ಬೆಂಗಳೂರು, ಸೆಪ್ಟೆಂಬರ್ 12: ಸಿದ್ದರಾಮಯ್ಯ (Siddaramaiah) ನೇತೃತ್ವದ ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷಿ ಗ್ಯಾರೆಂಟಿ ಯೋಜನೆಗಳ (Guarentee) ಪೈಕಿ ಐದನ್ನು ಜಾರಿಗೊಳಿಸಿದೆ. ಇದೀಗ ಆರನೇ ಗ್ಯಾರೆಂಟಿ ಜಾರಿಗೆ ರಾಜ್ಯದ ಜನ ಗಂಟುಬಿದ್ದಿದ್ದಾರೆ. ಅದೇನು ಗೊತ್ತಾ..!? ಕಾಂಗ್ರೆಸ್ ಪಕ್ಷ ಇತ್ತೀಚೆಗೆ ನಡೆದ ಅಸೆಂಬ್ಲಿ ಚುನಾವಣೆ ವೇಳೆ ನೀಡಿದ್ದ ಭರವಸೆಗಳ ಮಹಾಪೂರದ ಪೈಕಿ ಮತ್ತೂ ಒಂದು ಗ್ಯಾರೆಂಟಿ ಭರವಸೆ ನಿಡಿತ್ತು. ಅದನ್ನು ತಕ್ಷಣ ಜಾರಿಗೆ ತರುವಂತೆ ಅಂಗನವಾಡಿ ಕಾರ್ಯಕರ್ತೆಯರು (Anganwadi workers) ಆಗ್ರಹಿಸಿದ್ದಾರೆ. ಇದರಿಂದ ಖಾಸಗಿ ಸಾರಿಗೆ ಟೆನ್ಷನ್ ಮುಕ್ತಾಯದ ಬಳಿಕ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಮಧ್ಯೆ, ಶಿಕ್ಷಣ ಇಲಾಖೆಯ ಹೊಸ ನಿರ್ಧಾರಕ್ಕೆ ಅಂಗನವಾಡಿ ಸಿಬ್ಬಂದಿ ಸಿಡಿದೆದ್ದು, ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 15ರಂದು ಶುಕ್ರವಾರ ಬೃಹತ್ ಪ್ರತಿಭಟನೆಗೆ (Protest) ಅಂಗನವಾಡಿ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ.
ಅಂಗನವಾಡಿ ಕೇಂದ್ರಗಳಿಗೆ ಪರ್ಯಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ಇಲಾಖೆ ಮುಂದಾಗಿದೆ. 262 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭಕ್ಕೆ ತಯಾರಿ ನಡೆಸಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಾಗಾಗಿ ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ಸೂಚಿಸಿದ್ದಾರೆ.
ಅಂಗನವಾಡಿ ಕೇಂದ್ರಗಳು ಅಳಿವಿನಂಚಿಗೆ ತಲುಪಲಿವೆ. ಎರಡು ಇಲಾಖೆಯ ನಡುವಿನ ಸಮನ್ವಯದ ಕೊರತೆಯಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ ಬೀಳೋ ಪರಿಸ್ಥಿತಿ ಉದ್ಭವಿಸಿದೆ. ಸರ್ಕಾರದ ನಡೆಗೆ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಖಂಡನೆ ವ್ಯಕ್ತಪಡಿಸಿದೆ. ಹೀಗಾಗಿ ಸೆಪ್ಟೆಂಬರ್ 15ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧಾರ ತೆಗೆದುಕೊಂಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:50 am, Tue, 12 September 23