AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜೆ ಹೆಸರಿನಲ್ಲಿ ಆಂಧ್ರದ ಮಹಿಳೆಗೆ ₹2.5 ಕೋಟಿ ವಂಚನೆ: ದುಷ್ಟಶಕ್ತಿ ನೆಪದಲ್ಲಿ ಹಣ ಪಡೆದು ಎಸ್ಕೇಪ್!

ದುಷ್ಟಶಕ್ತಿ ನಿವಾರಣೆ ಮತ್ತು ಪೂಜೆಯ ನೆಪದಲ್ಲಿ ಚಾಮರಾಜಪೇಟೆಯಲ್ಲಿ ವಾಸವಿದ್ದ ಆಂಧ್ರ ಪ್ರದೇಶ ಮೂಲದ ಮಹಿಳೆಯೊಬ್ಬರಿಂದ 2.5 ಕೋಟಿ ರೂ. ಹಣ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ. 10 ಕೋಟಿ ರೂ. ನೀಡುವುದಾಗಿ ನಂಬಿಸಿ ವಂಚಿಸಿದ ಪ್ರಕರಣದಲ್ಲಿ ಮೂವರ ವಿರುದ್ಧ ಸಿಸಿಬಿ ತನಿಖೆ ಆರಂಭಿಸಿದೆ.

ಪೂಜೆ ಹೆಸರಿನಲ್ಲಿ ಆಂಧ್ರದ ಮಹಿಳೆಗೆ ₹2.5 ಕೋಟಿ ವಂಚನೆ: ದುಷ್ಟಶಕ್ತಿ ನೆಪದಲ್ಲಿ ಹಣ ಪಡೆದು ಎಸ್ಕೇಪ್!
ಸಾಂದರ್ಭಿಕ ಚಿತ್ರImage Credit source: tv9
ಶಿವಪ್ರಸಾದ್​ ಬಿ.
| Edited By: |

Updated on:Aug 01, 2026 | 12:17 PM

Share

ಮುಖ್ಯಾಂಶಗಳು

  • ಪೂಜೆ ಹೆಸರಿನಲ್ಲಿ ಮಹಿಳೆಯಿಂದ ₹2.5 ಕೋಟಿ ವಂಚನೆ
  • ₹2.5 ಕೋಟಿ ಕೊಟ್ಟರೆ ₹10 ಕೋಟಿ ಭರವಸೆ
  • ಮೂವರು ಆರೋಪಿಗಳ ವಿರುದ್ಧ ಸಿಸಿಬಿಯಲ್ಲಿ ಎಫ್‌ಐಆರ್

ಬೆಂಗಳೂರು, ಆಗಸ್ಟ್ 1: ದುಷ್ಟಶಕ್ತಿ ನಿವಾರಣೆ ಹಾಗೂ ಪೂಜೆಯ ನೆಪದಲ್ಲಿ ಬೆಂಗಳೂರಿನ (Bengaluru) ಚಾಮರಾಜಪೇಟೆ ನಿವಾಸಿ ಮಹಿಳೆಯೊಬ್ಬರಿಂದ ಬರೋಬ್ಬರಿ 2.5 ಕೋಟಿ ರೂ. ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. 2.5 ಕೋಟಿ ರೂ. ನೀಡಿದರೆ 10 ಕೋಟಿ ರೂ. ಕೊಡಿಸುವುದಾಗಿ ನಂಬಿಸಿ ಹಣ ಪಡೆದ ಆರೋಪಿಗಳ ವಿರುದ್ಧ ಸಿಸಿಬಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.

ಮಗನ ಸಾವಿಗೆ ದುಷ್ಟಶಕ್ತಿಯೇ ಕಾರಣವೆಂದು ನಂಬಿಸಿ ಕೃತ್ಯ

ದೂರುದಾರ ಮಹಿಳೆ ಕುಮುದಾ ಮೂಲತಃ ಆಂಧ್ರಪ್ರದೇಶದವರಾಗಿದ್ದು, ಚಾಮರಾಜಪೇಟೆಯಲ್ಲಿ ವಾಸವಾಗಿದ್ದಾರೆ. ಅವರ ಪುತ್ರ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ. ಕುಮುದಾ ಅವರ ಮನೆಗೆ ದುಷ್ಟಶಕ್ತಿಗಳು ಪ್ರವೇಶಿಸಿದ್ದರಿಂದಲೇ ಮಗನಿಗೆ ಅನಾಹುತವಾಗಿದೆ ಆ ಘಟನೆ ಬಳಿಕ ಎಂದು ಆರೋಪಿಗಳು ನಂಬಿಸಿದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮನೆಯ ಮೇಲೆ ಸಾಲ ಪಡೆಯುವ ವಿಚಾರದಲ್ಲಿ ಪರಿಚಯವಾಗಿದ್ದ ಮಧ್ಯವರ್ತಿಗಳ ಮೂಲಕ ಕುಮುದಾ ಅವರಿಗೆ ಅಪ್ಸರ್ ಪಾಷಾ ಎಂಬಾತನನ್ನು ಬಾಬಾ ಎಂದು ಪರಿಚಯಿಸಲಾಗಿತ್ತು. ಬಳಿಕ ಮನೆಯಲ್ಲಿ ವಿಶೇಷ ಪೂಜೆ ನಡೆಸುವ ನೆಪದಲ್ಲಿ ಆರಂಭದಲ್ಲಿ 8 ಲಕ್ಷ ರೂ. ಪಡೆದಿದ್ದರು ಎನ್ನಲಾಗಿದೆ.

2.5 ಕೋಟಿ ರೂ. ಕೊಟ್ಟರೆ 10 ಕೋಟಿ ರೂ. ನೀಡುವುದಾಗಿ ವಂಚನೆ

ನಂತರ ಆರೋಪಿಗಳು ಮತ್ತಷ್ಟು ಹಣ ನೀಡುವಂತೆ ಕುಮುದಾ ಅವರನ್ನು ನಂಬಿಸಿದ್ದಾರೆ ಎನ್ನಲಾಗಿದೆ. ರಿಸರ್ವ್ ಬ್ಯಾಂಕ್‌ನಿಂದ 500 ಕೋಟಿ ರೂ. ಬರಲಿದೆ. ಆ ಹಣವನ್ನು ಪಡೆಯಲು ತಕ್ಷಣ ಹಣದ ಅಗತ್ಯವಿದೆ ಎಂದು ಹೇಳಿ, 2.5 ಕೋಟಿ ರೂ. ಸಾಲವಾಗಿ ನೀಡಿದರೆ ಬಳಿಕ 10 ಕೋಟಿ ರೂ. ಹಿಂದಿರುಗಿಸುವುದಾಗಿ ಭರವಸೆ ನೀಡಿದ್ದರು ಎನ್ನಲಾಗಿದೆ.

ಮನೆ ಮಾರಾಟ ಮಾಡಿ ಆರೋಪಿಗಳಿಗೆ ಹಣ ನೀಡಿದ್ದ ಸಂತ್ರಸ್ತೆ

ಆರೋಪಿಗಳ ಮಾತನ್ನು ನಂಬಿದ ಕುಮುದಾ, ಚಾಮರಾಜಪೇಟೆಯಲ್ಲಿದ್ದ ತಮ್ಮ ಮನೆಯನ್ನು 8.5 ಕೋಟಿ ರೂ.ಗೆ ಮಾರಾಟ ಮಾಡಿದ್ದರು. ಮನೆ ಮಾರಾಟದಿಂದ ಬಂದ ಹಣದಲ್ಲಿ 2.5 ಕೋಟಿ ರೂ.ಗಳನ್ನು ಆರೋಪಿಗಳಿಗೆ ನೀಡಿದ್ದು, ಬಳಿಕ ಹಣ ವಾಪಸ್ ಕೇಳಿದಾಗ ವಂಚನೆ ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ

ಹಣವನ್ನು ವಾಪಸ್ ನೀಡುವಂತೆ ಕುಮುದಾ ಕೇಳಿದಾಗ ಆರೋಪಿಗಳು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ಎಂದು ಹೇಳಲಾಗಿರುವ ಅಪ್ಸರ್ ಪಾಷಾ ಹಾಗೂ ಮಧ್ಯವರ್ತಿಗಳಾದ ಶಂಕರ್ ಮತ್ತು ಭರತ್ ವಿರುದ್ಧ ಸಿಸಿಬಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ವಿವಿಧ ಆಯಾಮಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Sat, 1 August 26

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!