Bengaluru Traffic: ಇಂದು ಬೆಂಗಳೂರಿಗೆ ಅಮಿತ್ ಶಾ ಭೇಟಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಪ್ರಚಾರ ಮತ್ತು ಪಕ್ಷ ಸಂಘಟನೆ ದೃಷ್ಟಿಯಿಂದ ಬಿಜೆಪಿ ಕೇಂದ್ರ ನಾಯಕರು ಕರ್ನಾಟಕ ಪ್ರವಾಸ ಮಾಡುತ್ತಿದ್ದಾರೆ. ಇಂದು (ಏ.21) ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ನಿಟ್ಟಿನಲ್ಲಿ ನಗರದ ಕೆಲವೊಂದು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Election 2023) ದಿನಗಣನೆ ಆರಂಭವಾಗಿದ್ದು ಪ್ರಚಾರ ಮತ್ತು ಪಕ್ಷ ಸಂಘಟನೆ ದೃಷ್ಟಿಯಿಂದ ಬಿಜೆಪಿ (BJP) ಕೇಂದ್ರ ನಾಯಕರು ಕರ್ನಾಟಕ ಪ್ರವಾಸ ಮಾಡುತ್ತಿದ್ದಾರೆ. ಇಂದು (ಏ.21) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬೆಂಗಳೂರಿಗೆ (Bengaluru) ಆಗಮಿಸಲಿದ್ದಾರೆ. ಅವರಿಂದು ದೇವನಹಳ್ಳಿಯಲ್ಲಿ ಬೃಹತ್ ರೋಡ್ಶೋ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ನಗರದ ಕೆಲವೊಂದು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ (Traffic Restrictions). ನೀವು ಈ ಕೆಳಗಿನ ರಸ್ತೆಗಳಲ್ಲಿ ಪ್ರಯಾಣಿಸಲು ಯೋಜಿಸಿದ್ದರೇ ಪರ್ಯಾಯ ರಸ್ತೆ ಹುಡುಕುವುದು ಉತ್ತಮ.
ಅಮಿತ್ ಶಾ ಆಗಮನ ಹಿನ್ನೆಲೆ ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ಅಲರ್ಟ್ ಘೋಷಿಸಿದ್ದು, “ವಿಐಪಿ ಸಂಚಾರದಿಂದಾಗಿ ಈ ಮುಂದಿನ ರಸ್ತೆಗಳನ್ನು ಅಥವಾ ಜಂಕ್ಷನ್ಗಳನ್ನು ತಪ್ಪಿಸಿ ಪರ್ಯಾಯ ರಸ್ತೆಯಲ್ಲಿ ಸಂಚರಿಸಿ ಎಂದು ಸೂಚನೆ ನೀಡಿದ್ದಾರೆ.
ಈ ರಸ್ತೆಗಳು ಬಂದ್
ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ, ಯಲಹಂಕ, ಬಳ್ಳಾರಿ ರಸ್ತೆ, ಹೆಬ್ಬಾಳ ಜಂಕ್ಷನ್, ಮೇಕ್ರಿ ಸರ್ಕಲ್ ಈ ರಸ್ತೆಗಳಲ್ಲಿ ಸಂಚಾರಕ್ಕೆ ನಿಷೇಧಿಸಲಾಗಿದ್ದು, ಪ್ರಯಾಣಿಕರು ಪರ್ಯಾಯ ರಸ್ತೆಯಲ್ಲಿ ಸಂಚರಿಸಿ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಉತ್ತರ ಮತ್ತು ಪೂರ್ವ ಬೆಂಗಳೂರಿನಲ್ಲಿ ಜನವರಿ-ಮಾರ್ಚ್ ತಿಂಗಳಲ್ಲಿ ಶೇ 24ರಷ್ಟು ಏರಿಕೆಯಾಗಿದೆ 2BHK ಫ್ಲಾಟ್ನ ಬಾಡಿಗೆ
ಅಮಿತ್ ಶಾ ಅವರು ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮೇ 10 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಸಿದ್ಧತೆಗಳ ಬಗ್ಗೆಯೂ ಇವರು ಇಂದು ಪರಿಶೀಲನೆ ನಡೆಸಲಿದ್ದಾರೆ.
ಇಂದಿನ ಅಮಿತ್ ಶಾ ರಾಜ್ಯ ಪ್ರವಾಸ ವೇಳಾಪಟ್ಟಿ
ಚುನಾವಣಾ ಚಾಣಕ್ಯ ಅಮಿತ್ ಶಾ ಅವರು ಇಂದು ಮಧ್ಯಾಹ್ನ 3:15ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3.45ಕ್ಕೆ ದೇವನಹಳ್ಳಿಯಲ್ಲಿ ಅಮಿತ್ ಶಾ ಅವರ ರೋಡ್ ಶೋ ನಡೆಯಲಿದೆ. ನಂತರ ಸಂಜೆ 6 ಗಂಟೆಗೆ ರೇಸ್ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ಗೆ ಬರಲಿದ್ದು, ರಾತ್ರಿ 7.45ರಿಂದ 9ರವರೆಗೆ ರಾಜ್ಯ ಬಿಜೆಪಿ ನಾಯಕರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ರಾತ್ರಿ ರೇಸ್ಕೋರ್ಸ್ ರಸ್ತೆಯ ಹೋಟೆಲ್ನಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ನಾಳೆ (ಏ.22) ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ದೆಹಲಿಗೆ ವಾಪಸಾಗಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:50 pm, Fri, 21 April 23