಜಾಸ್ತಿನೇ ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಂಗಳೂರು (Bengaluru) ಮತ್ತಷ್ಟು ಹಾಟ್ ಆಗಿದೆ. ಬಿರು ಬಿಸಿಲಿಗೆ ಸಿಟಿ ಜನ ಬಸವಳಿದು ಹೋಗಿದ್ದಾರೆ. ರಾಜ್ಯ ಸೇರಿ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಏರಿಕೆ ಕಂಡಿದೆ (Summer). ಮುಂದಿನ ಕೆಲ ದಿನ ಇದೇ ರೀತಿಯ ಗರಿಷ್ಠ ಬಿಸಿಲು ಇರಲಿದೆ. ಸದ್ಯ ಬೇಸಿಗೆ ಆರಂಭದ ಜೊತೆ ಜೊತೆಗೆ ಪುಟಾಣಿ ಮಕ್ಕಳಿಗೆ ಆರೋಗ್ಯದ ಸಮಸ್ಯೆಗಳು ಕೂಡ ಹೆಚ್ಚಾಗುತ್ತಿವೆ.

ಬೇಸಿಗೆ ಜೊತೆಗೆ ಮಕ್ಕಳಲ್ಲಿ ನಾನಾ ಇನ್ಫೆಕ್ಷನ್​ಗಳು ಶುರುವಾಗಿದೆ. ಕ್ಯಾಂಡಿಡಾ ಇನ್ಫೆಕ್ಷನ್, ಫಂಗಲ್ ಇನ್ಫೆಕ್ಷನ್, ವೈರಲ್ ಇನ್ಫೆಕ್ಷನ್, ಸ್ಕಿನ್ ಇನ್ಫೆಕ್ಷನ್, ಡೈಯೆರಿಯಾ ಸೇರಿದಂತೆ ನಾನಾ ಆರೋಗ್ಯದ ಸಮಸ್ಯೆಗಳು ಕಂಡು ಬರ್ತಿವೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಮಕ್ಕಳಲ್ಲಿ 15% ರಿಂದ 20% ರಷ್ಟು ಮಕ್ಕಳಲ್ಲಿ ಕ್ಯಾಂಡಿಡಾ, ಫಂಗಲ್, ವೈರಲ್, ಸ್ಕಿನ್ ಇನ್ಫೆಕ್ಷನ್ ಜೊತೆಗೆ ಡೈಯೆರಿಯಾ ಶುರುವಾಗಿದೆ. ಹೀಗಾಗಿ ವೈದ್ಯರು ಮಕ್ಕಳ ಆರೋಗ್ಯದ ಬಗ್ಗೆ ಕೊಂಚ ಎಚ್ಚರವಹಿಸುವಂತೆ ಪೋಷಕರಿಗೆ ಸಲಹೆ ನೀಡುತ್ತಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ರೆ ವಿಷ ಕುಡಿಯಲು ಹಣವಿಲ್ಲ ಅಂದಿದ್ರು: ಸವದಿ ಕಿಡಿ

ಬೇಸಿಗೆಯಿಂದ ಮಕ್ಕಳಲ್ಲಿ ಅನಾರೋಗ್ಯದ ಸಮಸ್ಯೆ ಹೆಚ್ಚಾಗಿದ್ದು ಸದ್ಯ ಈ ಖಾಯಿಲೆಗಳು ಮಕ್ಕಳಿಗೆ ಒಬ್ಬರಿಂದ ಒಬ್ಬರಿಗೆ ಬೇಗ ಹರಡುತ್ತಿವೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ನಾನಾ ಸಮಸ್ಯೆಗಳಿಗೆ ಕಾರಣವಾಗ್ತೀದೆ. ಮನೆಯಲ್ಲಿ ಒಂದು ಮಗುವಿಗೆ ಈ ರೀತಿಯ ಖಾಯಿಲೆಗಳು ಕಂಡು ಬಂದ್ರೆ ವೇಗವಾಗಿ ಎಲ್ಲರಿಗೂ ಹರುಡುತ್ತಿದೆ. ಹಾಗೂ ಕುಡಿಯುವ ನೀರಿನ ಸಮಸ್ಯೆ ಹಿನ್ನಲೆ ಇದರ ಜೊತೆಗೆ ಮತಷ್ಟು ಮಕ್ಕಳ ಆರೋಗ್ಯ ಬಿಗಡಾಯಿಸುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಪೋಷಕರು ಮಕ್ಕಳಿಗೆ ಬೇಸಿಗೆ ಮುಗಿಯುವರೆಗೂ ಕಾದಾರಿಸಿದ ಬಿಸಿ ನೀರು ಕುಡಿಸಿವಂತೆ, ನೀರನ್ನು ಹೆಚ್ಚು ಸೇವನೆ ಹಾಗೂ ಹೊರಗಡೆಯ ಆಹಾರ ಸೇವೆನೆಗೆ ಹೆಚ್ಚು ಅವಕಾಶ ಕೊಡದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಪೋಷಕರಿಗೆ ಸಲಹೆ ನೀಡಿದ್ದಾರೆ. ಜೊತೆಗೆ ಬೇಸಿಗೆಯಲ್ಲಿ ಮಕ್ಕಳಿಗೆ ನಿತ್ರಾಣ, ನಿರ್ಜಲೀಕರಣ, ಅಜೀರ್ಣ, ಸನ್ ಸ್ಟ್ರೋಕ್‌ಗಳು, ಚರ್ಮದಲ್ಲಿ ಅಲರ್ಜಿ ಹಾಗೂ ಅಜೀರ್ಣ ಸೇರಿದಂತೆ ಸಾಕಷ್ಟು ಆರೋಗ್ಯ ಸಮಸ್ಯೆಗಳು ಹಾಗೂ ಮಲಬದ್ಧತೆಯಂತಹ ಸಮಸ್ಯೆ ಕಾಡುತ್ತಿದೆ. ಹೀಗಾಗಿ ಪೋಷಕರಿಗೆ ಎಚ್ಚರಿಕೆಯಿಂದ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಒಟ್ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ಬೆಂಗಳೂರು ಮತ್ತಷ್ಟು ಹಾಟ್ ಆಗಿದೆ. ಹೀಗಾಗಿ ಪೋಷಕರು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡದಂತೆ ಎಚ್ಚರಿಕೆ ವಹಿಸಬೇಕಿದೆ. ದೇಹದ ಉಷ್ಣತೆಯು 40 C ಅಥವಾ ಅದಕ್ಕಿಂತ ಹೆಚ್ಚು ಏರಿದರೆ ಅತ್ಯಂತ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ. ಕೆಲವು ಸಂದರ್ಭಗಳಲ್ಲಿ ಹೀಟ್ ಸ್ಟೋಕ್ ಕೂಡಾ ಸಾಧ್ಯತೆ ಇದ್ದು, ಇದು ಜೀವಕ್ಕೆ ಕುತ್ತು ತರುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ಕೆಲವು ದಿನ ತಾಪಮಾನ ಇಳಿಕೆಯವರೆಗೂ 11 ರಿಂದ 4 ಗಂಟೆಯವರೆಗೂ ಹೆಚ್ಚು ಬಿಸಿಲಿಗೆ ಮೈ ಒಡ್ಡದಂತೆ ಎಚ್ಚರಿಕೆ ವಹಿಸಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ