ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ ಪ್ರಕರಣ; ಬೆಂಗಳೂರಿನ ಏಜೆನ್ಸಿ ವಿರುದ್ಧ ಎಫ್ಐಆರ್ ದಾಖಲು

ಮೈಸೂರು ಜಿಲ್ಲೆಯ ರಿಂಗ್ ರಸ್ತೆಗೆ ಹೊಂದಿಕೊಂಡಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪದ ಗೋಡಾನ್ ಪತ್ತೆಯಾಗಿತ್ತು. ಸ್ಥಳೀಯರಿಗೆ ಮೊದಲು ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಸದಸ್ಯರಿಗೆ ಈ ಜಾಲದ ಬಗ್ಗೆ ಮಾಹಿತಿ ನೀಡಿದ್ದರು.

ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ ಪ್ರಕರಣ; ಬೆಂಗಳೂರಿನ ಏಜೆನ್ಸಿ ವಿರುದ್ಧ ಎಫ್ಐಆರ್ ದಾಖಲು
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on: Jan 09, 2022 | 8:32 AM

ಬೆಂಗಳೂರು: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ತುಪ್ಪ ಪೂರೈಕೆ ಮಾಡಿದ್ದ ಬೆಂಗಳೂರಿನ ಕೆಎಂಎಫ್ ಒಕ್ಕೂಟದ ಸಗಟು ಮಾರಾಟಗಾರ ಏಜೆನ್ಸಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಬಸವನಗುಡಿ ಠಾಣೆಯಲ್ಲಿ ಶ್ರುತಿ ಮಾರ್ಕೆಟಿಂಗ್ ಕಾರ್ಪೊರೇಷನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಎಂಎಫ್ ಹೆಚ್ಚುವರಿ ನಿರ್ದೇಶಕ ಡಾ. ಬಿಪಿ ಸುರೇಶ್ ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

ಮೈಸೂರು ಜಿಲ್ಲೆಯ ರಿಂಗ್ ರಸ್ತೆಗೆ ಹೊಂದಿಕೊಂಡಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪದ ಗೋಡಾನ್ ಪತ್ತೆಯಾಗಿತ್ತು. ಸ್ಥಳೀಯರಿಗೆ ಮೊದಲು ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಸದಸ್ಯರಿಗೆ ಈ ಜಾಲದ ಬಗ್ಗೆ ಮಾಹಿತಿ ನೀಡಿದ್ದರು. ಡಿಸೆಂಬರ್ 16ರಂದು ಸ್ಥಳಕ್ಕೆ ಸಮಿತಿ ಸದಸ್ಯರು ಹೋಗಿ ಪರಿಶೀಲಿಸಿದಾಗ ನಕಲಿ ಜಾಲ ಪತ್ತೆಯಾಗಿತ್ತು. ಇಲ್ಲಿ ನಂದಿನ ತುಪ್ಪದ ಕವರ್ ತಯಾರಿಸುವ ಕೆಲಸ, ಅಸಲಿ ನಂದಿನಿ ತುಪ್ಪಕ್ಕೆ ಕಲಬೆರಕೆ ಮಾಡುವ ಕೆಲಸ ಹಾಗೂ ಟಿನ್​ಗಳಿಗೆ ತುಂಬುವ ಕೆಲಸ ಮಾಡಲಾಗುತಿತ್ತು.

ತಲಾ 15 ಕೆಜಿ ತೂಕದ ಸುಮಾರು 1,000 ಟಿನ್​ಗಳು ದೊರಕಿವೆ. ರಾಶಿಗಟ್ಟಲೆ ವನಸ್ಪತಿ, ಪಾಮ್ ಆಯಿಲ್, ಕಲರಿಂಗ್ ಕೆಮಿಕಲ್, ನಂದಿನಿ ಬ್ರ್ಯಾಂಡ್ ತುಪ್ಪದ ನಕಲಿ ಕವರ್, ಪ್ಯಾಕಿಂಗ್ ಯೂನಿಟ್ ಎಲ್ಲವನ್ನೂ ಕಂಡು ಸಮಿತಿ ಸದಸ್ಯರೂ ಅವಕ್ಕಾಗಿದ್ದಾರೆ. ಕೂಡಲೇ ಪೊಲೀಸರು, ಕರ್ನಾಟಕ ಹಾಲು ಉತ್ಪನ್ನಗಳ ಸಹಕಾರ ಒಕ್ಕೂಟ, ಫುಡ್ ಸೇಫ್ಟಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು.

ಇದನ್ನೂ ಓದಿ

ಮೊಟೊ ಜಿ71 5ಜಿ ಸ್ಮಾರ್ಟ್​ಫೋನ್ ರವಿವಾರ ಲಾಂಚ್ ಆಗಲಿದ್ದು ಅದರ ಬೆಲೆ ಆಗಲೇ ಬಹಿರಂಗಗೊಂಡಿದೆ!

Karnataka Dam Water Level: ಕಬಿನಿ, ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ