Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2023: ಈ ಬಾರಿಯ ʻಏರೋ ಇಂಡಿಯಾ 2023ʼ ದಲ್ಲಿ ಅಮೆರಿಕದ ಅತಿ ದೊಡ್ಡ ನಿಯೋಗ ಭಾಗಿ

ಈ ಬಾರಿಯ ʻಏರೋ ಇಂಡಿಯಾ 2023ʼ ದಲ್ಲಿ ಅಮೆರಿಕದ ಅತ್ಯಾಧುನಿಕ ವಿಮಾನಗಳು ಮಾತ್ರವಲ್ಲದೇ ಅತಿ ದೊಡ್ಡ ನಿಯೋಗವೊಂದು ಭಾಗಿಯಾಗುತ್ತಿದೆ.

Aero India 2023: ಈ ಬಾರಿಯ ʻಏರೋ ಇಂಡಿಯಾ 2023ʼ ದಲ್ಲಿ ಅಮೆರಿಕದ ಅತಿ ದೊಡ್ಡ ನಿಯೋಗ ಭಾಗಿ
ಏರ್ ಶೋ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 10, 2023 | 10:34 PM

ಬೆಂಗಳೂರು: ಇದೇ ಫೆಬ್ರುವರಿ 12ರಿಂದ 17ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ʻಏರೋ ಇಂಡಿಯಾ-2023ʼ (Aero India 2023) ಪ್ರದರ್ಶನದಲ್ಲಿ ಅಮೆರಿಕದ ಸೇನಾ ಪಡೆಯ ವಿವಿಧ ವಿಭಾಗಗಳ ಸಿಬ್ಬಂದಿ ಹಾಗೂ ಅತ್ಯಾಧುನಿಕ ವಿಮಾನಗಳು ʻಏರೋ ಇಂಡಿಯಾ-2023ʼ ರಲ್ಲಿ ಭಾಗಿಯಾಗಲಿವೆ. ಮುಖ್ಯವಾಗಿ ಈ ಬಾರಿ ಏರೋ ಇಂಡಿಯಾದಲ್ಲಿ ಭಾರತದಲ್ಲಿನ ಯು.ಎಸ್‌. ಮಿಷನ್‌ನ ಚಾರ್ಜೆ ಡಿ ಅಫೇರ್ಸ್‌ ಅಂಬಾಸಡರ್‌ ಎಲಿಜಬೆತ್‌ ಜೋನ್ಸ್‌ ಅವರು ಪಾಲ್ಗೊಳ್ಳುತ್ತಿರುವುದು ವಿಶೇಷ.

ಇದನ್ನೂ ಓದಿ: Aero India 2023: ಏರೋ ಇಂಡಿಯಾ ಹಿನ್ನಲೆ ನಗರದ ಈ ರಸ್ತೆಗಳಲ್ಲಿ ಸಂಚಾರ ನಿಷೇಧ; ಪರ್ಯಾಯ ರಸ್ತೆ ಮಾರ್ಗ ಇಲ್ಲಿದೆ ನೋಡಿ

ʻಅಮೆರಿಕ ವೈಮಾನಿಕ ಉದ್ಯಮ ಹಾಗೂ ಸೇನಾಪಡೆಯ ವಿಶ್ವ ದರ್ಜೆಯ ಉಪಕರಣಗಳು, ತರಬೇತಿ, ತಾಕತ್ತು ಹಾಗೂ ಜಂಟಿ ಅಭ್ಯಾಸದ ಸಾಮರ್ಥ್ಯಗಳನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಅಮೆರಿಕದ ಅತಿ ದೊಡ್ಡ ನಿಯೋಗವನ್ನು ಮುನ್ನಡೆಸಲು ನನಗೆ ಹೆಮ್ಮೆಯೆನಿಸುತ್ತಿದೆ. ಭಾರತ ತನ್ನ ಸೇನಾ ಸಾಮರ್ಥ್ಯವನ್ನು ಆಧುನೀಕರಣಗೊಳಿಸುತ್ತಿರುವ ಸಮಯದಲ್ಲಿ ನಾವು ಐಚ್ಛಿಕ ಪಾಲುದಾರರಾಗಲು ಬಯಸುತ್ತೇವೆ. ಉಭಯ ದೇಶಗಳಿಗೂ ಲಾಭದಾಯಕವಾಗುವ ಜಂಟಿ ಉತ್ಪಾದನೆ ಹಾಗೂ ಜಂಟಿ ಅಭಿವೃದ್ಧಿಯ ಪಾಲುದಾರಿಕೆಯತ್ತ ನಾವು ಹೆಚ್ಚಿನ ಗಮನ ನೀಡುತ್ತಿದ್ದೇವೆ. ಸುರಕ್ಷಿತವಾದ, ಸಮೃದ್ಧಿಯಾದ, ಅತ್ಯಂತ ಮುಕ್ತವಾದ ಹಾಗೂ ಸ್ವತಂತ್ರ ʻಇಂಡೋ -ಪೆಸಿಫಿಕ್‌ʼ ಪ್ರಾಂತ್ಯಕ್ಕಾಗಿ ನಾವು ಭಾರತವನ್ನು ಅತ್ಯಂತ ಪ್ರಮುಖ ಪಾಲುದಾರ ದೇಶವಾಗಿ ಪರಿಗಣಿಸುತ್ತೇವೆʼ ಎಂದು ಅಂಬಾಸಡರ್‌ ಜೋನ್ಸ್‌ ತಿಳಿಸಿದ್ದಾರೆ.

ಅಮೆರಿಕದ ಪ್ರಮುಖ ಸೇನಾ ಕಂಪನಿಗಳಾದ, ʻಏರೋ ಮೆಟಲ್ಸ್‌ ಅಲಯನ್ಸ್‌ʼ , ʻಆಸ್ಟ್ರೋನಾಟಿಕ್ಸ್‌ ಕಾರ್ಪೋರೇಷನ್‌ ಆಫ್‌ ಅಮೆರಿಕʼ, ಬೋಯಿಂಗ್‌, ಜಿಇ ಏರೋಸ್ಪೇಸ್‌, ಜನರಲ್‌ ಅಟಾಮಿಕ್ಸ್‌ ಏರೋನಾಟಿಕಲ್‌ ಸಿಸ್ಟಮ್ಸ್‌ ಇಂಕ್‌ʼ, ಹೈ ಟೆಕ್‌ ಇಂಪೋರ್ಟ್‌ ಎಕ್ಸ್‌ಪೋರ್ಟ್‌ ಕಾರ್ಪೋರೇಷನ್‌, ಜೋನಲ್‌ ಲ್ಯಾಬೋರೆಟರೀಸ್‌, ಲಾಕ್‌ಹೀಡ್‌ ಮಾರ್ಟಿನ್‌, ಪ್ರಾಟ್‌ ಅಂಡ್‌ ವೈಟ್ನೆ ಮತ್ತು ಟಿಡಬ್ಲು ಮೆಟಲ್ಸ್‌ ಇವುಗಳ ವಿಮಾನಗಳು ಏರೋ ಇಂಡಿಯಾ 2023ರ ʻಯುಎಸ್‌ಎ ಪಾರ್ಟನರ್‌ಶಿಪ್‌ ಪೆವಿಲಿಯನ್‌ʼನ ಪ್ರದರ್ಶನದಲ್ಲಿ ಭಾಗಿಯಾಗಲಿವೆ. ‌

ಭಾರತದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ದ್ವಿಪಕ್ಷೀಯ ಬೆಂಬಲ ನೀಡುವ ದಿಸೆಯಲ್ಲಿ ಅಮೆರಿಕದ ವಾಯುಪಡೆಯ ಏಳು ಸದಸ್ಯರ ಬ್ಯಾಂಡ್‌ ʻಫೈನಲ್‌ ಅಪ್ರೋಚ್‌ʼ ಫೆಬ್ರುವರಿ 16ರಂದು ಏರೋ ಇಂಡಿಯಾದಲ್ಲಿ ಸಾರ್ವಜನಿಕರಿಗಾಗಿ ಹಾಗೂ ಇಡೀ ವಾರ ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಸಂಗೀತ ಕಾರ್ಯಕ್ರಮ ನೀಡಲಿದೆ.

ʻಏರೋ ಇಂಡಿಯಾದʼ ದಲ್ಲಿ ಅಮೆರಿಕದ ತೊಡಗಿಕೊಳ್ಳುವಿಕೆ ಅಮೆರಿಕ-ಭಾರತ ಸೇನಾ ಪಾಲುದಾರಿಕೆಯನ್ನು ಬಲಪಡಿಸುವುದಲ್ಲದೇ ಇಂಡೋ ಪೆಸಿಫಿಕ್‌ ಭಾಗದ ಸುರಕ್ಷತೆಗಾಗಿ ಕೈಜೋಡಿಸಿರುವ ಉಭಯ ದೇಶಗಳ ಬದ್ಧತೆಯನ್ನು ಮತ್ತಷ್ಟು ಪ್ರಚುರಪಡಿಸುತ್ತದೆ. ಈ ಪ್ರದರ್ಶನ ಅಮೆರಿಕ ಸೇನೆಯ ಯುದ್ಧ ಸಾಮರ್ಥ್ಯಕ್ಕೆ ಕನ್ನಡಿ ಹಿಡಿದು, ಜಂಟಿ ಸಮರಾಭ್ಯಾಸದ ಸಾಧ್ಯತೆಗಳಿಗೆ ಉತ್ತೇಜನ ನೀಡುತ್ತದೆ. ಅಧ್ಯಕ್ಷ ಜೊ ಬೈಡನ್‌ ಅವರು ಹೇಳಿರುವಂತೆ, ʻಮುಂಬರುವ ದಶಕಗಳಲ್ಲಿ ಸ್ವತಂತ್ರ ಹಾಗೂ ಮುಕ್ತ ಇಂಡೋ ಪೆಸಿಫಿಕ್‌ ಭಾಗದ ಸಮೃದ್ಧಿಯನ್ನು ಅವಲಂಬಿಸಿ ನಮ್ಮ ಉಭಯ ದೇಶಗಳ ಭವಿಷ್ಯ, ಅಷ್ಟೇ ಅಲ್ಲ ಇಡೀ ಜಗತ್ತಿನ ಭವಿಷ್ಯ ನಿಂತಿರುತ್ತದೆ.

ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ