ಬೆಂಗಳೂರು, ಜು.03: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ಅವರನ್ನು ಹೊರತರಲು ತಂದೆ ಹೆಚ್ಡಿ ರೇವಣ್ಣ(HD Revanna) ಹರಸಾಹಸ ಪಡುತ್ತಿದ್ದಾರೆ. ಅದರಂತೆ 3 ಪ್ರಕರಣಗಳಲ್ಲಿ ಜಾಮೀನು ಕೋರಿ ಹೈಕೋರ್ಟ್ಗೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದು, ಸೆಷನ್ಸ್ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅದರ ಬೆನ್ನಲ್ಲೇ ತಂದೆ ರೇವಣ್ಣ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿ ಮಗನನ್ನು ಭೇಟಿಯಾಗಿದ್ದಾರೆ.
ಇನ್ನು ಅತ್ತ ಜಾಮೀನು ಅರ್ಜಿ ತಿರಸ್ಕರಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಗಮಿಸಿ, ಪರಪ್ಪನ ಅಗ್ರಹಾರ ಕ್ವಾರಂಟೈನ್ ಜೈಲಿನಲ್ಲಿರುವ ಪುತ್ರ ಪ್ರಜ್ವಲ್ನ್ನು ಭೇಟಿ ಆಗಿದ್ದಾರೆ. ಈ ವೇಳೆ ಸುಮಾರು 30 ನಿಮಿಷ ಮಾತನಾಡಿದ ಅವರು, ಮುಂದಿನ ಕಾನೂನು ಹೋರಾಟದ ಕುರಿತು ಮಗನ ಜೊತೆ ಚರ್ಚೆ ಮಾಡಿ ಹೊರಬಂದಿದ್ದಾರೆ. ಇನ್ನು ಇದೇ ಜುಲೈ 1ರಂದು ತಾಯಿ ಭವಾನಿ, ಪ್ರಜ್ವಲ್ ಭೇಟಿಯಾಗಿ ತೆರಳಿದ್ದರು. ಅದರ ಬೆನ್ನಲ್ಲೇ ಇದೀಗ ತಂದೆ ಆಗಮಿಸಿದ್ದಾರೆ.
ಇದನ್ನೂ ಓದಿ:ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ಹೆಚ್ ಡಿ ರೇವಣ್ಣ
ಇನ್ನು ರೇವಣ್ಣ ಮತ್ತೋರ್ವ ಪುತ್ರ ಸೂರಜ್ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಸ್ಗೆ ಸಂಬಂಧಿಸಿದ ಸೂರಜ್ ಜಾಮೀನು ಅರ್ಜಿ ವಿಚಾರಣೆಯನ್ನ ನ್ಯಾಯಾಲಯ ನಾಳೆಗೆ ಮುಂದೂಡಿದ್ದು, ನಾಳೆ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಐಡಿ ಪರ ವಕೀಲರಿಗೆ ಸೂಚನೆ ನೀಡಿದೆ. ಈ ಹಿನ್ನಲೆ ಪರಪ್ಪನ ಅಗ್ರಹಾರ ಜೈಲಿನತ್ತ ಸೂರಜ್ ರೇವಣ್ಣನನ್ನು ಪೊಲೀಸರು ಕರೆದೊಯ್ದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ