ಅಮಿತ್ ಶಾ ಭೇಟಿ; ಬೆಂಗಳೂರಿನ ಹಲವೆಡೆ ಮಾರ್ಗ ಬದಲಾವಣೆ, ಈ ಪರ್ಯಾಯ ರಸ್ತೆಗಳ ಬಳಕೆ ಮಾಡಿ

ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗ ಬಳಸಲು ಮನವಿ ಮಾಡಲಾಗಿದೆ.

ಅಮಿತ್ ಶಾ ಭೇಟಿ; ಬೆಂಗಳೂರಿನ ಹಲವೆಡೆ ಮಾರ್ಗ ಬದಲಾವಣೆ, ಈ ಪರ್ಯಾಯ ರಸ್ತೆಗಳ ಬಳಕೆ ಮಾಡಿ
ಬೆಂಗಳೂರು ಟ್ರಾಫಿಕ್ (ಸಂಗ್ರಹ ಚಿತ್ರ)
Follow us
ಆಯೇಷಾ ಬಾನು
|

Updated on:Feb 23, 2023 | 10:27 AM

ಬೆಂಗಳೂರು: ಚುನಾವಣಾ ಚಾಣಕ್ಯ ಅಮಿತ್ ಶಾ (Amit Shah) ಅವರು ಇಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆ ಟ್ರಾಫಿಕ್ ಸಮಸ್ಯೆ(Bengaluru Traffic) ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರು ಪೊಲೀಸರು ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ದೆಹಲಿಯಿಂದ ಮಧ್ಯಾಹ್ನ 12.50ಕ್ಕೆ ಹುಬ್ಬಳ್ಳಿ ಏರ್‌ಪೋರ್ಟ್‌ಗೆ ಬಂದಿಳಿದು ನಂತರ ಹೆಲಿಕಾಪ್ಟರ್‌ನಲ್ಲಿ ಹುಬ್ಬಳ್ಳಿಯಿಂದ ಸಂಡೂರಿಗೆ ಪ್ರಯಾಣಿಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಬಳ್ಳಾರಿ ಜಿಲ್ಲೆ ಸಂಡೂರಿನ ಸಮಾವೇಶ ಸ್ಥಳಕ್ಕೆ ಆಗಮಿಸಿ ಮಧ್ಯಾಹ್ನ 1.30ರಿಂದ 2.30ರವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಿ ಬಳಿಕ ಮಧ್ಯಾಹ್ನ 2.30ರಿಂದ 3.45ರವರೆಗೆ ಬಳ್ಳಾರಿ ಜಿಲ್ಲಾ ಬಿಜೆಪಿ ಮುಖಂಡರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 3.55ಕ್ಕೆ ಸಂಡೂರಿನಿಂದ ಬೆಂಗಳೂರಿನ ಜಕ್ಕೂರು ಹೆಲಿಪ್ಯಾಡ್‌ಗೆ ಬಂದಿಳಿದು ಸಂಜೆ 5.10ಕ್ಕೆ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್‌ಗೆ ಆಗಮಿಸಲಿದ್ದಾರೆ. ಸಂಜೆ 6-7 ಗಂಟೆಯವರೆಗೆ ಖಾಸಗಿ ಹೋಟೆಲ್‌ನಲ್ಲಿ ಅಮಿತ್ ಶಾ ಸಂವಾದ ಇರಲಿದೆ. ರಾತ್ರಿ 8 ಗಂಟೆಗೆ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಶಾಸಕರು, MLCಗಳ ಸಭೆ ನಡೆಯಲಿದೆ. ರಾತ್ರಿ ರೇಸ್‌ ಕೋರ್ಸ್ ರಸ್ತೆಯ ಹೋಟೆಲ್‌ನಲ್ಲಿ ಅಮಿತ್‌ ಶಾ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ಅಮಿತ್ ಶಾ ವಾಪಸ್ ಆಗಲಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಇದ್ದಕ್ಕಿದ್ದಂತೆ ಶೇ 100ರ ರಷ್ಟು ಹೆಚ್ಚಾದ ಟೋಲ್ ದರ, ಸವಾರರು ಗರಂ

ಇನ್ನು ಪಕ್ಷದ ಮೂಲಗಳ ಪ್ರಕಾರ, ಚುನಾವಣಾ ಸಿದ್ಧತೆಗಳ ಕುರಿತು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ಹಿರಿಯ ನಾಯಕರ ಜೊತೆ ಅಮಿತ್ ಶಾ ಸರಣಿ ಸಭೆಗಳನ್ನು ನಡೆಸಲಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಕೂಡ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮಿತ್​​ ಶಾ ಆಗಮನ ಹಿನ್ನೆಲೆ ಬೆಂಗಳೂರಿನಲ್ಲಿ ಕೆಲ ಕಡೆ ಮಾರ್ಗ ಬದಲಾವಣೆ

ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗ ಬಳಸಲು ಮನವಿ ಮಾಡಲಾಗಿದೆ. ಇನ್ನು ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್, ಕಾವೇರಿ ಥಿಯೇಟರ್ ಜಂಕ್ಷನ್, ರೇಸ್ ಕೋರ್ಸ್, ಟೌನ್ ಹಾಲ್, ತಾಜ್ ವೆಸ್ಟ್ ಎಂಡ್, ಲಾಲ್ ಬಾಗ್ ರಸ್ತೆ, ಮಿನರ್ವ ಸರ್ಕಲ್, ಜೆಸಿ ರಸ್ತೆ, ಎನ್ ಆರ್ ಸರ್ಕಲ್, ಮೈಸೂರು ಬ್ಯಾಂಕ್, ಪ್ಯಾಲೇಸ್ ರಸ್ತೆ, ಸಿಐಡಿ ಜಂಕ್ಷನ್, ಬಸವೇಶ್ವರ ಜಂಕ್ಷನ್, ಅಲಿ ಅಸ್ಕರ್ ರಸ್ತೆ, ಇನ್ ಪ್ಯಾಂಟ್ರಿ ರಸ್ತೆ, ಕಾಫಿ ಬೋರ್ಡ್ ಜಂಕ್ಷನ್, ಮಣಿಪಾಲ್ ಜಂಕ್ಷನ್, ಎಂ.ಜಿ ರಸ್ತೆ, ಟ್ರಿನಿಟಿ ಸರ್ಕಲ್, ಇಂದಿರಾನಗರ 100 ಅಡಿ ರಸ್ತೆ, ಕಮಾಂಡ್ ಹಾಸ್ಪಿಟಲ್, ದೊಮ್ಮಲೂರು ಹೆಚ್ ಎಎಲ್ ಏರ್​ಪೋರ್ಟ್ ರಸ್ತೆಯಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ. ವಾಹನ ಸವಾರರಿಗೆ ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:26 am, Thu, 23 February 23

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್