AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಚರ್ ವಾಹನ ಹರಿದು ಬಾಲಕಿ ಸಾವು; ಕ್ರೀಡಾಕೂಟದ ಸಂಭ್ರಮಾಚರಣೆ ವೇಳೆ ಕಲ್ಲು ತೂರಾಟ

ಈಚರ್ ವಾಹನ ಹರಿದು ಬಾಲಕಿ ಸಾವನ್ನಪ್ಪಿರುವ ಘಟನೆ ಸರ್ಜಾಪುರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮನಹಳ್ಳಿಯಲ್ಲಿ ನಡೆದಿದೆ.

ಈಚರ್ ವಾಹನ ಹರಿದು ಬಾಲಕಿ ಸಾವು; ಕ್ರೀಡಾಕೂಟದ ಸಂಭ್ರಮಾಚರಣೆ ವೇಳೆ ಕಲ್ಲು ತೂರಾಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 22, 2022 | 6:28 PM

Share

ಆನೇಕಲ್​​: ಈಚರ್ ವಾಹನ ಹರಿದು ಬಾಲಕಿ ಸಾವನ್ನಪ್ಪಿರುವ ಘಟನೆ ಸರ್ಜಾಪುರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮನಹಳ್ಳಿಯಲ್ಲಿ ನಡೆದಿದೆ. ಒಂದುವರೆ ವರ್ಷದ ಮನಿಶಾ ದೇವಿ ಮೃತ  ಕಂದಮ್ಮ. ಮಗುವಿನ ತಂದೆ ಬಾಲಕೃಷ್ಣ ವಾಹನ ರಿವರ್ಸ್ ತೆಗೆದುಕೊಳ್ಳಲು ಹೋದಾಗ ದುರ್ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮನಿಶಾದೇವಿ ಸಾವನ್ನಪ್ಪಿದ್ದಾರೆ. ಸರ್ಜಾಪುರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕ್ರೀಡಾಕೂಟದಲ್ಲಿ ಗೆದ್ದವರ ಸಂಭ್ರಮಾಚರಣೆ ವೇಳೆ ಕಲ್ಲು ತೂರಾಟ

ಬಾಗಲಕೋಟೆ: ಕ್ರೀಡಾಕೂಟದಲ್ಲಿ ಗೆದ್ದವರ ಸಂಭ್ರಮಾಚರಣೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ರಡ್ಡೇರ ತಿಮ್ಮಾಪುರದ ಆತ್ಮಾನಂದ ಪ್ರೌಢಶಾಲೆ ಆವರಣದಲ್ಲಿ ನಡೆದಿದೆ. ಕಲ್ಲು ತೂರಾಟದಲ್ಲಿ ಸಿದ್ದಪ್ಪ ಬೀರನೂರ, ರವಿ ನಾಯ್ಕರ್​​​ಗೆ ಗಾಯಗಳಾಗಿವೆ. ಕ್ಲಸ್ಟರ್ ಮಟ್ಟದ ಶಾಲಾ ಕ್ರೀಡಾಕೂಟದಲ್ಲಿ ಗೆದ್ದ ತಂಡದ ಬೆಂಬಲಿಗರಿಂದ ಸಿಳ್ಳೆ, ಕೇಕೆ ಹಾಕಿ ಸಂಭ್ರಮಾಚರಣೆ ಮಾಡುತ್ತಿದ್ದ ವೇಳೆ ಚಿಂಚಲಕಟ್ಟಿ ನೀರಲಕೇರಿ ಗ್ರಾಮದ ಪ್ರೌಢಶಾಲಾ ತಂಡಗಳ ಗಲಾಟೆ ತೆಗೆದಿದ್ದಾರೆ.

ಈ ವೇಳೆ ಉಭಯ ಗುಂಪುಗಳ ನಡುವೆ ಕಲ್ಲು ತೂರಾಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಾದಾಮಿ ಸಿಪಿಐ ಕರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Published On - 6:28 pm, Fri, 22 July 22

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ