AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್​ ಮಳಿಗೆಗಳು: ಗೊಂದಲಗಳಿಗೆ BMRCL ಸ್ಪಷ್ಟನೆ

ಬಿಎಂಆರ್‌ಸಿಎಲ್ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್‌ಗಳನ್ನು ತೆರೆಯಲು ಒಪ್ಪಂದ ಮಾಡಿಕೊಂಡಿರುವುದರಿಂದ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಟೆಂಡರ್ ಪ್ರಕ್ರಿಯೆಯ ಮೂಲಕ ಈ ಒಪ್ಪಂದವಾಗಿದೆ ಬಿಎಂಆರ್‌ಸಿಎಲ್​ನ ಸಾರ್ವಜನಿಕ ಮುಖ್ಯ ಸಂಪರ್ಕಾಧಿಕಾರಿ ಎಂದು ಸ್ಪಷ್ಟನೆ ನೀಡಿದ್ದಾರೆ. ನಂದಿನಿಗೂ ಅವಕಾಶವಿದೆ ಎಂದು ಹೇಳಿದ್ದಾರೆ. ಆದರೆ, ಕೆಎಂಎಫ್ ಟೆಂಡರ್‌ನಲ್ಲಿ ಭಾಗವಹಿಸಿಲ್ಲ ಎಂದು ತಿಳಿಸಿದ್ದಾರೆ.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್​ ಮಳಿಗೆಗಳು: ಗೊಂದಲಗಳಿಗೆ BMRCL ಸ್ಪಷ್ಟನೆ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Jun 18, 2025 | 3:52 PM

Share

ಬೆಂಗಳೂರು, ಜೂನ್​ 18: ನಮ್ಮ ಮೆಟ್ರೋದ (Namma Metro) 10 ಪ್ರಮುಖ ನಿಲ್ದಾಣಗಳಲ್ಲಿ ಅಮುಲ್ (Ammul)​ ಕಿಯೋಸ್ಕ್​ ಮಳಿಗೆ ಗುಜರಾತ್​ ಕೋ-ಆಪರೇಟಿವ್​ ಮಿಲ್ಕ್​ ಮಾರ್ಕೆಟಿಂಗ್​ ಫೆಡರೇಷನ್​ ಲಿ. ಜೊತೆಗೆ ಬಿಎಂಆರ್​ಸಿಎಲ್​ ಒಪ್ಪಂದ ಮಾಡಿಕೊಂಡಿರುವುದಕ್ಕೆ ಸಾರ್ವಜನಿಕರ ವಲಯದಿಂದ ವಿರೋಧ ವ್ಯಕ್ತವಾಗುತ್ತಿದೆ. ವಿರೋಧ ಬೆನ್ನಲ್ಲೇ ಎಂಟು ನಿಲ್ದಾಣಗಳಲ್ಲಿ ಅಮುಲ್​ಗೆ ಮತ್ತು ಎರಡು ನಿಲ್ದಾಣಗಳಲ್ಲಿ ಕೆಎಂಎಫ್​ಗೆ ಮಳಿಗೆ ತೆರೆಯಲು ಅನುಮತಿ ನೀಡಲಾಗಿದೆ ಎಂದು ವರದಿಯಾಗಿತ್ತು. ಇದರಿಂದ ಸಾರ್ವಜನಿಕರಲ್ಲಿ ಸಾಕಷ್ಟು ಗೊಂದಲ ಮೂಡಿದ್ದು, ಈ ಗೊಂದಲಗಳಿಗೆ ಬಿಎಂಆರ್​ಸಿಎಲ್​ನ (BMRCL) ಸಾರ್ವಜನಿಕ ಮುಖ್ಯ ಸಂಪರ್ಕಾಧಿಕಾರಿ ಯಶ್ವಂತ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾರ್ವಜನಿಕ ಮುಖ್ಯ ಸಂಪರ್ಕಾಧಿಕಾರಿ ಯಶ್ವಂತ್, “ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆಗಳು ಟೆಂಡರ್ ಮೂಲಕ ಆಗಿದೆ. ಅಮುಲ್ ಟೆಂಡರ್​​ನಲ್ಲಿ ಭಾಗಿಯಾಗಿ 10 ಮಳಿಗೆಗಳನ್ನು ತೆಗೆದುಕೊಂಡಿದೆ. ಎಂ.ಜಿ.ರೋಡ್, ಮಹಾಲಕ್ಷ್ಮೀ ಲೇಔಟ್, ವಿಜಯನಗರದಲ್ಲಿ ನಂದಿನಿ ಮಳಿಗೆಗಳಿದ್ದವು. ಈಗ ವಿಜಯನಗರದಲ್ಲಿ ಮಾತ್ರ ಮಳಿಗೆ ಇದೆ, ಎರಡು ಕಡೆ ಕಾರಣಾಂತರದಿಂದ ತೆಗೆದಿದ್ದಾರೆ” ಎಂದು ತಿಳಿಸಿದರು.

“ಟೆಂಡರ್​​ನಲ್ಲಿ ಭಾಗಿಯಾಗಿದರೆ ನಂದಿನಿ ಮಳಿಗೆಗೂ ಅವಕಾಶ ಕೊಡುತ್ತೇವೆ. ನಮಗೆ ಯಾರು ಕೂಡ ಮುಖ್ಯ ಅಲ್ಲ. 10 ಮಳಿಗೆಗೆ ಪ್ರತಿ ತಿಂಗಳು 7 ಲಕ್ಷ ರೂಪಾಯಿಯಂತೆ 5 ವರ್ಷಕ್ಕೆ ಟೆಂಡರ್ ಆಗಿದೆ. ಇತ್ತೀಚಿಗೆ ನಾವು ಕರೆದಿರುವ ಟೆಂಡರ್​ನಲ್ಲಿ ಕೆಎಂಎಫ್​ ಭಾಗಿಯಾಗಿರಲಿಲ್ಲ” ಎಂದು ಹೇಳಿದರು.

ಇದನ್ನೂ ಓದಿ
Image
ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಉತ್ಪನ್ನ ಮಳಿಗೆ: ಡಿಕೆಶಿ ಹೇಳಿದ್ದಿಷ್ಟು
Image
ವಿಧಾನಸೌಧ ಆವರಣಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ನೀಡಿ: ಮೋಹನ್​ದಾಸ್ ಪೈ
Image
ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್​​ನಲ್ಲಿ ಪ್ರಯಾಣಿಕರಿಗಾಗಿ ಹೊಸ ಸೇವೆ
Image
ಆಂಧ್ರದ ವೈಎಸ್​ಆರ್​ಪಿ ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಬೆಂಗಳೂರಿನ

ಯಾವ್ಯಾವ ನಿಲ್ದಾಣಗಳಲ್ಲಿ ಅಮುಲ್​ ಮಳಿಗೆ

ಪಟ್ಟಂದೂರು ಅಗ್ರಹಾರ, ಇಂದಿರಾನಗರ, ಬೆನ್ನಿಗಾನಹಳ್ಳಿ, ಬೈಯಪ್ಪನಹಳ್ಳಿ, ಟ್ರಿನಿಟಿ, ಸರ್. ಎಂ.ವಿಶ್ವೇಶ್ವರಯ್ಯ, ಮೆಜೆಸ್ಟಿಕ್, ನ್ಯಾಷನಲ್ ಕಾಲೇಜು, ಜಯನಗರ ಹಾಗೂ ಬನಶಂಕರಿ ನಿಲ್ದಾಣದಲ್ಲಿ ಅಮುಲ್ ಮಳಿಗೆಗಳು ತೆರೆಯಲು ಒಪ್ಪಂದವಾಗಿದೆ ಎಂದು ವರದಿಯಾಗಿದೆ.

ಈಗಾಗಲೇ ವಿವೇಕಾನಂದ ಮೇಟ್ರೋ ನಿಲ್ದಾಣದಲ್ಲಿ ಅಮುಲ್​ ಮಳಿಗೆ ಬಾಗಿಲು ತೆರೆದಿದೆ. ಇದರಿಂದ, ಕೆಎಂಎಫ್ ನಂದಿನಿಗೆ ಭಾರಿ ಅನ್ಯಾಯವಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್‌ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ನಮ್ಮದೇ ಕೆಎಂಎಫ್ ನಂದಿನಿ ಇರುವಾಗ ಅಮುಲ್‌ಗೆ ಏಕೆ ಅವಕಾಶ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್​ ಮಳಿಗೆ ಸ್ಥಾಪನೆಗೆ ಮುಂದಾದ ಬಿಎಂಆರ್​ಸಿಎಲ್​: ಸಾರ್ವಜನಿಕರಿಂದ ಆಕ್ಷೇಪ

ಅಮುಲ್ ಮಳಿಗೆ ತೆರೆದಿರುವುದಕ್ಕೆ ಸಾಮಾಜಿಕ ಜಲಾತಾಣಗಳಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ‘ಕೆಎಂಎಫ್ ನಂದಿನಿ ಇರುವಾಗ ಅಮುಲ್‌ಗೆ ಅವಕಾಶ ಮಾಡಿಕೊಟ್ಟಿರುವುದು ಯಾಕೆ? ಬಿಎಂಆರ್‌ಸಿಎಲ್ ಗುಜರಾತ್ ಮೂಲದ ಕಂಪನಿ ಜೊತೆಗೆ ಒಪ್ಪಂದ ಮಾಡಿಕೊಂಡು ಅಮುಲ್ ಉತ್ಪನ್ನಗಳಿಗೆ ಯಾಕಾಗಿ ಪ್ರಾಶಸ್ತ್ರ ನೀಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಪ್ರಶ್ನಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Wed, 18 June 25

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು