ಇಂದು ಕರ್ನಾಟಕಕ್ಕೆ ಅಮಿತ್​ ಶಾ: ಇಲ್ಲಿದೆ ಬೀದರ್, ರಾಯಚೂರು, ಬೆಂಗಳೂರು ಪ್ರವಾಸದ ಸಂಪೂರ್ಣ ವೇಳಾಪಟ್ಟಿ

ಇಂದು ಬೀದರ್, ರಾಯಚೂರು, ಬೆಂಗಳೂರಿನಲ್ಲಿ ಅಮಿತ್ ಶಾ ಪ್ರವಾಸ ಕೈಗೊಂಡಿದ್ದಾರೆ. ಅವರ ಪ್ರವಾಸದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ಇಂದು ಕರ್ನಾಟಕಕ್ಕೆ ಅಮಿತ್​ ಶಾ: ಇಲ್ಲಿದೆ ಬೀದರ್, ರಾಯಚೂರು, ಬೆಂಗಳೂರು ಪ್ರವಾಸದ ಸಂಪೂರ್ಣ  ವೇಳಾಪಟ್ಟಿ
ಅಮಿತ್​ ಶಾ
Follow us
ಆಯೇಷಾ ಬಾನು
|

Updated on:Mar 26, 2023 | 7:17 AM

ಬೆಂಗಳೂರು: ಏಪ್ರಿಲ್ ತಿಂಗಳ ಅಂತ್ಯದಲ್ಲಿ ಅಥವಾ ಮೇ ತಿಂಗಳ ಆರಂಭದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Elections 2023) ನಡೆಯುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆ ಸಮಯ ಸಮೀಪಿಸುತ್ತಿದ್ದಂತೆ ಕೇಂದ್ರ ನಾಯಕರು ಸಂಚಾರ, ಪ್ರಚಾರ ಜೋರು ಮಾಡಿದ್ದಾರೆ. ಮಾರ್ಚ್ 25ರಂದು ನರೇಂದ್ರ ಮೋದಿ(Narendra Modi) ರಾಜ್ಯಕ್ಕೆ ಭೇಟಿ ಕೊಟ್ಟಿದ್ದರು. ಇಂದು ಚುನಾವಣಾ ಚಾಣಕ್ಯ ಅಮಿತ್ ಶಾ(Amit Shah) ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಹಿಂದಷ್ಟೇ ರಾಜ್ಯಕ್ಕೆ ಬಂದು ಹೋಗಿದ್ದ ಶಾ ಇಂದು ಬೀದರ್, ರಾಯಚೂರು, ಬೆಂಗಳೂರಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅವರ ಪ್ರವಾಸದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ಬೀದರ್​ನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಭಾಗಿ

ಮೊದಲಿಗೆ ಬೀದರ್​ನಲ್ಲಿ ಅಮಿತ್ ಶಾ ವಿವಿಧ ಕಾರ್ಯಕ್ರಮದಲ್ಲಿ‌ ಭಾಗಿಯಾಗಲಿದ್ದಾರೆ. ಮುಂಜಾನೆ 10 ಗಂಟೆಗೆ ಬೀದರ್ ಏರ್ ಬೇಸ್ ನಿಂದ ಗೋರಟಾ ಗ್ರಾಮಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಆಗಮಿಸಿ, ಇನ್ನೂರು ಕನ್ನಡಿಗರ ಹತ್ಯೆಯಾದ ಸ್ಥಳದಲ್ಲಿ ಗ್ರಾಮಸ್ಥರ ಜೊತೆಗೆ ಅರ್ಧ ಗಂಟೆ ಸಂವಾದ ನಡೆಸಲಿದ್ದಾರೆ. ನಂತರ ಗೋರಟಾ ಗ್ರಾಮದ ಕೂಗಳೆತೆ ದೂರದಲ್ಲಿರುವ ಹುತಾತ್ಮರ ‌ಸ್ಮಾರಕ 103 ಅಡಿ ಎತ್ತರದ ಧ್ವಜ ಸ್ತಂಭ, ಸರ್ದಾರ್ ವಲ್ಲಭಭಾಯ್ ಪಟೇಲ್ ರ 11 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಲಿದ್ದಾರೆ. ಪ್ರತಿಮೆ ಲೋಕಾರ್ಪಣೆ ‌ಬಳಿಕ ಕೇಶವ ಕಾರ್ಯ ಸಂವರ್ಧನ ಸಮೀತಿಯವರು ಆಯೋಜಿರುವ ವೇದಿಕೆ ಕಾರ್ಯಕ್ರಮದಲ್ಲಿ‌ ಭಾಗಿಯಾಗಲಿದ್ದಾರೆ. ಬೃಹತ್ ವೇದಿಕೆ ಕಾರ್ಯಕ್ರಮಕ್ಕೆ ಬೀದರ್, ತೆಲಂಗಾಣ, ಮಹಾರಾಷ್ಟ್ರ, ಕಲ್ಬುರ್ಗಿ ‌ಜಿಲ್ಲೆಯಿಂದ ಜನರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಇಂದು ಬೆಂಗಳೂರಿಗೆ ಅಮಿತ್ ಶಾ, ಟ್ರಾಫಿಕ್ ಬಿಸಿ: ಈ ರಸ್ತೆಗಳನ್ನು ಬಿಟ್ಟು ಪರ್ಯಾಯ ಮಾರ್ಗ ಬಳಸಲು ವಾಹನ ಸವಾರರಿಗೆ ಸೂಚನೆ

ಅಮಿತ್ ಶಾ ವೇಳಾಪಟ್ಟಿ ಹೀಗಿದೆ

ಬೆಳಗ್ಗೆ 10.30ಕ್ಕೆ ಗೊರಟಾ ಗ್ರಾಮಕ್ಕೆ ಆಗಮಿಸಲಿರುವ ಕೇಂದ್ರ ಸಚಿವ ಶಾ, ಗೊರಟಾ ಹುತಾತ್ಮ ಸ್ಮಾರಕ, ಪಟೇಲ್​ ಸ್ಮಾರಕ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1.45ಕ್ಕೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಶಾ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಬೆಂಗಳೂರಿಗೆ ಆಗಮಿಸಿ ರೇಸ್​ಕೋರ್ಸ್​ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ನಡೆಯಲಿರುವ ಗುಜರಾತ್​ ಸಮಾಜದ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 6.30ಕ್ಕೆ ವಿಧಾನಸೌಧದ ಮುಂದೆ ಬಸವೇಶ್ವರ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ನಂತರ ಬೆಂಗಳೂರು ಹಬ್ಬ ಉದ್ಘಾಟನೆ ಮಾಡಲಿದ್ದಾರೆ. ರಾತ್ರಿ 8.30ಕ್ಕೆ ಖಾಸಗಿ ಹೋಟೆಲ್​ನಲ್ಲಿ ರಾಜ್ಯ BJP ಕೋರ್ ಕಮಿಟಿ ಸಭೆ ನಡೆಯಲಿದ್ದು ಇಂದು ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಅಮಿತ್ ಶಾ ವಾಸ್ತವ್ಯ ಹೂಡಿ ನಾಳೆ ಬೆಳಗ್ಗೆ 9 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:14 am, Sun, 26 March 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ