ನಾಳೆ ಬೆಂಗಳೂರಿಗೆ ಅಮಿತ್ ಶಾ: ನಗರವಾಸಗಿಗಳಿಗೆ ಟ್ರಾಫಿಕ್ ಬಿಸಿ, ಪರ್ಯಾಯ ಮಾರ್ಗದ ವ್ಯವಸ್ಥೆ ಹೀಗಿದೆ

ಕರ್ನಾಟಕ ಚುನಾವಣೆ ಹಿನ್ನೆಲೆ ಮೇಲಿಂದ ಮೇಲೆ ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ನಾಳೆ (ಮಾರ್ಚ್ 26) ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಪರಿಣಾಮ ಬೆಂಗಳೂರು ಹೃದಯ ಭಾಗದಲ್ಲಿನ ಜನರಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ.

ನಾಳೆ ಬೆಂಗಳೂರಿಗೆ ಅಮಿತ್ ಶಾ: ನಗರವಾಸಗಿಗಳಿಗೆ ಟ್ರಾಫಿಕ್ ಬಿಸಿ, ಪರ್ಯಾಯ ಮಾರ್ಗದ ವ್ಯವಸ್ಥೆ ಹೀಗಿದೆ
ಅಮಿತ್ ಶಾ
Follow us
Rakesh Nayak Manchi
|

Updated on:Mar 25, 2023 | 7:40 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಏರಲು ಬಿಜೆಪಿ ಕೇಂದ್ರ ನಾಯಕರು ಸಾಲು ಸಾಲಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ನರೇಂದ್ರ ಮೋದಿ (Narendra Modi) ರಾಜ್ಯಕ್ಕೆ ಭೇಟಿ ನೀಡಿದರೆ, ನಾಳೆ (ಮಾರ್ಚ್ 26) ಬಿಜೆಪಿ ಚಾಣಕ್ಯ ಎಂದೇ ಖ್ಯಾತಿ ಪಡೆದ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಪರಿಣಾಮ ನಗರದ ಹೃದಯ ಭಾಗದಲ್ಲಿ ಸಾರ್ವಜನಿಕರಿಗೆ ಟ್ರಾಫಿಕ್ (Bengaluru Traffic) ಬಿಸಿ ತಟ್ಟಲಿದ್ದು, ಸುಗಮ ಸಂಚಾರಕ್ಕೆ ಪರಿಯಾದ ಮಾರ್ಗ ಕಲ್ಪಿಸಲಾಗಿದೆ.

ಅಮಿತ್ ಶಾ ಭೇಟಿ ಹಿನ್ನೆಲೆ ಬೆಂಗಳೂರಿನ ಹೃದಯ ಭಾಗದಲ್ಲಿ ತಟ್ಟಲಿದೆ ಟ್ರಾಫಿಕ್ ಬಿಸಿ ತಟ್ಟಲಿದ್ದು, ಸುಗಮ ಸಂಚಾರಕ್ಕೆ ಸಂಚಾರಿ ಪೊಲೀಸರು ಪರ್ಯಾಯ ಮಾರ್ಗದ ವ್ಯವಸ್ಥೆ ಕಲ್ಪಿಸಿದ್ದಾರೆ. ಬಳ್ಳಾರಿ ರಸ್ತೆ, ಹೆಬ್ಬಾಳ ಸರ್ಕಲ್, ಮೇಖ್ರಿ ಸರ್ಕಲ್, ಕಾವೇರಿ ಜಂಕ್ಷನ್, ರಾಜಭವನ ರಸ್ತೆ, ಇನ್ ಫೆಂಟ್ರಿ ರಸ್ತೆ, ನೃಪತುಂಗ ರಸ್ತೆ, ಕ್ವೀನ್ಸ್ ರಸ್ತೆ, ಕೆ.ಆರ್ ಸರ್ಕಲ್, ಹಡ್ಸನ್ ಸರ್ಕಲ್, ಹಳೆ ಏರ್ಪೋರ್ಟ್ ರಸ್ತೆ, ಟ್ರಿನಿಟಿ ಸರ್ಕಲ್ ಹಾಗೂ ಟೌನ್ ಹಾಲ್ ಸುತ್ತಮುತ್ತ ಪರ್ಯಾಯ ಮಾರ್ಗ ಬಳಸುವಂತೆ ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ.

ಕ್ರೇನ್ ಮೂಲಕ ಪ್ರತಿಮೆ ಅಳವಡಿಕೆ

ನಾಳೆ ವಿಧಾನಸೌಧ ಮುಂಭಾಗದಲ್ಲಿ ನಾಡಪ್ರಭು ಕೆಂಪೇಗೌಡ ಮತ್ತು ಬಸವೇಶ್ವರರ ಪ್ರತಿಮೆ ಅನಾವರಣ ಹಿನ್ನೆಲೆ ಕ್ರೇನ್ ಮೂಲಕ ಕೆಂಪೇಗೌಡ, ಬಸವಣ್ಣ ಪ್ರತಿಮೆ ಅಳವಡಿಕೆ ಕಾರ್ಯ ನಡೆಯಿತು. ಈ ಪ್ರತಿಮೆಗಳನ್ನೇ ನಾಳೆ ಅಮಿತ್ ಶಾ ಅವರು ಲೋಕಾರ್ಪಣೆ ಮಾಡಲಿದ್ದಾರೆ.

ಇದನ್ನೂ ಓದಿ: ಬೀದರ್: ನಾಳೆ ಸರ್ದಾರ್ ವಲ್ಲಭಬಾಯ್ ಪಟೇಲ್ ಪ್ರತಿಮೆ ಉದ್ಘಾಟಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

ಮಾರ್ಚ್ 23ರಂದು ರಾತ್ರಿ ಬೆಂಗಳೂರಿಗೆ ಭೇಟಿ ನೀಡಿದ್ದ ಅಮಿತ್ ಶಾ ಅವರು ಇದೀಗ ಮತ್ತೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇಲ್ಲಿ ಕೆಂಪೇಗೌಡ ಹಾಗೂ ಬಸವರೇಶ್ವರರ ಪ್ರತಿಮೆ ಅನಾವರಣ ಮಾಡಿದ ನಂತರ ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗೊರ್ಟಾ ಗ್ರಾಮದಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ರಾಜ್ಯ ಬಿಜೆಪಿ ಯುವ ಮೋರ್ಚಾ ಸಂಕಲ್ಪದಿಂದ ಶುರುವಾಗಿರುವ ಈ ಹುತಾತ್ಮ ಸ್ಮಾರಕವನ್ನ 2014 ಸೆಪ್ಟಂಬರ್ 17 ರಂದು ಆಗಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೂಮಿ ಪೂಜೆ ನೇರವೇರಿಸಿದ್ದರು. ಇದೀಗ ಲೋಕಾರ್ಪಣೆಯನ್ನು ಇವರೇ ಮಾಡುತ್ತಿದ್ದಾರೆ.

ಗೊರ್ಟಾ ಗ್ರಾಮದ ಹೊರವಲಯದಲ್ಲಿರುವ 2 ಎಕರೆ 30 ಗುಂಟೆ ಪ್ರದೇಶದಲ್ಲಿ 30 ಅಡಿ ಉದ್ದದ ಉತಾತ್ಮರ ಸ್ಮಾಕರ, 103 ಅಡಿ ಉದ್ದದ ಧ್ವಜಸ್ಥಂಬ, ಧ್ವಜಸ್ಥಂಭದ ಮೇಲೆ 30 ಅಡಿ (600 ಚದರ್ ಅಡಿ) ರಾಷ್ಟ್ರಧ್ವಜ ಹಾರಾಡಲಿದೆ. ಇನ್ನು ಬೆಂಗಳೂರಿನ ಶಂಕರ್ ಶಿಲ್ಪಿ ಶಾಲೆಯಲ್ಲಿ ಕೆತ್ತಸಿರುವ 11 ಅಡಿ ಎತ್ತರವಿರುವ ಸರ್ದಾರ ವಲ್ಲಭವಾಯ್ ಪಟೇಲ್ ಅವರ ಮೂರ್ತಿಯನ್ನ ಸ್ಥಾಪಿಸಿಲಾಗಿದೆ

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 pm, Sat, 25 March 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್