ನಾನು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಅನಿತಾ ಕುಮಾರಸ್ವಾಮಿ

ಅನಿತಾ ಕುಮಾರಸ್ವಾಮಿ ಮಗನಿಗೆ ರಾಮನಗರ ಬಿಟ್ಟುಕೊಟ್ಟಿದ್ದು ಸರಣಿ ಟ್ವೀಟ್ ಮೂಲಕ ನಾನು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಾನು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಅನಿತಾ ಕುಮಾರಸ್ವಾಮಿ
ಅನಿತಾ ಕುಮಾರಸ್ವಾಮಿ
Follow us
ಆಯೇಷಾ ಬಾನು
|

Updated on:Apr 04, 2023 | 3:36 PM

ಬೆಂಗಳೂರು: ಕರ್ನಾಟಕ ವಿಧಾನ ಸಭೆ ಚುನಾವಣೆಗೆ(Karnataka Assembly Elections 2023) ಕೆಲವೇ ದಿನಗಳು ಬಾಕಿ ಇದ್ದು ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್(JDS) ಟಿಕೆಟ್‌ಗಾಗಿ ಹೆಚ್​ಡಿ ದೇವೇಗೌಡರ ಕುಟುಂಬದಲ್ಲಿ ಒಳ ಜಗಳ ನಡೆಯುತ್ತಿದೆ. ಹಾಸನ ಟಿಕೆಟ್​ಗಾಗಿ ಹೆಚ್‌ಡಿ ರೇವಣ್ಣ(HD Revanna), ಪತ್ನಿ ಭವಾನಿ ರೇವಣ್ಣ(Bhavani Revanna) ಹಠ ಹಿಡಿದಿದ್ದಾರೆ. ಇದರ ನಡುವೆಯೇ ರಾಮನಗರದ ಶಾಸಕಿ, ಹೆಚ್‌ಡಿ ಕುಮಾರಸ್ವಾಮಿ(HD Kumaraswamy) ಅವರ ಪತ್ನಿ ಅನಿತಾ ಕುಮಾರಸ್ವಾಮಿ(Anita Kumarswamy) ಮಗನಿಗೆ ರಾಮನಗರ ಬಿಟ್ಟುಕೊಟ್ಟಿದ್ದು ಸರಣಿ ಟ್ವೀಟ್ ಮೂಲಕ ನಾನು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧಿಸುವುದಾದರೇ ರಾಮನಗರದಿಂದ ನನಗೆ ಟಿಕೆಟ್ ನೀಡಿ ಎಂದು ಅನಿತಾ ಕುಮಾರಸ್ವಾಮಿಯವರು ಪಟ್ಟು ಹಿಡಿದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಈ ಬಗ್ಗೆ ಬೆಳಗ್ಗೆ ಪ್ರತಿಕ್ರಿಯೆ ನೀಡಿದ್ದ ಹೆಚ್​ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಪಕ್ಷದ ಗೌರವ ಉಳಿಸಲು ಕಳೆದ ಚುನಾವಣೆಯಲ್ಲಿ ಅನಿತಾ ಸ್ಪರ್ಧೆ ಮಾಡಿದ್ದರು. ಹಾಸನ ರಾಜಕಾರಣವೇ ಬೇರೆ, ನನ್ನ ಪತ್ನಿ ರಾಜಕಾರಣವೇ ಬೇರೆ ಎಂದಿದ್ದರು. ಹಾಗೂ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಮಾತನಾಡಿ ಶಾಸಕಿ ಅನಿತಾ ಕುಮಾರಸ್ವಾಮಿ ಟಿಕೆಟ್ ಕೇಳ್ತಿದ್ದಾರೆ ಎಂಬುದು ಊಹಾಪೋಹ. ಚುನಾವಣಾ ರಾಜಕೀಯದಿಂದ ಅನಿತಾ ಕುಮಾರಸ್ವಾಮಿಯವರು ಹಿಂದೆ ಸರಿದಿದ್ದಾರೆ. ಅನಿತಾ ಕುಮಾರಸ್ವಾಮಿ ಸ್ವರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಅವರು ಪಕ್ಷ ಹೇಳಿದರೆ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ ಎಂದಿದ್ದರು. ಸದ್ಯ ಈಗ ಟ್ವೀಟ್ ಮೂಲಕ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ ಎಂದು ತಿಳಿಸಿದ್ದಾರೆ.

ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಾ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್‌ ಕಮಲದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರು ಮತ್ತು ಹೆಚ್.ಡಿ.ದೇವೇಗೌಡ ಅವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ. ಆ ನಂತರದ ಚುನಾವಣೆಯಲ್ಲಿ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ. 2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಆಗಲೂ ನಾನು ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ ಎಂದು ಅನಿತಾ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇದನ್ನೂ ಓದಿ: Karnataka Assembly Election 2023: ಚುನಾವಣಾ ರಾಜಕೀಯದಿಂದ ಅನಿತಾ ಕುಮಾರಸ್ವಾಮಿ ಹಿಂದೆ ಸರಿದಿದ್ದಾರೆ: ನಿಖಿಲ್ ಸ್ಪಷ್ಟನೆ

2018ರ ಉಪ ಚುನಾವಣೆ ವೇಳೆ ರಾಮನಗರ ಕ್ಷೇತ್ರದಲ್ಲಿ ಕೆಲವರು ನಮ್ಮ ಪಕ್ಷದ ಬೆನ್ನಿಗೆ ಇರಿಯುವ ಕೃತ್ಯವೆಸಗಿದಾಗ ಮತ್ತೆ ಜೆಡಿಎಸ್ ಪಕ್ಷ, ದೇವೇಗೌಡ ಅವರು, ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ ಎಂದಿರುವ ಅವರು; ಹೀಗೆ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ. ಅಂಥ ಕ್ಲಿಷ್ಟ ಪರಿಸ್ಥಿತಿಯಲ್ಲೂ ಮನೆಮಗಳೆಂದು ಭಾವಿಸಿ ನನ್ನನ್ನು ಗೆಲ್ಲಿಸಿದ ಮಧುಗಿರಿ, ರಾಮನಗರ ಕ್ಷೇತ್ರಗಳ ಮಹಾಜನತೆಗೆ ಆಜೀವ ಪರ್ಯಂತ ನಾನು ಆಭಾರಿ. ಚನ್ನಪಟ್ಟಣ ಕ್ಷೇತ್ರದ ಜನತೆಗೂ ಚಿರಋಣಿ. ಸಿಕ್ಕಿದ ಅವಕಾಶ ಬಳಸಿಕೊಂಡು ಈ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತೂ ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ಅವರು ಮನವಿ ಮಾಡಿದ್ದಾರೆ.

ಎಲ್ಲಾ ಚುಣಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ವಿಧಾನಸಭಾ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:34 pm, Tue, 4 April 23

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ