Insta Love: ಇನ್ಸ್​​​ಟಾಗ್ರಾಮ್​​​ನಲ್ಲಿ ಪರಿಚಯವಾಗಿದ್ದ ಯುವಕನ ಭೇಟಿಗೆ ಬಂದ ವಿವಾಹಿತ ಮಹಿಳೆ, ದರೋಡೆಗೆ ತುತ್ತಾದರು!

Insta Robbery: ಇನ್ಸ್​​​ಟಾಗ್ರಾಮ್​​​ನಲ್ಲಿ ಪರಿಚಯವಾಗಿದ್ದ ಯುವಕ ಮತ್ತು ಮಹಿಳೆ ಬನ್ನೇರುಘಟ್ಟದ ಚಂಪಕಧಾಮಸ್ವಾಮಿ ದೇವಾಲಯದ ಬಳಿ ಭೇಟಿಯಾಗಿದ್ದರು. ಆ ವೇಳೆ ದುಷ್ಕರ್ಮಿಗಳು ರಾಬರಿ ನಡೆಸಿ ಎಸ್ಕೇಪ್ ಆಗಿದ್ದರು. ಬನ್ನೇರುಘಟ್ಟ ಪೊಲೀಸರು ತಲಾಷೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

Insta Love: ಇನ್ಸ್​​​ಟಾಗ್ರಾಮ್​​​ನಲ್ಲಿ ಪರಿಚಯವಾಗಿದ್ದ ಯುವಕನ ಭೇಟಿಗೆ ಬಂದ ವಿವಾಹಿತ ಮಹಿಳೆ, ದರೋಡೆಗೆ ತುತ್ತಾದರು!
ಯುವಕನ ಭೇಟಿಗೆ ಬಂದ ವಿವಾಹಿತ ಮಹಿಳೆ, ದರೋಡೆಗೆ ತುತ್ತಾದರು!
Follow us
ರಾಮು, ಆನೇಕಲ್​
| Updated By: ಸಾಧು ಶ್ರೀನಾಥ್​

Updated on: Jul 27, 2023 | 4:16 PM

ಇನ್ಸ್​​​ಟಾಗ್ರಾಮ್​​​ನಲ್ಲಿ (Instagram) ಪರಿಚಯವಾಗಿದ್ದ ಯುವಕನ ಭೇಟಿಗೆಂದು ಬಂದಿದ್ದ ಮಹಿಳೆ ದರೋಡೆಗೆ (robbery) ಒಳಗಾಗಿದ್ದಾರೆ. 19 ವರ್ಷದ ಯುವಕನ ಭೇಟಿಗೆ ಬಂದಿದ್ದ 36 ವರ್ಷದ ಮಹಿಳೆಯ ಬಳಿ ರಾಬರಿ ಮಾಡಲಾಗಿದೆ. ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದ 36 ವರ್ಷದ ಮಹಿಳೆ ಮತ್ತು 19 ವರ್ಷದ ಮಹಾಂತೇಶ್ ಇನ್ಸ್​​​ಟಾಗ್ರಾಮ್​​​ನಲ್ಲಿ ಪರಿಚಯವಾಗಿದ್ದ. ಆರು ತಿಂಗಳಿನಿಂದ ಈ ಪರಿಚಯ ಪರಸ್ಪರ ಗಾಢ ಸ್ನೇಹಕ್ಕೆ ತಿರುಗಿತ್ತು. ಇದೇ ಜುಲೈ 12ನೇ ತಾರೀಖು ಸದರಿ ಮಹಿಳೆಯು ಯುವಕನ ಭೇಟಿಯಾಗಲು ಬಂದಿದ್ದರು.

ಇಬ್ಬರೂ ಬನ್ನೇರುಘಟ್ಟದ ಚಂಪಕಧಾಮಸ್ವಾಮಿ ದೇವಾಲಯದ ಬಳಿ ಭೇಟಿಯಾಗಲು ಬಂದಿದ್ರು. ದೇವಾಲಯಕ್ಕೆ ಹೋಗಿ, ಬಳಿಕ ಅಲ್ಲಿಯೇ ಬಂಡೆಯ ಮೇಲೆ ಕುಳಿತಿದ್ದಾಗ ಬಂದ ದುಷ್ಕರ್ಮಿಗಳು ಬಂದಿದ್ದಾರೆ. ಇದೇ ವೇಳೆ ಅಸಾಮಿಗಳು ರಾಬರಿ ನಡೆಸಿ ಎಸ್ಕೇಪ್ ಆಗಿದ್ದಾರೆ. ಈ ಪ್ರಕರಣದಲ್ಲಿ ಸುರೇಶ್ (23) ಮತ್ತು ಗುರು(24) ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ (Bannerghatta Police).

ಚಂಪಕಧಾಮಸ್ವಾಮಿ ದೇವಾಲಯದ ಬಳಿ  ಏನು ನಡೆದಿತ್ತು ಅಲ್ಲಿ?:

ಸದರಿ ಯುವಕ ಮತ್ತು ವಿವಾಹಿತ ಮಹಿಳೆ ಚಂಪಕಧಾಮಸ್ವಾಮಿ ದೇವಾಲಯದ ಬಳಿ ಇದ್ದಾಗ ಅಲ್ಲಿಗೆ ಬಂದ ದುಷ್ಕರ್ಮಿಗಳಿಬ್ಬರೂ ವಿಡಿಯೋ ಮಾಡಿಕೊಂಡು ನಿಮ್ಮ ಕುಟುಂಬದವರಿಗೆ ತಿಳಿಸೋದಾಗಿ ಬೆದರಿಕೆ ಹಾಕಿದ್ದಾರೆ. ಮದುವೆಯಾಗಿದ್ದರೂ ಪರ ಪುರುಷನ ಜೊತೆ ಬಂದಿರೋದಾಗಿ ತಿಳಿಸುತ್ತೇವೆಂದು ಮಹಿಳೆಗೆ ಬೆದರಿಕೆ ಹಾಕಿದ್ದಾರೆ. ಅದೇ ರೀತಿ ಯುವಕನನ್ನು ಹೆದರಿಸಿದ್ದ ಕಿರಾತಕರು ಪೊಲೀಸರಿಗೆ ಹೇಳಿ ಜೈಲಿಗೆ ಕಳುಹಿಸುತ್ತೇವೆಂದು ಬೆದರಿಕೆ ಹಾಕಿದ್ದಾರೆ.

ದುಷ್ಕರ್ಮಿಗಳಿಬ್ಬರೂ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಚೈನ್ ಮತ್ತು ಮೊಬೈಲ್ ಕಿತ್ತುಕೊಂಡಿದ್ದಾರೆ. ಆರೋಪಿಗಳು ಯುವಕ ಮಹಾಂತೇಶ್ ಬಳಿ ಹಣ ನೀಡುವಂತೆ ಬೆದರಿಸಿದ್ದಾರೆ. ಅದರಂತೆ ಮಹಾಂತೇಶ್ ತನ್ನ ಸ್ನೇಹಿತನ ಮೊಬೈಲಿಗೆ ಪೋನ್ ಮಾಡಿ ಆರೋಪಿಗಳ ನಂಬರಿಗೆ 10 ಸಾವಿರ ರೂಪಾಯಿ ಪೋನ್ ಪೇ ಮಾಡಿಸಿದ್ದ. ದುಷ್ಕರ್ಮಿಗಳಿಬ್ಬರೂ ಜೋಡಿಯಿಂದ ಚಿನ್ನ, ಮೊಬೈಲ್, ನಗದು ದೋಚಿ ಪರಾರಿಯಾಗಿದ್ದರು.

ಅದಾದ ಮೇಲೆ ಮಹಿಳೆ ಹಾಗೂ ಯುವಕನಿಂದ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಬನ್ನೇರುಘಟ್ಟ ಪೊಲೀಸರು ತಲಾಷೆ ನಡೆಸಿ, ಸಮೀಪದ ಕೋಳಿಫಾರಂ ಗೇಟ್ ಬಳಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 30 ಗ್ರಾಂ ಚಿನ್ನದ ಸರ, ಹತ್ತು ಸಾವಿರ ನಗದು, ಮೊಬೈಲ್ ವಶ ಪಡಿಸಿಕೊಂಡಿದ್ದಾರೆ. ಇನ್ಸ್ ಪೆಕ್ಟರ್ ಉಮಾಮಹೇಶ್ ನೇತೃತ್ವದ ತಂಡ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಗಳಾದ ಸುರೇಶ್ ಹಾಗೂ ಗುರು ಇಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಆನೇಕಲ್ ಕುರಿತಾದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ