ಖಾತೆಗೆ ಬರದ ಹಣ: ಗೃಹಲಕ್ಷ್ಮಿ ಯೋಜನೆ ವಿರುದ್ಧ ಮಹಿಳೆಯರ ಆಕ್ರೋಶ; ವಿಳಂಬಕ್ಕೆ ಕಾರಣ ನೀಡಿದ ಅಧಿಕಾರಿಗಳು
ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಮುಖಾಂತರ ಕುಟುಂಬದ ಮಹಿಳಾ ಯಜಮಾನಿಗೆ ಮಾಸಿಕ 2,000 ರೂ. ನೀಡಲಾಗುತ್ತದೆ. ಯೋಜನೆ ಜಾರಿಯಾಗಿ ಮೂರು ತಿಂಗಳು ಕಳೆದರೂ ತಾಂತ್ರಿಕ ದೋಷಗಳು ಮಾತ್ರ ಬಗೆಹರಿದಿಲ್ಲ. ಕಳೆದ ಮೂರು ತಿಂಗಳಲ್ಲಿ ಸುಮಾರು 1.2 ಕೋಟಿ ಮಹಿಳೆಯರು ಪ್ರಯೋಜನಕ್ಕಾಗಿ ನೋಂದಾಯಿಸಿಕೊಂಡಿದ್ದಾರೆ.
ಬೆಂಗಳೂರು ನ.06: ರಾಜ್ಯ ಸರ್ಕಾರ (Karnataka Government) ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ (Gruha Lakshmi) ಯೋಜನೆ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಲಹಂಕ ತಾಲೂಕಿನ ಹಲವು ಹಳ್ಳಿಗಳ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದರು. ಆದರೆ ಇವರ ಅರ್ಜಿಗಳನ್ನು ರಿಜೆಕ್ಟ್ ಮಾಡಲಾಗಿದೆ ಎಂದು ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೆ ನಮಗೆ ಒಂದು ಬಾರಿಯೂ ಹಣ ಬಂದಿಲ್ಲ. ಹಣದ ಸಂಬಂಧ ನಾವು ಅಲೆದಾಡುತ್ತಿದ್ದೇವೆ. ಯಾವಾಗ ಬಂದರೂ ಅದು ಸರಿಯಿಲ್ಲ ಇದು ಸರಿಯಿಲ್ಲ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾದರೆ ನಮಗೆ ಗೃಹಲಕ್ಷ್ಮೀ ಯೋಜನೆ ಹಣ ಬರುವುದು ಯಾವಾಗ? ಅಂತ ಮಹಿಳೆಯರ ಅಳಲು ತೋಡಿಕೊಂಡಿದ್ದಾರೆ.
ಹಣ ಜಮಾವಣೆ ವಿಳಂಬಕ್ಕೆ ಕಾರಣ ನೀಡಿದ ಅಧಿಕಾರಿಗಳು
ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಮುಖಾಂತರ ಕುಟುಂಬದ ಮಹಿಳಾ ಯಜಮಾನಿಗೆ ಮಾಸಿಕ 2,000 ರೂ. ನೀಡುತ್ತಿದೆ. ಯೋಜನೆ ಜಾರಿಯಾಗಿ ಮೂರು ತಿಂಗಳು ಕಳೆದರೂ ತಾಂತ್ರಿಕ ದೋಷಗಳು ಮಾತ್ರ ಬಗೆಹರಿದಿಲ್ಲ. ಕಳೆದ ಮೂರು ತಿಂಗಳಲ್ಲಿ ಸುಮಾರು 1.2 ಕೋಟಿ ಮಹಿಳೆಯರು ಪ್ರಯೋಜನಕ್ಕಾಗಿ ನೋಂದಾಯಿಸಿಕೊಂಡಿದ್ದಾರೆ.
ಅಧಿಕಾರಿಗಳ ಪ್ರಕಾರ ಅಕ್ಟೋಬರ್ 31 ರ ಹೊತ್ತಿಗೆ, ಆಗಸ್ಟ್‌ನಿಂದ ಸುಮಾರು 10 ಲಕ್ಷ ಮಹಿಳೆಯರು ಮತ್ತು ಸೆಪ್ಟೆಂಬರ್‌ನಿಂದ 36 ಲಕ್ಷ ಮಹಿಳೆಯರು ಇನ್ನೂ ಯೋಜನೆಯ ಪ್ರಯೋಜನಗಳನ್ನು ಪಡೆದಿಲ್ಲ. ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡ್‌ಗಳನ್ನು ಲಿಂಕ್ ಮಾಡದಿರುವುದು, ಪಾಸ್ಬುಕ್ನಲ್ಲಿರುವ ಹೆಸರಿಗೂ ಮತ್ತು ಆಧಾರ್ ಕಾರ್ಡ್ನಲ್ಲಿರುವ ಹೆಸರಿಗೂ ಹೊಂದಾಣಿಕೆಯಾಗದಿರುವುದು. ಖಾತೆಗಳನ್ನು ಆರು ತಿಂಗಳಿಗಿಂತ ಹೆಚ್ಚು ಕಾಲ ಬ್ಯಾಂಕ್ ಟ್ರಾಂಜಾಕ್ಷನ್ ಆಗಿರುವುದಿಲ್ಲ. ಅಥವಾ KYC ಅನ್ನು ನವೀಕರಣವಾಗಿರುವುದಿಲ್ಲ. ಮತ್ತು ವಿವಿಧ ಕಾರಣಗಳಿಂದಾಗಿ ಹಣ ವರ್ಗಾವಣೆ ತಡವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಹಣಕಾಸು ಇಲಾಖೆಗಳ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: Raichur: ಗೃಹ ಲಕ್ಷ್ಮೀ ಯೋಜನೆ ಅರ್ಜಿಗೆ ಜನರಿಂದ ಹಣ ವಸೂಲಿ, 3 ಸೈಬರ್ ಸೆಂಟರ್ಗಳ ವಿರುದ್ಧ ಎಫ್ಐಆರ್ ದಾಖಲು
ಕಳೆದ 45 ದಿನಗಳಲ್ಲಿ ಸುಮಾರು 10 ಲಕ್ಷ ಅರ್ಜಿಗಳನ್ನು ಸರಿಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸಿದರು. ಪಾವತಿ ಪ್ರಕ್ರಿಯೆಯು ಗೊಂದಲಮಯವಾಗಿದೆ. ಹಣ ಜಮಾವಣೆ ಪ್ರಕ್ರಿಯೆಗೆ 10 ದಿನ ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ಹಣ ಜಮಾವಣೆಯಾಗುವುದು ವಿಳಂಬವಾಗುತ್ತದೆ ಎಂದು ಅಧಿಕಾರಿಗಳು ಹೇಳಿದರು.
ಲೋಪದೋಷಗಳನ್ನು ತ್ವರಿತವಾಗಿ ಸರಿಪಡಿಸಿ ಶೇ.100ರಷ್ಟು ತಲುಪುವಂತೆ ನೋಡಿಕೊಳ್ಳುವಂತೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆ ಜಾರಿಯಾದ ಆಗಸ್ಟ್‌ನಲ್ಲಿ ಶೇ.88ರಷ್ಟು ಫಲಾನುಭವಿಗಳ ಖಾತೆಗೆ ಹಣ ಜಮಾವಣೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:06 pm, Mon, 6 November 23