AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​ನಲ್ಲಿ ಭೀಕರ ಅಪಘಾತ: ಕ್ರೇನ್​ನಿಂದ ಮೃತದೇಹಗಳನ್ನ ಹೊರ ತೆಗೆದ ಪೊಲೀಸ್ರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಸಿದ್ದಯ್ಯನದೊಡ್ಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿ ಕಂದಕಕ್ಕೆ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಗಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಆನೇಕಲ್​ನಲ್ಲಿ ಭೀಕರ ಅಪಘಾತ: ಕ್ರೇನ್​ನಿಂದ ಮೃತದೇಹಗಳನ್ನ ಹೊರ ತೆಗೆದ ಪೊಲೀಸ್ರು
ಉರುಳಿಬಿದ್ದಿರುವ ಕಂಟೈನರ್
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ|

Updated on:Oct 26, 2025 | 3:59 PM

Share

ಆನೇಕಲ್, ಅಕ್ಟೋಬರ್​ 26: ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಪಲ್ಟಿ (Accident) ಹೊಡೆದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸಿದ್ದಯ್ಯನದೊಡ್ಡಿ ಬಳಿ ನಡೆದಿದೆ. ಆಂಧ್ರ ಮೂಲದ ಶ್ರೀಮಾನ್(25) ಮತ್ತು ಜಾರ್ಖಂಡ್ ಮೂಲದ ಶ್ರೀನಿವಾಸ್(28) ಮೃತ ದುರ್ದೈವಿಗಳು. ಸದ್ಯ ಕ್ರೇನ್​ನಿಂದ ಮೃತದೇಹಗಳನ್ನ ಪೊಲೀಸರು ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಜಿಗಣಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದದ್ದೇನು?

ಇಳಿಜಾರಿನ ತಿರುವಿನಲ್ಲಿ ಅತಿವೇಗವಾಗಿ ಬಂದ ಕಂಟೈನರ್, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಬೆಳಿಗ್ಗೆ 11ಗಂಟೆಯ ಸುಮಾರಿಗೆ ಅವಘಡ ನಡೆದಿದೆ. ಯಲಹಂಕದಲ್ಲಿರುವ Jd ಎಂಟರ್ಪ್ರೈಸಸ್​​ಗೆ ಸೇರಿದ ಕಂಟೈನರ್​ನಲ್ಲಿ ರಸ್ತೆಯ ಕೇಬಲ್ ಡ್ರೀಲಿಂಗ್ ಮಿಷನ್ ತುಂಬಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಾಲ್ಕು ವರ್ಷಗಳಲ್ಲಿ 3,500 ಕ್ಕೂ ಹೆಚ್ಚು ಅಪಘಾತ, ಆದರೆ ಶಿಕ್ಷೆ ಪ್ರಮಾಣ 7% : ವರದಿ

ಕಂದಕ್ಕೆ ಉರುಳಿ ವಾಹನದ ಕೆಳಗೆ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಜಿಗಣಿಯ ವಿಜಯಶ್ರೀ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ.

ಕ್ರೇನ್ ನೆರವಿನಿಂದ ಮೃತದೇಹಗಳು ಹೊರ ತೆಗೆದ ಪೊಲೀಸ್​

ಕ್ಯಾಂಟರ್ ಕೆಳಗೆ ಸಿಲುಕಿದ್ದ ಮೃತದೇಹಗಳನ್ನು ಸದ್ಯ ಎರಡು ಕ್ರೇನ್ ನೆರವಿನಿಂದ ಹೊರ ತೆಗೆಯಲಾಗಿದೆ. ಕ್ಯಾಂಟರ್ ಚಾಲಕನಾಗಿದ್ದ ಮೃತ ಶ್ರೀನಿವಾಸ್, ಕೇಬಲ್ ಡ್ರಿಲ್ಲಿಂಗ್ ‌ಮಿಷನ್ ಆಪರೇಟರ್ ಆಗಿದ್ದ ಮೃತ ಶ್ರೀಮಾನ್.

ಇನ್ನು ಸ್ಥಳಕ್ಕೆ ಡಿವೈಎಸ್​​ಪಿ ಮೋಹನ್‌ ಕುಮಾರ್, ಜಿಗಣಿ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್​​ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ 10 ನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಲಾರಿವೊಂದು ಪಲ್ಟಿ ಆಗಿರುವಂತಹ ಘಟನೆ ನಡೆದಿದೆ. ಟ್ರಕ್ ರಸ್ತೆಗೆ ಅಡ್ಡಲಾಗಿ ಬಿದ್ದ ಹಿನ್ನೆಲೆ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇದನ್ನೂ ಓದಿ: ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಚಾರ್ಮಾಡಿ ಘಾಟಿಯಲ್ಲಿ ಬೃಹತ್ ಗಾತ್ರದ ವಾಹನಗಳಿಗೆ ಸಂಚಾರ ನಿರ್ಬಂಧ ಇದ್ದರು ಕೊಟ್ಟಿಗೆಹಾರ ಚೆಕ್ ಪೋಸ್ಟ್​​ನಲ್ಲಿ ಸಿಬ್ಬಂದಿ ಲಾರಿ ತಡೆದಿಲ್ಲ. ಚಿಕ್ಕಮಗಳೂರು ಮಾರ್ಗವಾಗಿ ಚಾರ್ಮಾಡಿ ಘಾಟಿ ಮೂಲಕ ಮಂಗಳೂರಿಗೆ ಲಾರಿ ತೆರಳುತ್ತಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:57 pm, Sun, 26 October 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ