AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಡಿಕೆ ಈಡೇರಿಸುವಂತೆ ನ.20ರಿಂದ ಅಂಗನವಾಡಿ ಕಾರ್ಯಕರ್ತೆಯರ ಅನಿರ್ಧಿಷ್ಟಾವಧಿ ಧರಣಿ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಆಫ್ಲೈನ್ ಮೂಲಕ ನೇಮಕಾತಿ ಮಾಡಿಕೊಳ್ಳುಬೇಕೆಂದು ಒತ್ತಾಯಿಸಿ ಸೋಮವಾರ (ನ.20) ರಿಂದ ಎಐಟಿಯುಸಿ ಜಯಮ್ಮ ನೇತೃತ್ವದಲ್ಲಿ ಫ್ರೀಡಂಪಾರ್ಕ್​ನಲ್ಲಿ ಕಾರ್ಯಕರ್ತೆಯರು ಅನಿರ್ಧಷ್ಟಾವಧಿವರೆಗೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.

ಬೇಡಿಕೆ ಈಡೇರಿಸುವಂತೆ ನ.20ರಿಂದ ಅಂಗನವಾಡಿ ಕಾರ್ಯಕರ್ತೆಯರ ಅನಿರ್ಧಿಷ್ಟಾವಧಿ ಧರಣಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Nov 17, 2023 | 12:44 PM

ಬೆಂಗಳೂರು ನ.17: ತಮ್ಮ ಬೇಡಿಕೆಯನ್ನು ಪೂರೈಸುವಂತೆ ಅಂಗನವಾಡಿ ಕಾರ್ಯಕರ್ತೆಯರು (Anganwadi workers) ಮತ್ತು ಸಹಾಯಕಿಯರು ಸರ್ಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ಮಾಡಲು ಸಜ್ಜಾಗಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಆಫ್ಲೈನ್ ಮೂಲಕ ನೇಮಕಾತಿ ಮಾಡಿಕೊಳ್ಳುಬೇಕೆಂದು, ಸೋಮವಾರ (ನ.20) ರಿಂದ ಎಐಟಿಯುಸಿ (AITUC) ಜಯಮ್ಮ ನೇತೃತ್ವದಲ್ಲಿ ಫ್ರೀಡಂಪಾರ್ಕ್​ನಲ್ಲಿ ಅನಿರ್ಧಷ್ಟಾವಧಿವರೆಗೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಒಟ್ಟು 2877 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ 430 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು 1198 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಕಳೆದ 3-4 ವರ್ಷದಿಂದ ನೌಕರರನ್ನ ನೇಮಕ ಮಾಡಿಲ್ಲ. ಮಾರ್ಚ್ 5 ರಂದು ಭೌತಿಕ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಸಾಕಷ್ಟು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಸಿಡಿದೆದ್ದ ಬಿಸಿಯೂಟ, ಅಂಗನವಾಡಿ ಕಾರ್ಯಕರ್ತೆಯರು, ರಾಜ್ಯ ಸರ್ಕಾರಕ್ಕೆ ಡಬಲ್ ಟ್ರಬಲ್…!

ಅರ್ಜಿ ಸಲ್ಲಿಸಿ 8 ತಿಂಗಳು ಕಳೆದರು ಇಲಾಖೆಯ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ. ಅಂಗನವಾಡಿಯಲ್ಲಿ ಸಾಕಷ್ಟು ಕೆಲಸ ಪ್ರತಿನಿತ್ಯ ಇರುವುದರಿಂದ ಒಬ್ಬರ ಕೈಯಲ್ಲಿ ನಿಭಾಯಿಸಲು ಸಾಧ್ಯವಿಲ್ಲ. ಆದ್ದರಿಂದ ಕೂಡಲೇ ನೇಮಕಾತಿ ಮಾಡಿಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ