ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನ: ಚಾರ್ಜ್​ಶೀಟ್​ ಸಲ್ಲಿಕೆ, ಸ್ಫೋಟಕ ವಿಚಾರಗಳು ಬಹಿರಂಗ

| Updated By: ವಿವೇಕ ಬಿರಾದಾರ

Updated on: Dec 01, 2024 | 12:25 PM

ಆನೇಕಲ್ ತಾಲ್ಲೂಕಿನ ಜಿಗಣಿಯಲ್ಲಿ ಪಾಕಿಸ್ತಾನದ 22 ನಾಗರಿಕರನ್ನು ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಪೊಲೀಸರು 1000 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು, ಯೂಟ್ಯೂಬ್ ಮೂಲಕ ಧರ್ಮ ಪ್ರಚಾರ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಪಾಕಿಸ್ತಾನದ ಶಾಶ್ವತ ನಿವಾಸ ಪ್ರಮಾಣಪತ್ರಗಳು ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನ: ಚಾರ್ಜ್​ಶೀಟ್​ ಸಲ್ಲಿಕೆ, ಸ್ಫೋಟಕ ವಿಚಾರಗಳು ಬಹಿರಂಗ
ಆರೋಪಿ ರಶೀದ್ ಅಲಿ ಸಿದ್ದಿಕ್ಕಿಯ ಪಾಕಿಸ್ತಾನದ ಶಾಶ್ವತ ನಿವಾಸ ಪ್ರಮಾಣಪತ್ರ
Follow us on

ಆನೇಕಲ್, ಡಿಸೆಂಬರ್​ 01: ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನಕ್ಕೆ (Pakistan Citizen) ಸಂಬಂಧಿಸಿದಂತೆ ಒಂದು ಪ್ರಕರಣದ ತನಿಖೆಯನ್ನು ಪೊಲೀಸರು (Police) ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. 22 ಮಂದಿ ಬಂಧಿತ ಆರೋಪಿಗಳ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 12 ಜನ ಆರೋಪಿಗಳ ಒಂದು ಪ್ರಕರಣದ ತನಿಖೆ ಪೂರ್ಣಗೊಳಿಸಿ 1000 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿಕೆ ಮಾಡಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ ಹಲವು ವಿಚಾರಗಳು ಉಲ್ಲೇಖವಾಗಿವೆ.

ಪ್ರಕರಣದ ಪ್ರಮುಖ ಆರೋಪಿ ರಶೀದ್ ಅಲಿ ಸಿದ್ದಿಕ್ಕಿ ಪಾಕಿಸ್ತಾನ ಮೂಲದವನೆಂದು ಎಂದು ಸಾಬೀತು ಆಗಿದೆ. ಆರೋಪಿ ರಶೀದ್ ಅಲಿ ಸಿದ್ದಿಕ್ಕಿ ಬಳಿ ಪಾಕಿಸ್ತಾನದ ಶಾಶ್ವತ ನಿವಾಸ ಪ್ರಮಾಣಪತ್ರ ಪತ್ತೆಯಾಗಿದೆ. 12 ಜನ ಆರೋಪಿಗಳಲ್ಲಿ ಎಂಟು ಮಂದಿ ಪುರುಷರು, ಮೂವರು ಮಹಿಳೆಯರು ಮತ್ತು ಓರ್ವ ಬಾಲಕಿ ಇದ್ದಾಳೆ. ಈ ಎಲ್ಲರೂ ಅಕ್ರಮವಾಗಿ ಭಾರತಕ್ಕೆ ಬಂದಿದ್ದಾರೆ.

ಪಾಕಿಸ್ತಾನ ನಿವಾಸಿಗಳು 22 ಮಂದಿಯನ್ನ ಬಹಿಷ್ಕರಿಸಿದ್ದರು. ಬಳಿಕ ಆರೋಪಿಗಳು ಪಾಕಿಸ್ತಾನ ತೊರೆದು ಭಾರತದ ಕಡೆ ಮುಖ ಮಾಡಿದ್ದರು. ವೀಸಾ, ಪಾಸ್ ಪೋರ್ಟ್ ಇಲ್ಲದಂತೆ ಅಕ್ರಮವಾಗಿ ಭಾರತದೊಳಗೆ ನುಸುಳಿದರು. ದೆಹಲಿಯಲ್ಲಿ ನಕಲಿ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮಾಡಿಕೊಂಡಿದ್ದಾರೆ. ಅಲ್ಲದೇ ಭಾರತದ ಪಾಸ್ ಪೋರ್ಟ್ ಸಹ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಪ್ರಜೆಗಳು ಬೆಂಗಳೂರಿನಲ್ಲಿ ನೆಲೆಸಲು ಸಹಾಯ ಮಾಡಿದ್ದ ಆರೋಪಿಯ ಬಂಧನ

ಮುಸ್ಲಿಂ ಹೆಸರುಗಳನ್ನ ಹಿಂದೂಗಳ ಹೆಸರುಗಳನ್ನಾಗಿ ಬದಲಿಸಿಕೊಂಡು, ದೆಹಲಿ, ಬೆಂಗಳೂರು, ಹೈದರಾಬಾದ್ ಸೇರಿ ಹಲವೆಡೆ ವಾಸವಾಗಿದ್ದರು. ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ರಾಜ್ಯಕ್ಕೆ ಬಂದಿದ್ದ ಪಾಕಿಸ್ತಾನ ಪ್ರಜೆಗಳು ದಾವಣಗೆರೆ ನಂತರ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ.

ಬೆಂಗಳೂರಿನ ಆನೇಕಲ್ ಸಮೀಪದ ಜಿಗಣಿ ಹಾಗೂ ಪೀಣ್ಯದಲ್ಲಿ ನೆಲೆಸಿದ್ದ ಆರೋಪಿಗಳು, ಯೂಟ್ಯೂಬ್ ಚಾನೆಲ್​ನಲ್ಲಿ ಧರ್ಮ ಬೋಧನೆ ಮಾಡುತ್ತಿದ್ದರು. ತಮ್ಮದೇ ಯೂಟ್ಯೂಬ್ ತೆರೆದು ಅದರಲ್ಲಿ ಧರ್ಮ ಪ್ರಚೋದನೆಯಲ್ಲಿ ತೊಡಗಿದ್ದರು. ಆರೋಪಿಗಳೆಲ್ಲರೂ ಮೆಹದಿ ಫೌಂಡೇಶನ್​ನ ಸದಸ್ಯರಾಗಿದ್ದಾರೆ ಎಂದು ದೋಷಾರೋ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ಇವೆಲ್ಲ ಅಂಶಗಳ ಮೇಲೆ ತನಿಖೆ ನಡೆಸಿದ್ದ ಪೊಲೀಸರು ಸೂಕ್ತ ಸಾಕ್ಷ್ಯಗಳನ್ನ ಕಲೆ ಹಾಕಿದ್ದಾರೆ. ಪಾಕಿಸ್ತಾನ ಪ್ರಜೆಗಳು ಸೇರಿದಂತೆ ಹಲವು ಮಂದಿಯ ಹೇಳಿಕೆ ದಾಖಲು ಮಾಡಿದ್ದಾರೆ. ತಾಂತ್ರಿಕ ಸಾಕ್ಷ್ಯಗಳು, ಸಿಡಿಆರ್ ರಿಪೋರ್ಟ್ ಟವರ್ ಡಂಟ್​ ಮತ್ತು ಯೂಟ್ಯೂಬ್ ಚಾನೆಲ್ ವಿವರನ್ನು ಕಲೆ ಹಾಕಿದ್ದಾರೆ. ಹಾಗೇ, ಬಂಧಿತ ಆರೋಪಿಗಳ ಬಳಿ ಇದ್ದ ಮೊಬೈಲ್​ನಲ್ಲಿನ ಆಡಿಯೋ ಮತ್ತು ವಿಡಿಯೋವನ್ನು ಸಂಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ