Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಆಗಮನ; ಖಾಸಗಿ ಹೋಟೆಲ್ನಲ್ಲಿ ಸಭೆ

ನಾಳೆ ಮಧ್ಯಾಹ್ನ ಸಿಎಂ ಅಧಿಕೃತ ನಿವಾಸದಲ್ಲಿ ಭೋಜನ ನಂತರ ರಾಜ್ಯ ಬಿಜೆಪಿ ಕೋರ್ಕಮಿಟಿ ಸದಸ್ಯರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧತೆಯ ಭಾಗವಾಗಿ ಚರ್ಚಿಸಲಿದ್ದಾರೆ.

ಇಂದು ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಆಗಮನ; ಖಾಸಗಿ ಹೋಟೆಲ್ನಲ್ಲಿ ಸಭೆ
ಕೇಂದ್ರ ಗೃಹ ಸಚಿವ ಅಮಿತ್ ಶಾ
Follow us
TV9 Web
| Updated By: ಆಯೇಷಾ ಬಾನು

Updated on: May 02, 2022 | 11:57 AM

ಬೆಂಗಳೂರು: ಇಂದು ರಾತ್ರಿ ಕೇಂದ್ರ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಲಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಶಾ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಖಾಸಗಿ ಹೋಟೆಲ್ನಲ್ಲೇ ಸಭೆ ನಡೆಸಲಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಿಂದ ಹೋಟೆಲ್ಗೆ ಸಭೆ ಶಿಫ್ಟ್ ಆಗಿದೆ. ನಾಳೆ ಮಧ್ಯಾಹ್ನ ಸಿಎಂ ಅಧಿಕೃತ ನಿವಾಸದಲ್ಲಿ ಭೋಜನ ನಂತರ ರಾಜ್ಯ ಬಿಜೆಪಿ ಕೋರ್ಕಮಿಟಿ ಸದಸ್ಯರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧತೆಯ ಭಾಗವಾಗಿ ಚರ್ಚಿಸಲಿದ್ದಾರೆ.

ಇನ್ನು ಮತ್ತೊಂದು ಕಡೆ ದೆಹಲಿಯಿಂದ ಇಂದು ಸಂಜೆ ಬೆಂಗಳೂರಿಗೆ ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ. ಹಾಗೂ ರೇಸ್ಕೋರ್ಸ್ ರಸ್ತೆ ಹೋಟೆಲ್ನಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ರಾಜಕೀಯದ ಸ್ಥಿತಿ ತಿಳಿಯಲು ಅಮಿತ್ ಶಾ ಬರುತ್ತಿದ್ದಾರೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಪ್ರತಿಕ್ರಿಯೆ ನೀಡಿದ ಬಿ.ಎಸ್. ಯಡಿಯೂರಪ್ಪ, ಇಂದು ಸಂಜೆ ಕೇಂದ್ರ ಸಚಿವ ಅಮಿತ್ ಶಾರನ್ನ ಭೇಟಿಯಾಗುವೆ. ರಾಜ್ಯ ರಾಜಕೀಯದ ಸ್ಥಿತಿ ತಿಳಿಯಲು ಅಮಿತ್ ಶಾ ಬರುತ್ತಿದ್ದಾರೆ. ಚುನಾವಣಾ ವರ್ಷ ಹಿನ್ನೆಲೆಯಲ್ಲಿ ರಾಜ್ಯದ ಬಗ್ಗೆ ನರೇಂದ್ರ ಮೋದಿ, ಅಮಿತ್ ಶಾ ಹೆಚ್ಚು ಗಮನ ನೀಡಲಿದ್ದಾರೆ. ಮುಂದಿನ ಎಲೆಕ್ಷನ್ನಲ್ಲಿ 150 ಸ್ಥಾನ ಗೆಲ್ಲಲು ಗುರಿ ಇಟ್ಟಿದ್ದೇವೆ. ರಾಜ್ಯ ನಾಯಕರ ಜೊತೆ ಶಾ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಬಿಎಸ್ವೈ, ಕರ್ನಾಟಕದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಇಲ್ಲ. ಸಿಎಂ ಬೊಮ್ಮಾಯಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನನ್ನ ಪ್ರಕಾರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದರು.

ಇನ್ನಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ