AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಘೋರ ದುರಂತ: ಶವ ಹೊರತೆಗೆಯಲು ಬಂದ ವ್ಯಕ್ತಿಯೂ ಸಾವು

ಆನೇಕಲ್‌ನ ದಕ್ಷಿಣ ಪಿನಾಕಿನಿ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯ ಶವ ಹೊರತೆಗೆಯಲು ಬಂದ ವ್ಯಕ್ತಿಯೂ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ನಲ್ಲಿ ನಡೆದಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಎರಡು ಶವಗಳಿಗಾಗಿ ಶೋಧ ನಡೆಸಿದ್ದಾರೆ. ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಘೋರ ದುರಂತ: ಶವ ಹೊರತೆಗೆಯಲು ಬಂದ ವ್ಯಕ್ತಿಯೂ ಸಾವು
ದಕ್ಷಿಣ ಪಿನಾಕಿನಿ ನದಿ
ರಾಮು, ಆನೇಕಲ್​
| Edited By: |

Updated on: Nov 16, 2026 | 3:49 PM

Share

ಮುಖ್ಯಾಂಶಗಳು

  • ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ನಲ್ಲಿ ಘೋರ ದುರಂತ
  • ಶವ ಹೊರತೆಗೆಯಲು ಬಂದ ವ್ಯಕ್ತಿಯೂ ನೀರಿನಲ್ಲಿ ಮುಳುಗಿ ಸಾವು
  • ಪೊಲೀಸರ ನಿರ್ಲಕ್ಷ್ಯದಿಂದ ರಕ್ಷಣೆಗೆ ಬಂದಿದ್ದ ಮಂಜುನಾಥ್ ಸಾವು

ಆನೇಕಲ್, ನವೆಂಬರ್​​ 16: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುಗಳೂರಿನ ದಕ್ಷಿಣ ಪಿನಾಕಿನಿ ನದಿಯಲ್ಲಿ ಘೋರ ದುರಂತವೊಂದು ನಡೆದಿದೆ. ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮೃತದೇಹ ಹೊರತೆಗೆಯಲು ಬಂದ ವ್ಯಕ್ತಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಾಲೂರಿನ ಮಂಜುನಾಥ್ ಮೃತ ದುರ್ದೈವಿ. ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಕಲ್ಕುಂಟೆ ಅಗ್ರಹಾರ ಗ್ರಾಮದ ನಿವಾಸಿ ಕವಿತಾ ಶ್ರೀನಿವಾಸ್ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸುಮಾರು 14 ವರ್ಷಗಳ ಹಿಂದೆ ವಿವಾಹವಾಗಿದ್ದ ಕವಿತಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಪತಿ ಮತ್ತು ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿತ್ತು. ಇದರಿಂದ ಮನನೊಂದ ಕವಿತಾ ದಕ್ಷಿಣ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತದೇಹ ಹೊರತೆಗೆಯಲು ಬಂದ ವ್ಯಕ್ತಿಯೂ ಸಾವು

ನದಿಯಲ್ಲಿ ಮಹಿಳೆಯ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಸರ್ಜಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮೃತದೇಹವಮ್ಮು ಹೊರತೆಗೆಯಲು ಮಾಲೂರಿನ ಮಂಜುನಾಥ್​ ಎಂಬುವವರನ್ನು ಪೊಲೀಸರು ಕರೆಸಿದ್ದರು. ಆದರೆ ಮೃತದೇಹವನ್ನು ಹೊರತೆಗೆಯುವ ಸಂದರ್ಭದಲ್ಲಿ ಮಂಜುನಾಥ್​ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

LIVE TV

ಪೊಲೀಸರ ನಿರ್ಲಕ್ಷ್ಯ ಆರೋಪ

ಇನ್ನು ಸರ್ಜಾಪುರ ಪೊಲೀಸರು ಮೃತದೇಹ ಹೊರತೆಗೆಯುವ ಕಾರ್ಯಚರಣೆ ವೇಳೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಅವರ ನಿರ್ಲಕ್ಷ್ಯಕ್ಕೆ ರಕ್ಷಣೆಗೆ ಬಂದ ಮಂಜುನಾಥ್ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಕಾಡಾನೆ ದಾಳಿಗೆ ಹಾಸನದಲ್ಲಿ ಮತ್ತೊಂದು ಬಲಿ: ಮೃತದೇಹವಿದ್ದ ಆ್ಯಂಬುಲೆನ್ಸ್​​ ತಡೆದು ಉದ್ರಿಕ್ತರಿಂದ ಪ್ರತಿಭಟನೆ

ಇನ್ನು ಅಗ್ನಿಶಾಮಕ ತಂಡ ದಕ್ಷಿಣ ಪಿನಾಕಿನಿ ನದಿಯಲ್ಲಿ ಕವಿತಾ ಹಾಗೂ ಮಂಜುನಾಥ್ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ನದಿ ದಡದಲ್ಲಿ ನೂರಾರು ಜನರು ಜಮಾಯಿಸಿದ್ದು, ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌
ಇ-ಕೆವೈಸಿ ಹೆಸರಲ್ಲಿ ವಸೂಲಿಗಿಳಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ
ಇ-ಕೆವೈಸಿ ಹೆಸರಲ್ಲಿ ವಸೂಲಿಗಿಳಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ
ಜೆಡಿಎಸ್‌-ಬಿಜೆಪಿ ಮೈತ್ರಿ ಭಿನ್ನಾಭಿಪ್ರಾಯವಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ
ಜೆಡಿಎಸ್‌-ಬಿಜೆಪಿ ಮೈತ್ರಿ ಭಿನ್ನಾಭಿಪ್ರಾಯವಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ
'ನಿಖಿಲ್​​ಗೆ ದೇಗುಲ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ?': ಪ್ರಿಯಾಂಕ್​​
'ನಿಖಿಲ್​​ಗೆ ದೇಗುಲ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ?': ಪ್ರಿಯಾಂಕ್​​
'ಸಿಎಂ ಸೇರಿ ತನ್ನ ಫೋನ್​​ ಕೂಡ ಕದ್ದಾಲಿಕೆ ಆಗುತ್ತವೆ': ಪ್ರಿಯಾಂಕ್​​ ಖರ್ಗೆ
'ಸಿಎಂ ಸೇರಿ ತನ್ನ ಫೋನ್​​ ಕೂಡ ಕದ್ದಾಲಿಕೆ ಆಗುತ್ತವೆ': ಪ್ರಿಯಾಂಕ್​​ ಖರ್ಗೆ
ಮುಂದಿನ ಸಿನಿಮಾ ಬಗ್ಗೆ ಅಪ್​​ಡೇಟ್ ಕೊಟ್ಟ ರಮಿಕಾ ಶಿವು
ಮುಂದಿನ ಸಿನಿಮಾ ಬಗ್ಗೆ ಅಪ್​​ಡೇಟ್ ಕೊಟ್ಟ ರಮಿಕಾ ಶಿವು
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟ
ಭದ್ರಾ ಡ್ಯಾಂನಿಂದ 10 ದಿನ 1500 ಕ್ಯೂಸೆಕ್ ನೀರು ಬಿಡುಗಡೆ
ಭದ್ರಾ ಡ್ಯಾಂನಿಂದ 10 ದಿನ 1500 ಕ್ಯೂಸೆಕ್ ನೀರು ಬಿಡುಗಡೆ