ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು (ಆ.6) ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ (Amrit Bharat Station) ದೇಶದ 508 ರೈಲು ನಿಲ್ದಾಣಗಳ ನವೀಕರಣಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ನಿಲ್ದಾಣಗಳನ್ನು 24,470 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಮರು ಅಭಿವೃದ್ಧಿಗೊಳಿಸಲಾಗುತ್ತಿದೆ. 2023ರ ಬಜೆಟ್‌ನಲ್ಲಿ ಈ ಯೋಜನೆಯಡಿಯಲ್ಲಿ ದೇಶದಾದ್ಯಂತ 1,275 ನಿಲ್ದಾಣಗಳನ್ನು ಪುನರಾಭಿವೃದ್ಧಿಗೊಳಿಸಲಾಗುವುದು ಎಂದು ಘೋಷಿಸಲಾಗಿತ್ತು. ಈ ಯೋಜನೆಯಡಿ ಕರ್ನಾಟಕದ 55 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಯೋಜಿಸಲಾಗಿದೆ. ಸದ್ಯ ಮೊದಲ ಹಂತದಲ್ಲಿ 13 ನಿಲ್ದಾಣಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
ಹಾಸನದ ಅರಸೀಕೆರೆ ರೈಲ್ವೆ ಸ್ಟೇಷನ್ ಮೇಲ್ದರ್ಜೆಗೆ ಏರಿಸಲು ಹಾಸನ ಜಿಲ್ಲೆಯ ಅರಸೀಕೆರೆ ರೈಲ್ವೆ ಸ್ಟೇಷನ್ ಅಭಿವೃದ್ಧಿ ಪಡಿಸಲು ಆದ್ಯತೆ ನೀಡಲಾಗಿದೆ. ಅರಸೀಕೆರೆ ರೈಲ್ವೆ ನಿಲ್ದಾಣದ ಬಳಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಧಾರವಾಡ ಜಿಲ್ಲೆಯ ಅಳ್ನಾವರ ರೈಲು ನಿಲ್ದಾಣವನ್ನು ನವೀಕರಣಗೊಳಿಸಲಾಗುವುದು. ರೈಲು ನಿಲ್ದಾಣದಲ್ಲಿ ಸಮಾರಂಭ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಭಾಗಿಯಾಗಲಿದ್ದಾರೆ.
ಗದಗ ರೈಲ್ವೆ ನಿಲ್ದಾಣವನ್ನು ನವೀಕರಣಕ್ಕೆ ಆಯ್ಕೆ ಮಾಡಲಾಗಿದೆ. ಇನ್ನು ನಗರದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಗದಗ ಸಂಸದ ಶಿವಕುಮಾರ ಉದಾಸಿ, ಸಚಿವ ಹೆಚ್ ಕೆ ಪಾಟೀಲ್, ರೈಲ್ವೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಕೊಪ್ಪಳ ರೈಲ್ವೆ ನಿಲ್ದಾಣ ಮರು ಅಭಿವೃದ್ಧಿ ಕಾರ್ಯಕ್ರಮ. ಕಾರ್ಯಕ್ರಮದಲ್ಲಿ ಕೊಪ್ಪಳ ಸಂಸದ ಕರಡಿ ಸಂಗಣ್ಣ,ರೈಲ್ವೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಕಲಬುರಗಿ ಜಿಲ್ಲೆಯ ನಾಲ್ಕು ರೈಲು ನಿಲ್ದಾಣಗಳನ್ನು 113 ಕೋಟಿ ರೂ. ವೆಚ್ಚದಲ್ಲಿ ಪುನರ್ ಅಭಿವೃದ್ಧಿಗೊಳಿಸಲಾಗುವುದು. ಕಲಬುರಗಿ, ಶಹಬಾದ್, ವಾಡಿ, ಗಾಣಗಾಪುರ ರೋಡ್ ಸ್ಟೇಷನ್ಗಳನ್ನು ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್, ಪಿ.ಜಿ ಬನ್ಸೂಡಿ, ಡೆಪ್ಯೂಟಿ ಕಮರ್ಷಿಯಲ್ ಇಂಜಿನಿಯರ್, ಸೊಲ್ಲಾಪುರ ಡಿವಿಜನ್ ಭಾಗಿಯಾಗಲಿದ್ದಾರೆ.
ಶಹಬಾದ್ ರೈಲು ನಿಲ್ದಾಣದಿಂದ ಹೆಚ್ ಕೆ ಶರ್ಮಾ, ಡ್ಯಪೂಟಿ ಇಂಜನೀಯರ್ ಸೊಲ್ಲಾಪುರ ಡಿವಿಜನ್ ಪಾಲ್ಗೊಳ್ಳುತ್ತಾರೆ. ವಾಡಿ ರೈಲು ನಿಲ್ದಾಣದಿಂದ ಆಯುಷ್ ಮೆಹತೋ, ಡೆಪ್ಯುಟಿ ಸುಪರಿಡೆಂಟ್ ಟ್ರಾಪಿಕ್ ಇಂಜನೀಯರ್, ಸೊಲ್ಲಾಪುರ ಡಿವಿಜನ್ ಭಾಗಿಯಾಗಲಿದೆ.
ಕಲಬುರಗಿ ರೈಲ್ವೆ ನಿಲ್ದಾಣಕ್ಕೆ 29.55 ಕೋಟಿ ರೂ. ಶಹಬಾದ್ ರೈಲು ನಿಲ್ದಾಣಕ್ಕೆ 26.76 ಕೋಟಿ ರೂ. ವಾಡಿ ರೈಲು ನಿಲ್ದಾಣ 36.32 ಕೋಟಿ ರೂ. ಗಾಣಗಾಪುರ ರೋಡ್ ರೈಲು ನಿಲ್ದಾಣ 20.78 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ.
ಇನ್ನು ಬೆಳಗಾವಿ ಜಿಲ್ಲೆಯ ಘಟಪ್ರಭಾ ಮತ್ತು ಗೋಕಾಕ್ ರೋಡ್ ನಿಲ್ದಾಣಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ, ಸಂಸದೆ ಮಂಗಲಾ ಅಂಗಡಿ, ಶಾಸಕರಾದ ದುರ್ಯೋಧನ ಐಹೊಳೆ ಭಾಗಿಯಾಗಲಿದ್ದಾರೆ. ರೈಲ್ವೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಬಿಜೆಪಿ ಕಾರ್ಯಕರ್ತರು, ಸ್ಥಳೀಯರು ಕೂಡ ಪಾಲ್ಗೊಳ್ಳಲಿದ್ದಾರೆ. ಎರಡು ರೇಲ್ವೆ ನಿಲ್ದಾಣಕ್ಕೆ 35 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ.
ಬೀದರ ರೈಲು ನಿಲ್ದಾಣಕ್ಕೂ ಹೈಟೆಕ್ ಸ್ಪರ್ಶ ನೀಡಲಾಗುತ್ತಿದೆ. ಇದರ ಪುನರಾಭಿವೃದ್ದಿ ಕಾಮಗಾರಿಯ ಶಂಕುಸ್ಥಾಪನೆಯನ್ನು ಇಂದು ನೆರವೇರಲಿದೆ. 17 ಕೋಟಿ ರೂ. ವೆಚ್ಚದಲ್ಲಿ ಬಳ್ಳಾರಿ ರೈಲು ನಿಲ್ದಾಣದವನ್ನು ಮರು ಅಭಿವೃದ್ಧಿಪಡಿಸಲಾಗುವುದು. ಬಳ್ಳಾರಿ ಸಂಸದ ವೈ. ದೇವರಂದ್ರಪ್ಪಾ, ಸಚಿವ ನಾಗೇಂದ್ರ ಭಾಗಿಯಾಗಲಿದ್ದಾರೆ.
ಮೈಸೂರು ವಿಭಾಗದ ಹರಿಹರ ರೈಲು ನಿಲ್ದಾಣವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಹರಿಹರದ ರೈಲ್ವೆ ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ಹಾಗೂ ಹರಿಹರ ವಿಧಾನಸಭಾ ಕ್ಷೇತ್ರದ ಬಿ.ಪಿ.ಹರೀಶ್ ಉಪಸ್ಥಿತರಿರುವರು. 19.32 ಕೋಟಿ ರೂ ವೆಚ್ಚದಲ್ಲಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಪುನರ್ ಅಭಿವೃದ್ಧಿಗೊಳಿಸಲಾಗುವುದು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:57 am, Sun, 6 August 23