Bengaluru Traffic: ಇಂದು ಬೆಂಗಳೂರಿಗೆ ಅಮಿತ್ ಶಾ ಭೇಟಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

|

Updated on: Apr 21, 2023 | 2:02 PM

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಪ್ರಚಾರ ಮತ್ತು ಪಕ್ಷ ಸಂಘಟನೆ ದೃಷ್ಟಿಯಿಂದ ಬಿಜೆಪಿ ಕೇಂದ್ರ ನಾಯಕರು ಕರ್ನಾಟಕ ಪ್ರವಾಸ ಮಾಡುತ್ತಿದ್ದಾರೆ. ಇಂದು (ಏ.21) ಕೇಂದ್ರ ಗೃಹ ಸಚಿವ ಅಮಿತ್​ ಶಾ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ನಿಟ್ಟಿನಲ್ಲಿ ನಗರದ ಕೆಲವೊಂದು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

Bengaluru Traffic: ಇಂದು ಬೆಂಗಳೂರಿಗೆ ಅಮಿತ್ ಶಾ ಭೇಟಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
ಬೆಂಗಳೂರು ಸಂಚಾರಿ ಪೊಲೀಸ್​
Follow us on

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Election 2023) ದಿನಗಣನೆ ಆರಂಭವಾಗಿದ್ದು ಪ್ರಚಾರ ಮತ್ತು ಪಕ್ಷ ಸಂಘಟನೆ ದೃಷ್ಟಿಯಿಂದ ಬಿಜೆಪಿ (BJP) ಕೇಂದ್ರ ನಾಯಕರು ಕರ್ನಾಟಕ ಪ್ರವಾಸ ಮಾಡುತ್ತಿದ್ದಾರೆ. ಇಂದು (ಏ.21) ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಬೆಂಗಳೂರಿಗೆ (Bengaluru) ಆಗಮಿಸಲಿದ್ದಾರೆ. ಅವರಿಂದು ದೇವನಹಳ್ಳಿಯಲ್ಲಿ ಬೃಹತ್​ ರೋಡ್​ಶೋ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ನಗರದ ಕೆಲವೊಂದು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ (Traffic Restrictions). ನೀವು ಈ ಕೆಳಗಿನ ರಸ್ತೆಗಳಲ್ಲಿ ಪ್ರಯಾಣಿಸಲು ಯೋಜಿಸಿದ್ದರೇ ಪರ್ಯಾಯ ರಸ್ತೆ ಹುಡುಕುವುದು ಉತ್ತಮ.

ಅಮಿತ್​ ಶಾ ಆಗಮನ ಹಿನ್ನೆಲೆ ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್​ ಅಲರ್ಟ್​​ ಘೋಷಿಸಿದ್ದು, “ವಿಐಪಿ ಸಂಚಾರದಿಂದಾಗಿ ಈ ಮುಂದಿನ ರಸ್ತೆಗಳನ್ನು ಅಥವಾ ಜಂಕ್ಷನ್​ಗಳನ್ನು ತಪ್ಪಿಸಿ ಪರ್ಯಾಯ ರಸ್ತೆಯಲ್ಲಿ ಸಂಚರಿಸಿ ಎಂದು ಸೂಚನೆ ನೀಡಿದ್ದಾರೆ.

ಈ ರಸ್ತೆಗಳು ಬಂದ್​

ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ, ಯಲಹಂಕ, ಬಳ್ಳಾರಿ ರಸ್ತೆ, ಹೆಬ್ಬಾಳ ಜಂಕ್ಷನ್​, ಮೇಕ್ರಿ ಸರ್ಕಲ್​​ ಈ ರಸ್ತೆಗಳಲ್ಲಿ ಸಂಚಾರಕ್ಕೆ ನಿಷೇಧಿಸಲಾಗಿದ್ದು, ಪ್ರಯಾಣಿಕರು ಪರ್ಯಾಯ ರಸ್ತೆಯಲ್ಲಿ ಸಂಚರಿಸಿ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಮತ್ತು ಪೂರ್ವ ಬೆಂಗಳೂರಿನಲ್ಲಿ ಜನವರಿ-ಮಾರ್ಚ್ ತಿಂಗಳಲ್ಲಿ ಶೇ 24ರಷ್ಟು ಏರಿಕೆಯಾಗಿದೆ 2BHK ಫ್ಲಾಟ್​​ನ ಬಾಡಿಗೆ

ಅಮಿತ್‌ ಶಾ ಅವರು ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಮೇ 10 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಸಿದ್ಧತೆಗಳ ಬಗ್ಗೆಯೂ ಇವರು ಇಂದು ಪರಿಶೀಲನೆ ನಡೆಸಲಿದ್ದಾರೆ.

ಇಂದಿನ ಅಮಿತ್​ ಶಾ ರಾಜ್ಯ ಪ್ರವಾಸ ವೇಳಾಪಟ್ಟಿ

ಚುನಾವಣಾ ಚಾಣಕ್ಯ ಅಮಿತ್​ ಶಾ ಅವರು ಇಂದು ಮಧ್ಯಾಹ್ನ 3:15ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3.45ಕ್ಕೆ ದೇವನಹಳ್ಳಿಯಲ್ಲಿ ಅಮಿತ್ ಶಾ ಅವರ ರೋಡ್​ ಶೋ ನಡೆಯಲಿದೆ. ನಂತರ ಸಂಜೆ 6 ಗಂಟೆಗೆ ರೇಸ್​ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್​ಗೆ ಬರಲಿದ್ದು, ರಾತ್ರಿ 7.45ರಿಂದ 9ರವರೆಗೆ ರಾಜ್ಯ ಬಿಜೆಪಿ ನಾಯಕರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ರಾತ್ರಿ ರೇಸ್​​ಕೋರ್ಸ್​ ರಸ್ತೆಯ ಹೋಟೆಲ್​ನಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ನಾಳೆ (ಏ.22) ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ದೆಹಲಿಗೆ ವಾಪಸಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:50 pm, Fri, 21 April 23