AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಯುವತಿಯೊಂದಿಗೆ ಚಾಟಿಂಗ್; ಜಿಮ್​​ಗೆ ನುಗ್ಗಿ ಸಹೋದರರಿಂದ ಟ್ರೈನರ್ ಮೇಲೆ ಹಲ್ಲೆ

ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಅನಂತನಗರದ ಜಿಮ್ ಟ್ರೈನರ್​ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಕ್ಲೈಂಟ್​ಗೆ ಮೆಸೇಜ್​​ ಮಾಡಿದ್ದಕ್ಕೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಜಿಮ್ ಟ್ರೈನರ್​​ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್​​​ಐಆರ್​ ದಾಖಲಾಗಿದೆ.

ಆನೇಕಲ್: ಯುವತಿಯೊಂದಿಗೆ ಚಾಟಿಂಗ್; ಜಿಮ್​​ಗೆ ನುಗ್ಗಿ ಸಹೋದರರಿಂದ ಟ್ರೈನರ್ ಮೇಲೆ ಹಲ್ಲೆ
ಟ್ರೈನರ್ ಮೇಲೆ ಮಾರಣಾಂತಿಕ ಹಲ್ಲೆ
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 01, 2025 | 1:23 PM

Share

ಆನೇಕಲ್, ಅಕ್ಟೋಬರ್​ 01: ಸಿನಿಮಾ ಸ್ಟೈಲ್​ನಲ್ಲಿ ಏಕಾಏಕಿ ಜಿಮ್​ಗೆ ನುಗ್ಗದ ಐವರು ಟ್ರೈನರ್ (trainer) ಮೇಲೆ ಮಾರಣಾಂತಿಕ ಹಲ್ಲೆ (Assault) ಮಾಡಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಅನಂತನಗರದ ರಿಪ್ಡ್ ಜಿಮ್​ನಲ್ಲಿ ಸೆಪ್ಟೆಂಬರ್​ 23ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯ ದೃಶ್ಯ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆ ಆಗಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ.

ನಡೆದದ್ದೇನು?

ಆನೇಕಲ್ ನಿವಾಸಿ ಸಂದೀಪ್ ಹಲ್ಲೆಗೊಳಗಾದ ಜಿಮ್ ಟ್ರೈನರ್​.​ ​ಅರುಣ್, ಗೌತಮ್, ಅನುಷಾ, ಮೇಘನಾ ಸೇರಿ ಐವರಿಂದ ಹಲ್ಲೆ ಮಾಡಲಾಗಿದೆ. ಅನುಷಾ ಟ್ರೈನರ್ ಸಂದೀಪ್ ಕ್ಲೈಂಟ್ ಆಗಿದ್ದು, ಇಬ್ಬರು ಸ್ನೇಹಿತರಾಗಿದ್ದರು. ವಾಟ್ಸಾಪ್​ನಲ್ಲಿ ಚಾಟಿಂಗ್ ಕೂಡ ಮಾಡುತ್ತಿದ್ದರು.

ಇದನ್ನೂ ಓದಿ: ಫೇಸ್​ಬುಕ್​ನಲ್ಲಿ ಪರಿಚಯವಾದ ಮಹಿಳೆ ಜತೆ ಸಲುಗೆ, ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್​ಮೇಲ್: ಲಕ್ಷಾಂತರ ರೂ. ವಂಚನೆ

ಅನುಷಾ ಮೊಬೈಲ್ ಚೆಕ್ ಮಾಡಿದಾಗ ಇವರಿಬ್ಬ ಸ್ನೇಹದ ಬಗ್ಗೆ ಅನುಷಾಳ ಸಹೋದರರಾದ ಗೌತಮ್ ಮತ್ತು ಅರುಣ್​​ಗೆ ಗೊತ್ತಾಗಿದೆ. ಅನುಷಾ ಮೊಬೈಲ್ ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿ ಜಿಮ್​​ಗೆ ನುಗ್ಗಿ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ. ಸದ್ಯ ಐವರ ವಿರುದ್ಧ ಎಫ್​​ಐಆರ್​​ ದಾಖಲಾಗಿದ್ದು, ಗಂಭೀರ ಗಾಯಗೊಂಡ ಸಂದೀಪ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಬೈಕ್​ಗಳ ನಡುವೆ ಡಿಕ್ಕಿ: ಇಬ್ಬರಿಗೆ ಗಾಯ

ಎರಡು ಬೈಕ್​ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವಂತಹ ಘಟನೆ ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ನಡೆದಿದೆ. ವಿನಯ್(23) ಸ್ಥಿತಿ ಗಂಭೀರವಾಗಿದ್ದು, ಸಿರಿ(22)ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಹುಡುಗಿಯರನ್ನ ಚುಡಾಯಿಸಿದ ಆರೋಪ: ಕುಟುಂಬಗಳ ನಡುವೆ ಮಾರಾಮಾರಿ

ಡಿಯೋ ಬೈಕ್​ನಲ್ಲಿ ಮಹಾಲಕ್ಷ್ಮೀ ಲೇಔಟ್ ಕಡೆ ಸಿರಿ ತೆರಳುತ್ತಿದ್ದರು. ಅದೇ ಮಾರ್ಗವಾಗಿ ವೇಗವಾಗಿ ಯುವಕ ಬೈಕ್​ನಲ್ಲಿ ಬರ್ತಿದ್ದ. ಈ ವೇಳೆ ಅಪಘಾತ ಸಂಭವಿಸಿದೆ. ಹೆಲ್ಮೆಟ್ ಧರಿಸದ ಕಾರಣ ವಿನಯ್ ತಲೆಗೆ ತೀವ್ರ ಪೆಟ್ಟಾಗಿದೆ. ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ