ಕರ್ನಾಟಕಕ್ಕೆ ಅಕ್ಕಿ ಕೊಡಲು ಮೂರು ರಾಜ್ಯಗಳ ಒಪ್ಪಿಗೆ; ಒಂದು ವಾರದಲ್ಲಿ ಖರೀದಿ ಫೈನಲ್ ಆಗಲಿದೆ ಎಂದ ಮುನಿಯಪ್ಪ

ಚುನಾವಣೆ ಪೂರ್ವದಲ್ಲಿ ರಾಜ್ಯದ ಜನರಿಗೆ ನೀಡಿದ ಭರವಸೆಯಂತೆ 10 ಕೆಜಿ ಅಕ್ಕಿ ನೀಡಲು ಕಾಂಗ್ರೆಸ್ ಸರ್ಕಾರ ಕಸರತ್ತು ನಡೆಸುತ್ತಿದೆ. ಈ ಬಗ್ಗೆ ಮಾತನಾಡಿದ ಸಚಿವ ಕೆಹೆಚ್ ಮುನಿಯಪ್ಪ, ಅಕ್ಕಿ ಕೊಡಲು ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸಗಠ ಸರ್ಕಾರ ಮುಂದೆ ಬಂದಿವೆ. ಒಂದು ವಾರದಲ್ಲಿ ಅಕ್ಕಿ ಖರೀದಿ ಪೈನಲ್ ಆಗಲಿದೆ. ಸದ್ಯ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದಿದ್ದಾರೆ.

ಕರ್ನಾಟಕಕ್ಕೆ ಅಕ್ಕಿ ಕೊಡಲು ಮೂರು ರಾಜ್ಯಗಳ ಒಪ್ಪಿಗೆ; ಒಂದು ವಾರದಲ್ಲಿ ಖರೀದಿ ಫೈನಲ್ ಆಗಲಿದೆ ಎಂದ ಮುನಿಯಪ್ಪ
ಸಚಿವ ಕೆ.ಹೆಚ್.ಮುನಿಯಪ್ಪ
Edited By: Rakesh Nayak Manchi

Updated on: Sep 04, 2023 | 3:10 PM

ಬೆಂಗಳೂರು, ಸೆ.4: ಚುನಾವಣೆ ಪೂರ್ವದಲ್ಲಿ ರಾಜ್ಯದ ಜನರಿಗೆ ನೀಡಿದ ಭರವಸೆಯಂತೆ 10 ಕೆಜಿ ಅಕ್ಕಿ ನೀಡಲು ಕಾಂಗ್ರೆಸ್ ಸರ್ಕಾರ ಕಸರತ್ತು ನಡೆಸುತ್ತಿದೆ. ಈ ಬಗ್ಗೆ ಮಾತನಾಡಿದ ಸಚಿವ ಕೆ.ಹೆಚ್. ಮುನಿಯಪ್ಪ (K.H.Muniyappa), ಅಕ್ಕಿ ಕೊಡಲು ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸಗಠ ಸರ್ಕಾರ ಮುಂದೆ ಬಂದಿವೆ ಎಂದರು.

ಒಂದು ವಾರದಲ್ಲಿ ಅಕ್ಕಿ ಖರೀದಿ ಪೈನಲ್ ಆಗಲಿದೆ. ಸದ್ಯ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಬೆಲೆ ನಿಗದಿ ವಿಚಾರವಾಗಿ ಮಾತುಕತೆ ನಡೆಯುತ್ತಿದೆ. ಆದಷ್ಟು ಬೇಗ ಹತ್ತು ಕೆಜಿ ಅಕ್ಕಿ ಕೋಡುವ ಕೆಲಸ ಮಾಡುತ್ತೇವೆ ಎಂದು ಮುನಿಯಪ್ಪ ಹೇಳಿದ್ದಾರೆ.

ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು ಅಕ್ಕಿ

ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು ಅಕ್ಕಿ ನೀಡಲಾಗುವುದು ಎಂದು ಸಚಿವ ಮುನಿಯಪ್ಪ ಹೇಳಿದರು. 114 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಈ ತಾಲೂಕುಗಳಿಗೆ 10 ಕೆಜಿ ಅಕ್ಕಿ ವಿತರಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ಅಲ್ಲದೆ, ಈ ಎಲ್ಲಾ ತಾಲೂಕುಗಳಲ್ಲಿ ಬರ ಘೋಷಣೆಗೆ ಸಿದ್ಧತೆ ನಡೆಸಲಾಗಿದೆ ಎಂದರು.

ಇದನ್ನೂ ಓದಿ: ರಫ್ತು ನಿಷೇಧ ಸಡಿಲಿಕೆ; ಸಿಂಗಾಪುರಕ್ಕೆ ಅಕ್ಕಿ ರಫ್ತು ಮಾಡಲು ಭಾರತ ಅವಕಾಶ; ವಿಶೇಷ ಸಂಬಂಧ ಕಾರಣ

ಡಿಬಿಟಿ ವಿಚಾರದಲ್ಲಿ ಮಾಧ್ಯಮಗಳಿಗೆ ತಪ್ಪು ಮಾಹಿತಿ ಹೋಗಿದೆ. ಜುಲೈ 97 ಲಕ್ಷ ಕಾರ್ಡ್​ಗೆ ಡಿಬಿಟಿ ಮಾಡಿದ್ದೇವೆ. 2.45 ಕೋಟಿ ಜನರಿಗೆ 566 ಕೋಟಿ, ಆಗಸ್ಟ್ ತಿಂಗಳಲ್ಲಿ 3.69 ಕೋಟಿ ಜನರಿಗೆ 606 ಕೋಟಿ ಹಣ ಬಿಡುಗಡೆ ಆಗಿದೆ. ಬ್ಯಾಂಕ್ ಅಕೌಂಟ್ ಇಲ್ಲದ 5 ಲಕ್ಷ ಕಾರ್ಡ್​​ದಾರರು ಇದ್ದಾರೆ. ಬ್ಯಾಂಕ್ ಅಕೌಂಟ್ ಇಲ್ಲದವರು 21 ಲಕ್ಷ ಜನರಿದ್ದಾರೆ. 2 ಲಕ್ಷ ಜನರಿಗೆ ನಾವೇ ಬ್ಯಾಂಕ್ ಅಕೌಂಟ್ ಮಾಡಿದ್ದೇವೆ. 14 ಲಕ್ಷ ಜನರಿಗೆ ನಾವೇ ಅಕೌಂಟ್ ಮಾಡುತ್ತಿದ್ದೇವೆ. ಇದರಿಂದ ಯಾರಿಗೂ ಕೂಡ ಅನ್ಯಾಯ ಆಗುವುದಿಲ್ಲ ಎಂದರು.

ಉಚಿತ ಯೋಜನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟೀಕೆ ವಿಚಾರವಾಗಿ ಮಾತನಾಡಿದ ಸಚಿವ ಮುನಿಯಪ್ಪ, ದೇಶದಲ್ಲಿ ಶೇ. 35-37 ರಷ್ಟು ಬಡತನ ರೇಖೆಗಿಂತ ಕೆಳಗಿನ ಜನರಿದ್ದಾರೆ. ಯುಪಿಎ ಇದ್ದಾಗ ಆಹಾರ ಭದ್ರತಾ ಕಾಯ್ದೆ ತರಲಾಗಿತ್ತು. ಯಾರೂ ಕೂಡ ಕೆಲಸ ಇಲ್ಲದೆ ಮಲಗಬಾರದು ಅಂತ ನರೇಗಾ ಯೋಜನೆ ತಂದಿದ್ದೆವು. ಈ ಆಹಾರ ಭದ್ರತಾ ಕಾಯ್ದೆಯಿಂದ ಜನರಿಗೆ ಅನುಕೂಲ ಆಗುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us