ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಂದ ಅಹೋರಾತ್ರಿ ಪ್ರತಿಭಟನೆ ಶುರುವಾಗಿದೆ. ಕೇಂದ್ರ ಮತ್ತು ರಾಜ್ಯ ಬಜೆಟ್‌ ಹಿನ್ನೆಲೆ ಗಮನ ಸೆಳೆಯಲು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಇಂದಿನಿಂದ 2 ದಿನ ಧರಣಿಗೆ ಮುಂದಾಗಿದ್ದಾರೆ. ಬಜೆಟ್ ವೇಳೆ ತಮ್ಮ ವೇತನವನ್ನು ಹೆಚ್ಚಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಹಾಗೂ ಎಐಟಿಯುಸಿ ಸಂಘಟನೆಯಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಇಗಾಗಲೇ ಅನೇಕ ಜಿಲ್ಲೆಗಳಿಂದ ಅಂಗನವಾಡಿ ಕಾರ್ಯಕರ್ತೆಯರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿದ್ದಾರೆ. ಸುಮಾರು 11ಗಂಟೆಗೆ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‌ವರೆಗೆ […]

ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆಗೆ ಕುಳಿತೇಬಿಟ್ರು ಅಂಗನವಾಡಿ ಕಾರ್ಯಕರ್ತೆಯರು!
Follow us
ಸಾಧು ಶ್ರೀನಾಥ್​
|

Updated on:Jan 23, 2020 | 4:53 PM

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಂದ ಅಹೋರಾತ್ರಿ ಪ್ರತಿಭಟನೆ ಶುರುವಾಗಿದೆ. ಕೇಂದ್ರ ಮತ್ತು ರಾಜ್ಯ ಬಜೆಟ್‌ ಹಿನ್ನೆಲೆ ಗಮನ ಸೆಳೆಯಲು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಇಂದಿನಿಂದ 2 ದಿನ ಧರಣಿಗೆ ಮುಂದಾಗಿದ್ದಾರೆ. ಬಜೆಟ್ ವೇಳೆ ತಮ್ಮ ವೇತನವನ್ನು ಹೆಚ್ಚಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಹಾಗೂ ಎಐಟಿಯುಸಿ ಸಂಘಟನೆಯಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಇಗಾಗಲೇ ಅನೇಕ ಜಿಲ್ಲೆಗಳಿಂದ ಅಂಗನವಾಡಿ ಕಾರ್ಯಕರ್ತೆಯರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿದ್ದಾರೆ. ಸುಮಾರು 11ಗಂಟೆಗೆ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‌ವರೆಗೆ ಱಲಿ ಮೂಲಕ ತೆರಳಿ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 1 ಲಕ್ಷದ 30 ಸಾವಿರ ಕಾರ್ಯಕರ್ತೆಯರು, ಸಹಾಯಕಿಯರಿದ್ದಾರೆ.

ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು: 1.ಸೇವಾ ಹಿರಿತನದ ಆಧಾರದಲ್ಲಿ ಸಂಬಳ ನೀಡಬೇಕು 2.ಎಲ್.ಕೆ.ಜಿ ಮತ್ತು ಯು.ಕೆ.ಜಿ ಗಳನ್ನು ಅಂಗನವಾಡಿಯಲ್ಲೇ ಆರಂಭಿಸಬೇಕು 3. ವೇತನ ಆಯೋಗದ ಪ್ರಕಾರ ಕನಿಷ್ಠ ವೇತನ 17 ಸಾವಿರ ನೀಡಬೇಕು 4. ನಿವೃತ್ತಿ ನಂತರ ತಿಂಗಳ ಮೂರು ಸಾವಿರ ರೂಪಾಯಿ ಪಿಂಚಣಿ ನೀಡಬೇಕು 5. ನಿವೃತ್ತಿಯಾದವರಿಗೆ 50 ಸಾವಿರ ರೂಪಾಯಿ ನೀಡಲಾಗ್ತಿತ್ತು ಕಳೆದ ಎರಡು ವರ್ಷಗಳಿಂದ ಅದನ್ನು ನಿಲ್ಲಿಸಲಾಗಿದೆ ಅದನ್ನು ಪ್ರಾರಂಭಿಸಬೇಕು

Published On - 9:36 am, Thu, 23 January 20

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?