ಇತ್ತ ಜಾಮೀನಿಗಾಗಿ ಹೈಕೋರ್ಟ್​ಗೆ ಅರ್ಜಿ, ಅತ್ತ ಜೈಲಿನಲ್ಲಿ ಪ್ರಜ್ವಲ್​ ಭೇಟಿಯಾದ ರೇವಣ್ಣ

3 ಪ್ರಕರಣಗಳಲ್ಲಿ ಜಾಮೀನು ಕೋರಿ ಹೈಕೋರ್ಟ್​ಗೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದು, ಸೆಷನ್ಸ್ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅದರ ಬೆನ್ನಲ್ಲೇ ತಂದೆ ರೇವಣ್ಣ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿ ಮಗನನ್ನು ಭೇಟಿಯಾಗಿದ್ದಾರೆ. ಇನ್ನು ಮತ್ತೋರ್ವ ಪುತ್ರ ಸೂರಜ್​ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಸ್​ಗೆ ಸಂಬಂಧಿಸಿದ ಸೂರಜ್ ಜಾಮೀನು ಅರ್ಜಿ ವಿಚಾರಣೆಯನ್ನ ನ್ಯಾಯಾಲಯ ನಾಳೆಗೆ ಮುಂದೂಡಿದೆ.

ಇತ್ತ ಜಾಮೀನಿಗಾಗಿ ಹೈಕೋರ್ಟ್​ಗೆ ಅರ್ಜಿ, ಅತ್ತ ಜೈಲಿನಲ್ಲಿ ಪ್ರಜ್ವಲ್​ ಭೇಟಿಯಾದ ರೇವಣ್ಣ
ಜೈಲಿನಲ್ಲಿ ಪ್ರಜ್ವಲ್​ ಭೇಟಿಯಾದ ರೇವಣ್ಣ
Follow us
Ramesha M
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 03, 2024 | 4:35 PM

ಬೆಂಗಳೂರು, ಜು.03: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ಅವರನ್ನು ಹೊರತರಲು ತಂದೆ ಹೆಚ್​ಡಿ ರೇವಣ್ಣ(HD Revanna) ಹರಸಾಹಸ ಪಡುತ್ತಿದ್ದಾರೆ. ಅದರಂತೆ 3 ಪ್ರಕರಣಗಳಲ್ಲಿ ಜಾಮೀನು ಕೋರಿ ಹೈಕೋರ್ಟ್​ಗೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದು, ಸೆಷನ್ಸ್ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅದರ ಬೆನ್ನಲ್ಲೇ ತಂದೆ ರೇವಣ್ಣ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿ ಮಗನನ್ನು ಭೇಟಿಯಾಗಿದ್ದಾರೆ.

ಜೈಲಿನಲ್ಲಿ ಪ್ರಜ್ವಲ್​ ಭೇಟಿಯಾದ ರೇವಣ್ಣ

ಇನ್ನು ಅತ್ತ ಜಾಮೀನು ಅರ್ಜಿ ತಿರಸ್ಕರಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಆಗಮಿಸಿ, ಪರಪ್ಪನ ಅಗ್ರಹಾರ ಕ್ವಾರಂಟೈನ್​ ಜೈಲಿನಲ್ಲಿರುವ ಪುತ್ರ ಪ್ರಜ್ವಲ್​​ನ್ನು ಭೇಟಿ ಆಗಿದ್ದಾರೆ. ಈ ವೇಳೆ ಸುಮಾರು 30 ನಿಮಿಷ ಮಾತನಾಡಿದ ಅವರು, ಮುಂದಿನ ಕಾನೂನು ಹೋರಾಟದ ಕುರಿತು ಮಗನ ಜೊತೆ ಚರ್ಚೆ ಮಾಡಿ ಹೊರಬಂದಿದ್ದಾರೆ. ಇನ್ನು ಇದೇ ಜುಲೈ 1ರಂದು ತಾಯಿ ಭವಾನಿ, ಪ್ರಜ್ವಲ್ ಭೇಟಿಯಾಗಿ ತೆರಳಿದ್ದರು. ಅದರ ಬೆನ್ನಲ್ಲೇ ಇದೀಗ ತಂದೆ ಆಗಮಿಸಿದ್ದಾರೆ.

ಇದನ್ನೂ ಓದಿ:ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ಹೆಚ್ ಡಿ ರೇವಣ್ಣ

ರೇವಣ್ಣ ಮತ್ತೋರ್ವ ಪುತ್ರ ಸೂರಜ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಇನ್ನು ರೇವಣ್ಣ ಮತ್ತೋರ್ವ ಪುತ್ರ ಸೂರಜ್​ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಸ್​ಗೆ ಸಂಬಂಧಿಸಿದ ಸೂರಜ್ ಜಾಮೀನು ಅರ್ಜಿ ವಿಚಾರಣೆಯನ್ನ ನ್ಯಾಯಾಲಯ ನಾಳೆಗೆ ಮುಂದೂಡಿದ್ದು, ನಾಳೆ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಐಡಿ ಪರ ವಕೀಲರಿಗೆ ಸೂಚನೆ ನೀಡಿದೆ. ಈ ಹಿನ್ನಲೆ ಪರಪ್ಪನ ಅಗ್ರಹಾರ ಜೈಲಿನತ್ತ ಸೂರಜ್ ರೇವಣ್ಣನನ್ನು ಪೊಲೀಸರು ಕರೆದೊಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ