AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್! ಪೊಲೀಸರ 7 ವಿಶೇಷ ತಂಡಗಳಿಂದ ಆರೋಪಿಗಳಿಗೆ ಬಲೆ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕರ್ಪೂರು ಗೇಟ್ ಬಳಿ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಅಪಹರಣಕ್ಕೊಳಗಾಗಿದ್ದಾರೆ. ಮಾರ್ಚ್ 8ರಂದು ಸಂಜೆ ನಡೆದ ಈ ಘಟನೆ ಸಂಬಂಧ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ನಡೆಸುತ್ತಿದ್ದಾರೆ. ಗೋಪಾಲ್ ಪತ್ನಿಯ ದೂರಿನ ಮೇರೆಗೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಗೋಪಾಲ್ ಪತ್ತೆಗೆ 7 ವಿಶೇಷ ತಂಡಗಳು ಕಾರ್ಯಪ್ರವೃತ್ತವಾಗಿವೆ.

ಬೆಂಗಳೂರಿನ ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್! ಪೊಲೀಸರ 7 ವಿಶೇಷ ತಂಡಗಳಿಂದ ಆರೋಪಿಗಳಿಗೆ ಬಲೆ
ಬೆಂಗಳೂರಿನ ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್! ಪೊಲೀಸರ 7 ವಿಶೇಷ ತಂಡಗಳಿಂದ ಆರೋಪಿಗಳಿಗೆ ಬಲೆ
ರಾಮು, ಆನೇಕಲ್​
| Edited By: |

Updated on: Mar 09, 2026 | 9:02 AM

Share

ಆನೇಕಲ್, ಮಾರ್ಚ್​ 09: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಕರ್ಪೂರು ಗೇಟ್ ಬಳಿ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಕಿಡ್ನ್ಯಾಪ್ (Kidnap) ಆಗಿದ್ದು, ಪ್ರಕರಣ ಸಂಬಂಧ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್ ಅಲಿಯಾಸ್ ಗೋಪಿ ಎಂಬ ರಿಯಲ್ ಎಸ್ಟೇಟ್ ಏಜೆಂಟ್ ಅವರನ್ನು ಮಾರ್ಚ್ 8ರಂದು ಸಂಜೆ 7.30ರ ಸುಮಾರಿಗೆ ಕಿಡ್ನ್ಯಾಪ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಗೋಪಾಲ್ ಕಾರಿಗೆ ಡಿಕ್ಕಿ ಹೊಡೆದ ಕಿಡಿಗೇಡಿಗಳು

ಗೋಪಾಲ್ ರಿಯಲ್ ಎಸ್ಟೇಟ್ ಹಾಗೂ ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಕರ್ಪೂರು ಗೇಟ್ ಬಳಿ ಗೋಪಾಲ್ ಹಾಗೂ ಸತೀಶ್ ಇದ್ದ ಕಾರಿಗೆ ವಾಹನದಿಂದ ಡಿಕ್ಕಿ ಹೊಡೆದ ಕಿಡಿಗೇಡಿಗಳು ಸ್ಪ್ರೇ ಹಾಕಿ ದಾಳಿ ನಡೆಸಿ ಅವರನ್ನು ಅಪಹರಿಸಿರುವುದಾಗಿ ಕುಟುಂಬಸ್ಥರು ಆರೋಪಿಸದ್ದಾರೆ.

ಕುಟುಂಬಸ್ಥರ ಶಂಕೆ ಅನ್ವಯ ಜಿಗಣಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೋಹನ್ ಬಾಬು, ಹರೀಶ್ ಹಾಗೂ ಕಿರಣ್ ಎಂಬುವರನ್ನು ಗೋಪಾಲ್ ಪತ್ನಿಯ ಆರೋಪದ ಮೇರೆಗೆ ಪೊಲೀಸರು ಕಸ್ಟಡಿಗೆ ಪಡೆದು ತನಿಖೆ ಮುಂದುವರೆಸಿದ್ದಾರೆ. ಅಪಹರಣಗೊಂಡ ಗೋಪಾಲ್ ಪತ್ತೆಗಾಗಿ ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಇಂದು (ಮಾ.09) ಬೆಳಗಿನ ಜಾವ 9 ಇನ್ಸ್‌ಪೆಕ್ಟರ್‌ಗಳ ಸಹಭಾಗಿತ್ವದಲ್ಲಿ 7 ವಿಶೇಷ ತಂಡಗಳನ್ನು ರಚಿಸಲಾಗಿದೆ. ತಂಡಗಳು ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎನ್ನಲಾಗಿದೆ.

ಇದನ್ನೂ ಓದಿ ರಾಜ್ಯದಲ್ಲಿ ಮೂರು ಪ್ರತ್ಯೇಕ ರಸ್ತೆ ಅಪಘಾತಗಳು; ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಇಂದು ಬೆಳಗ್ಗೆ 7 ವಿಶೇಷ ತಂಡಗಳ ರಚನೆ

ಘಟನೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಎಸ್‌ಪಿ ಚಂದ್ರಕಾಂತ್ ಅವರು ಆನೇಕಲ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಎಸ್‌ಪಿ ವೆಂಕಟೇಶ್ ಪ್ರಸನ್ನ ಅವರು ಸ್ಥಳದಲ್ಲೇ ಮೊಕ್ಕಾಂ ಹೂಡಿ ತನಿಖೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅಪಹರಣಗೊಂಡ ಗೋಪಾಲರನ್ನು ಶೀಘ್ರ ಪತ್ತೆಹಚ್ಚಲು ಪೊಲೀಸರು ಎಲ್ಲಾ ದಿಕ್ಕುಗಳಲ್ಲಿ ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?