ತಮಿಳುನಾಡಿಗೆ ನೀರು ಹರಿಸಲು ಕೋರ್ಟ್ ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ, ವಿಧಾನಸೌಧ ಮುತ್ತಿಗೆ ಹಾಕಲು ಕರವೇ ನಿರ್ಧಾರ

ಕಾವೇರಿಗಾಗಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರವೇ ಅಧ್ಯಕ್ಷ ನಾರಾಯಣಗೌಡ ಮುಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸಬಾರದು. ಕಾವೇರಿ ನೀರು ಹರಿಸುವುದನ್ನ ಕೂಡಲೇ ನಿಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ಕೊಟ್ಟಿದೆ. ಇಂದು 12 ಗಂಟೆಗೆ ಕರವೇ ನಾರಯಣಗೌಡ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.

ತಮಿಳುನಾಡಿಗೆ ನೀರು ಹರಿಸಲು ಕೋರ್ಟ್ ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ, ವಿಧಾನಸೌಧ ಮುತ್ತಿಗೆ ಹಾಕಲು ಕರವೇ ನಿರ್ಧಾರ
ವಿಧಾನಸೌಧ ಮುತ್ತಿಗೆ ಹಾಕಲು ಕರವೇ ಪ್ಲಾನ್
Follow us
Kiran Surya
| Updated By: ಆಯೇಷಾ ಬಾನು

Updated on:Sep 21, 2023 | 12:35 PM

ಬೆಂಗಳೂರು, ಸೆ.21: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಬಿಡಲು ಮತ್ತೆ ಸುಪ್ರೀಂ ಕೋರ್ಟ್(Supreme Court) ಆದೇಶ ಕೊಟ್ಟಿದೆ. ಈ ಹಿನ್ನೆಲೆ ಬೆಂಗಳೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಆಕ್ರೋಶ ಭುಗಿಲೆದ್ದಿದೆ(Cauvery Water Dispute) . ಆದೇಶ ಹೊರ ಬೀಳುತ್ತಿದ್ದಂತೆ ರಾಜ್ಯದ ಅನೇಕ ಕಡೆಗಳಲ್ಲಿ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಯಲಿದೆ. ಹಾಗೂ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ಕೆಆಸ್​ಎಸ್ ಪಕ್ಷ ಕರೆ ಕೊಟ್ಟಿದೆ. ಮಂಡ್ಯದ ಸಂಜಯ್ ಸರ್ಕಲ್​ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ.

ಕಾವೇರಿಗಾಗಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರವೇ ಅಧ್ಯಕ್ಷ ನಾರಾಯಣಗೌಡ ಮುಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸಬಾರದು. ಕಾವೇರಿ ನೀರು ಹರಿಸುವುದನ್ನ ಕೂಡಲೇ ನಿಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ಕೊಟ್ಟಿದೆ. ಇಂದು 12 ಗಂಟೆಗೆ ಕರವೇ ನಾರಯಣಗೌಡ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕಕ್ಕೆ ಶಾಕ್, ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ

ಇನ್ನು ಮತ್ತೊಂದೆಡೆ ಪ್ರತಿಭಟನೆ ರ್ಯಾಲಿ ತಡೆಯಲು ಪೊಲೀಸರು ಸಿದ್ದತೆ ಮಾಡಿಕೊಂಡಿದ್ದಾರೆ. ಕರ್ನಾಟಕ ಮತ್ತು ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರತರವಾದ ಬರಗಾಲವಿದೆ. ತಮಿಳುನಾಡಿಗೆ ಮತ್ತೆ ಹದಿನೈದು ದಿನಗಳ ಕಾಲ 5,000 ಕ್ಯೂಸೆಕ್ಸ್ ನೀರು ಹರಿಸಲು ಆದೇಶ ಮಾಡಿರೋದು ಅನ್ಯಾಯ. ಹಳೇ ಮೈಸೂರಿನ ಭಾಗದ ಜನರಿಗೆ ವಿಷ ಉಣಿಸುವ ಆದೇಶವಾಗಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಇದನ್ನು ಪಾಲಿಸಬಾರದು. ಕರ್ನಾಟಕದ ರೈತರಿಗೆ ಮರಣ ಶಾಸನವಾಗಿರುವ ಈ ಆದೇಶ ವಾಪಾಸ್ ಪಡೆಯಬೇಕು. ಜನರಿಗೆ ಕುಡಿಯುವ ನೀರಿಗೆ ಆಸರೆಯಾಗಿರುವ ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹರಿಸಬಾರದು ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಒತ್ತಾಯಿಸಿದ್ದಾರೆ. ಗಾಂಧಿನಗರದ ಕರವೇ ಕೇಂದ್ರ ಕಚೇರಿ ಮುಂಭಾಗದಿಂದ ವಿಧಾನಸೌಧದವರೆಗೆ ಕಾಲ್ನಡಿಗೆ ಮೂಲಕ ಜಾಥಾ ಮಾಡಿ ಬಳಿಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ಪ್ಲಾನ್ ಮಾಡಿಕೊಳ್ಳಲಾಗಿದೆ.

ಬೀದಿಗಿಳಿದ ಕನ್ನಡ ಪರ ಸಂಘಟನೆಗಳು

ಚಾಮರಾಜನಗರದಲ್ಲಿ ಸುಪ್ರೀಂ ತೀರ್ಪು ಆಚೆ ಬರುತ್ತಿದ್ದಂತೆ ಕನ್ನಡ ಪರ ಸಂಘಟನೆಗಳು ಬೀದಿಗಿಳಿದಿವೆ. ಕೈಯಲ್ಲಿ ಖಾಲಿ ಮಡಕೆ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸುತ್ತಿವೆ. ಕನ್ನಡ ಪರ ಹೋರಾಟಗಾರರು ಸುಪ್ರೀಂ ಆದೇಶದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೈಯಲ್ಲಿ ಮಡಿಕೆ ಹಿಡಿದು ಭುವನೇಶ್ವರಿ ವೃತ್ತದ ವರೆಗೆ ಕಾಲ್ನಡಿಗೆ ಹೊರಟಿದ್ದಾರೆ. ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೂ ಪ್ರತಿ ಭಾರಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಕನ್ನಡ ಪರ ಹೋರಾಟಗಾರರು

ಮಂಡ್ಯದಲ್ಲಿ ಮಹಿಳಾ ಹೋರಾಟಗಾರ್ತಿಯರು ಸುಪ್ರೀಂಕೋರ್ಟ್​ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಮರಣ ಶಾಸನ ಎಂದು ಕಣ್ಣೀರಿಟ್ಟಿದ್ದಾರೆ. ರಾಜ್ಯದ ಎಲ್ಲಾ ಸಂಸದರು ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.

ಮೈಸೂರಿನ ಕಾಡಾ ಕಚೇರಿಗೆ ಮುತ್ತಿಗೆ

ಇನ್ನು ಮೈಸೂರಿನ ಬಸವೇಶ್ವರ ವೃತ್ತದ ಬಳಿ ರೈತ ಪರ ಸಂಘಟನೆಗಳು ಧರಣಿ ನಡೆಸುತ್ತಿವೆ. ನಗರದ ಬಸವೇಶ್ವರ ವೃತ್ತದಿಂದ ಕಾಡಾ ಕಚೇರಿವರೆಗೂ ಮೆರವಣಿಗೆ ತೆರಳಿ ಕಾಡಾ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ. ಮೈಸೂರು ಜಿಲ್ಲೆಯ ವಿವಿಧ ಭಾಗದ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:01 pm, Thu, 21 September 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್