AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್ ನಿಗಮದಲ್ಲಿ ಅವ್ಯವಹಾರ: ಇಡಿ ಹೆಚ್ಚುವರಿ ಚಾರ್ಜ್‌ಶೀಟ್​​ನಲ್ಲಿ​​​ 14.95 ಕೋಟಿ ರೂ ಅಕ್ರಮ ಬಯಲು

ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನಡೆದ 14.95 ಕೋಟಿ ರೂ ಅವ್ಯವಹಾರ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಆಯೂಬ್ ಸೈಯದ್ ಸೇರಿ ಐವರ ವಿರುದ್ಧ ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ನಕಲಿ ಖಾತೆಗಳು ಮತ್ತು ಎಫ್‌ಡಿಗಳನ್ನು ಸೃಷ್ಟಿಸಿ ಹಣ ವರ್ಗಾವಣೆ ಮಾಡಲಾಗಿದ್ದು, ಪಿಎಂಎಲ್‌ಎ ಕಾಯ್ದೆಯಡಿ ಇಡಿ ತನಿಖೆ ನಡೆಸಿ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ.

ಅಂಬೇಡ್ಕರ್ ನಿಗಮದಲ್ಲಿ ಅವ್ಯವಹಾರ: ಇಡಿ ಹೆಚ್ಚುವರಿ ಚಾರ್ಜ್‌ಶೀಟ್​​ನಲ್ಲಿ​​​ 14.95 ಕೋಟಿ ರೂ ಅಕ್ರಮ ಬಯಲು
ಇ.ಡಿ Image Credit source: x.com/dir_ed
ಪ್ರದೀಪ್​ ಚಿಕ್ಕಾಟಿ
| Edited By: |

Updated on: Oct 14, 2026 | 9:58 PM

Share

ಬೆಂಗಳೂರು, ಅಕ್ಟೋಬರ್​​ 14: ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಬೆಂಗಳೂರಿನ ಇಡಿ ವಿಶೇಷ ನ್ಯಾಯಾಲಯಕ್ಕೆ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಲಾಗಿದ್ದು, ಆಯೂಬ್ ಸಯ್ಯದ್ ಸೇರಿದಂತೆ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ.

ಚಾರ್ಜ್‌ಶೀಟ್​ನಲ್ಲಿ ಏನಿದೆ?

ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ. ನಾಲ್ಕು ನಕಲಿ ಎಫ್​ಡಿ ಖಾತೆಗಳನ್ನು ತೆರೆದು, ಅವುಗಳ ಮೂಲಕ ಹಣವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ. ಬಳಿಕ ಈ ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿ, ನಗದು ರೂಪದಲ್ಲಿ ಹಿಂಪಡೆಯಲಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ; ಲೋಕಾಯುಕ್ತಕ್ಕೆ ಸಿಕ್ತು ದಾಖಲೆ

ಈ ರೀತಿಯಾಗಿ ಒಟ್ಟು 14.95 ಕೋಟಿ ರೂ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಇಡಿ ಅಧಿಕಾರಿಗಳು ಆರೋಪಪಟ್ಟಿಯಲ್ಲಿ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇ.ಡಿ ಟ್ವೀಟ್​

ಈಗಾಗಲೇ 15 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಇನ್ನು ಇದಕ್ಕೂ ಮೊದಲು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಆರೋಪಿಗಳ ವಿರುದ್ಧ ಇಡಿ ಅಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸಿದ್ದರು. ಆರೋಪಿಗಳಿಗೆ ಸೇರಿದ ಸುಮಾರು 6.02 ಕೋಟಿ ರೂ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರಲಾಗಿತ್ತು. ಅಲ್ಲದೆ, 2026ರ ಜುಲೈ 22ರಂದು  ಆರೋಪಿಯೊಬ್ಬರಿಗೆ ಸೇರಿದ 24 ಲಕ್ಷ ರೂ ಮೌಲ್ಯದ ಸ್ಥಿರ ಆಸ್ತಿಯನ್ನು ಜಪ್ತಿ ಮಾಡಲಾಗಿತ್ತು. ಇದೀಗ ಹೆಚ್ಚುವರಿಯಾಗಿ ಐವರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸುವ ಮೂಲಕ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More