ಐದು ಗ್ಯಾರೆಂಟಿ ಕೊಟ್ಟ ಕಾಂಗ್ರೆಸ್ ಸರ್ಕಾರಕ್ಕೆ ಈಗ ಎದುರಾಗಿದೆ 6 ನೇ ಗ್ಯಾರೆಂಟಿ ಸವಾಲು! ಅದೇನು, ಯಾಕೆ ಗೊತ್ತಾ?

ಅಂಗನವಾಡಿ ಕೇಂದ್ರಗಳಿಗೆ ಪರ್ಯಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ‌ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ಸೂಚಿಸಿದ್ದಾರೆ. ಅಂಗನವಾಡಿ ಕೇಂದ್ರಗಳು ಅಳಿವಿನಂಚಿಗೆ ತಲುಪಲಿವೆ. ಹೀಗಾಗಿ ಸೆಪ್ಟೆಂಬರ್ 15ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ಮುಂದಾಗಿದ್ದಾರೆ.

ಐದು ಗ್ಯಾರೆಂಟಿ ಕೊಟ್ಟ ಕಾಂಗ್ರೆಸ್ ಸರ್ಕಾರಕ್ಕೆ ಈಗ ಎದುರಾಗಿದೆ 6 ನೇ ಗ್ಯಾರೆಂಟಿ ಸವಾಲು! ಅದೇನು, ಯಾಕೆ ಗೊತ್ತಾ?
ಕಾಂಗ್ರೆಸ್ ಸರ್ಕಾರಕ್ಕೆ ಈಗ ಎದುರಾಗಿದೆ ಆರನೇ ಗ್ಯಾರೆಂಟಿ ಸವಾಲು!
Follow us
| Updated By: ಸಾಧು ಶ್ರೀನಾಥ್​

Updated on:Sep 12, 2023 | 11:51 AM

ಬೆಂಗಳೂರು, ಸೆಪ್ಟೆಂಬರ್​ 12: ಸಿದ್ದರಾಮಯ್ಯ (Siddaramaiah) ನೇತೃತ್ವದ ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷಿ ಗ್ಯಾರೆಂಟಿ ಯೋಜನೆಗಳ (Guarentee) ಪೈಕಿ ಐದನ್ನು ಜಾರಿಗೊಳಿಸಿದೆ. ಇದೀಗ ಆರನೇ ಗ್ಯಾರೆಂಟಿ ಜಾರಿಗೆ ರಾಜ್ಯದ ಜನ ಗಂಟುಬಿದ್ದಿದ್ದಾರೆ. ಅದೇನು ಗೊತ್ತಾ..!? ಕಾಂಗ್ರೆಸ್ ಪಕ್ಷ ಇತ್ತೀಚೆಗೆ ನಡೆದ ಅಸೆಂಬ್ಲಿ ಚುನಾವಣೆ ವೇಳೆ ನೀಡಿದ್ದ ಭರವಸೆಗಳ ಮಹಾಪೂರದ ಪೈಕಿ ಮತ್ತೂ ಒಂದು ಗ್ಯಾರೆಂಟಿ ಭರವಸೆ ನಿಡಿತ್ತು. ಅದನ್ನು ತಕ್ಷಣ ಜಾರಿಗೆ ತರುವಂತೆ ಅಂಗನವಾಡಿ ಕಾರ್ಯಕರ್ತೆಯರು (Anganwadi workers) ಆಗ್ರಹಿಸಿದ್ದಾರೆ. ಇದರಿಂದ ಖಾಸಗಿ ಸಾರಿಗೆ ಟೆನ್ಷನ್ ಮುಕ್ತಾಯದ ಬಳಿಕ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಮಧ್ಯೆ, ಶಿಕ್ಷಣ ಇಲಾಖೆಯ ಹೊಸ ನಿರ್ಧಾರಕ್ಕೆ ಅಂಗನವಾಡಿ ಸಿಬ್ಬಂದಿ ಸಿಡಿದೆದ್ದು, ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ‌ ತರಗತಿ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 15ರಂದು ಶುಕ್ರವಾರ ಬೃಹತ್ ಪ್ರತಿಭಟನೆಗೆ (Protest) ಅಂಗನವಾಡಿ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ.

ಅಂಗನವಾಡಿ ಕೇಂದ್ರಗಳಿಗೆ ಪರ್ಯಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ‌ ತರಗತಿ ಆರಂಭಿಸಲು ಇಲಾಖೆ ಮುಂದಾಗಿದೆ. 262 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭಕ್ಕೆ ತಯಾರಿ ನಡೆಸಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಾಗಾಗಿ ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ಸೂಚಿಸಿದ್ದಾರೆ.

Also Read: Buffalo Theft: ಕಳ್ಳತನ ಮಾಡಿದಾಗ ಈತನ ವಯಸ್ಸು ಕೇವಲ 20 ವರ್ಷ, ಈಗ 80ನೇ ವಯಸ್ಸಿನಲ್ಲಿ ಬೀದರ್ ಪೊಲೀಸರಿಗೆ ಸಿಕ್ಕಿಬಿದ್ದ!

ಅಂಗನವಾಡಿ ಕೇಂದ್ರಗಳು ಅಳಿವಿನಂಚಿಗೆ ತಲುಪಲಿವೆ. ಎರಡು ಇಲಾಖೆಯ ನಡುವಿನ ಸಮನ್ವಯದ ಕೊರತೆಯಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ ಬೀಳೋ ಪರಿಸ್ಥಿತಿ ಉದ್ಭವಿಸಿದೆ. ಸರ್ಕಾರದ ನಡೆಗೆ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ ಖಂಡನೆ ವ್ಯಕ್ತಪಡಿಸಿದೆ. ಹೀಗಾಗಿ ಸೆಪ್ಟೆಂಬರ್ 15ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧಾರ ತೆಗೆದುಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:50 am, Tue, 12 September 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ