ಬೆಂಗಳೂರು ವಿವಿ ಕ್ಯಾಂಪಸ್​ನಲ್ಲಿ ಕಾಣಿಸಿಕೊಂಡ ಪ್ರಾಣಿ ಚಿರತೆಯಲ್ಲ, ಕಾಡುಬೆಕ್ಕು: ತಜ್ಞರ ಅಭಿಮತ

ಬೆಂಗಳೂರು ಹೊರವಲಯದ ಕಾಡುಗಳಲ್ಲಿ ಚಿರತೆ ಕಾಣಿಸುವುದರಲ್ಲಿ ವಿಶೇಷ ಏನೂ ಇಲ್ಲ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ವಿಡಿಯೊ ತುಣುಕು ಕಾಡುಬೆಕ್ಕಿನದು.

ಬೆಂಗಳೂರು ವಿವಿ ಕ್ಯಾಂಪಸ್​ನಲ್ಲಿ ಕಾಣಿಸಿಕೊಂಡ ಪ್ರಾಣಿ ಚಿರತೆಯಲ್ಲ, ಕಾಡುಬೆಕ್ಕು: ತಜ್ಞರ ಅಭಿಮತ
ಕಾಡುಬೆಕ್ಕು (ಸಂಗ್ರಹ ಚಿತ್ರ)Image Credit source: wikipedia.org/wiki/Jungle_cat
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 14, 2023 | 10:41 AM

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ (Bangalore University Campus) ಇತ್ತೀಚೆಗೆ ಚಿರತೆ ಕಾಣಿಸಿಕೊಂಡಿದೆ ಎಂದು ಸುದ್ದಿಯಾಗಿತ್ತು. ಆದರೆ ಅದು ಚಿರತೆಯಲ್ಲ, ಅದೇ ಆಕಾರ ಹೋಲುವ ಕಾಡುಬೆಕ್ಕು (Wildcat) ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವನ್ಯಜೀವಿ ಸಂರಕ್ಷಣೆ ಕಾರ್ಯಕರ್ತರು ವಿವರಣೆ ನೀಡಿದ್ದಾರೆ. ಈ ಪ್ರಾಣಿಯು ದಕ್ಷಿಣ ಏಷ್ಯಾದ ಕಾಡುಗಳಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಕಳೆದ ಶುಕ್ರವಾರದಿಂದ ಕಾಡುಬೆಕ್ಕಿನ ಸಿಸಿಟಿವಿ ಫೂಟೇಜ್ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಲು ಆರಂಭಿಸಿತ್ತು. ಅದರ ವಿವರಣೆ ಪಠ್ಯದಲ್ಲಿ ಬೆಕ್ಕು ಎಂಬ ಉಲ್ಲೇಖವಿತ್ತು. ಇದೇ ಹೊತ್ತಿಗೆ ಮಾಧ್ಯಮಗಳಲ್ಲಿ ಚಿರತೆಯ ದೃಶ್ಯಾವಳಿಗಳೊಂದಿಗೆ ಬೆಂಗಳೂರು ವಿಶ್ವವಿದ್ಯಾಲಯದ ಸಮೀಪ ಚಿರತೆಯೊಂದು ಕಾಣಿಸಿಕೊಂಡಿದೆ ಎಂಬ ವಿವರಗಳು ಪ್ರಸಾರವಾಗಿದ್ದವು. ಈ ಸುದ್ದಿಯು ಸಾಮಾನ್ಯ ಜನರಲ್ಲಿ ಅನಗತ್ಯ ಆತಂಕ ಹುಟ್ಟುಹಾಕಿತ್ತು.

ಬೆಂಗಳೂರು ಹೊರವಲಯದ ಕಾಡುಗಳಲ್ಲಿ ಚಿರತೆ ಕಾಣಿಸುವುದರಲ್ಲಿ ವಿಶೇಷ ಏನೂ ಇಲ್ಲ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ವಿಡಿಯೊ ತುಣುಕು ಕಾಡುಬೆಕ್ಕಿನದು. ಅದು ಚಿರತೆ ಅಲ್ಲ. ವಿಡಿಯೊ ಕ್ಲಿಪ್​ನಲ್ಲಿದ್ದ ಪ್ರಾಣಿಯ ದೇಹದ ಗಾತ್ರ ಮತ್ತು ಅದರ ಕಿವಿ ಇರುವ ರೀತಿಯನ್ನು ವಿಶ್ಲೇಷಿಸಿದಾಗ ಅದು ಪ್ರೌಢಾವಸ್ಥೆಯಲ್ಲಿರುವ ಕಾಡುಬೆಕ್ಕು ಎಂಬ ಅಂಶ ಮನದಟ್ಟಾಯಿತು. ಆದರೆ ವಿಶ್ವವಿದ್ಯಾಲಯವು ಮಾಧ್ಯಮ ವರದಿಗಳನ್ನು ಆಧರಿಸಿ ಅಷ್ಟು ಹೊತ್ತಿಗೆ ಅಧಿಸೂಚನೆ ಹೊರಡಿಸಿತ್ತು. ಇದು ಸಾರ್ವಜನಿಕರನ್ನು ತಪ್ಪು ಹಾದಿಗೆ ಎಳೆಯಿತು ಎಂದು ಅರಣ್ಯ ಇಲಾಖೆಯ ಆರ್​ಎಫ್​ಒ ಒಬ್ಬರು ಪ್ರತಿಕ್ರಿಯಿಸಿದರು.

ಕನ್ನಳ್ಳಿ ಸಮೀಪದ ಗಂಗಾಡಿಪುರ ಗ್ರಾಮದ ಮಹಿಳೆಯೊಬ್ಬರು ಬೆಂಗಳೂರು ನಗರ ಆರ್​ಎಫ್​ಒ ಕಚೇರಿಯನ್ನು ಸಂಪರ್ಕಿಸಿ ತಮ್ಮ ಬಳಿ ಇದ್ದ ವಿಡಿಯೊ ತುಣುಕು ಹಂಚಿಕೊಂಡಿದ್ದರು. ಕೃತಕ ಸೌಂಡ್ ಎಫೆಕ್ಟ್ ಮತ್ತು ಗರ್ಜಿಸುವ ಧ್ವನಿಗಳಿದ್ದ ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದ ನಂತರ ವಿಷಯ ಏನೆಂದು ಮನದಟ್ಟಾಯಿತು. ಆದರೂ ಅರಣ್ಯ ಇಲಾಖೆ ಸಿಬ್ಬಂದಿ ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ನಂತರ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಈ ಪ್ರದೇಶದಲ್ಲಿ ಯಾರೊಬ್ಬರಿಗೂ ಚಿರತೆ ಕಾಣಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾಗಿ ಅವರು ಹೇಳಿದರು.

ಇದನ್ನೂ ಓದಿ: ಚಿಕ್ಕೋಡಿ ಡಿವೈಎಸ್ಪಿ ಬಸವರಾಜ್ ಇಂಗ್ಲೀಷಿಗೆ ಅನುವಾದಿಸಿರುವ ಶಿಶುನಾಳ ಶರೀಫರ ಹಾಡು ಬೆಂಗಳೂರು ವಿವಿಗೆ ಪಠ್ಯವಾಯ್ತು!

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು