AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿ, 5 ಕೆಜಿ ಅಕ್ಕಿ ಜತೆ ಜನರ ಖಾತೆಗೆ ಹಣ ಜಮೆ: ಮುನಿಯಪ್ಪ

ಕಾಂಗ್ರೆಸ್​​​ ಸರ್ಕರದ ಗ್ಯಾರಂಟಿ ಯೋಜನೆಗಳ ಜಾರಿಗೆ ಕೌಂಟ್​​​ಡೌನ್​ ಶುರುವಾಗಿದೆ. ಜೂನ್​​ 12 ರಂದು ಶಕ್ತಿ ಯೋಜನೆ ಜಾರಿ ಮಾಡಿದ್ದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಇದೀಗ ಮತ್ತೆರಡು ಗ್ಯಾರಂಟಿಗಳಾದ ಅನ್ನಭಾಗ್ಯ ಮತ್ತು ಗೃಹಜ್ಯೋತಿ ನಾಳೆಯಿಂದ ಜಾರಿಗೆ ಬರಲಿದೆ. 5 ಕೆಜಿ ಅಕ್ಕಿ ಜತೆ ಜನರು ಖಾತೆಗೆ ಹಣ ಜಮೆ ಬಗ್ಗೆ ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿ, 5 ಕೆಜಿ ಅಕ್ಕಿ ಜತೆ ಜನರ ಖಾತೆಗೆ ಹಣ ಜಮೆ: ಮುನಿಯಪ್ಪ
ಕೆಹೆಚ್​ ಮುನಿಯಪ್ಪ
TV9 Web
| Edited By: |

Updated on:Jun 30, 2023 | 1:33 PM

Share

ಬೆಂಗಳೂರು: ಕರ್ನಾಟಕದಲ್ಲಿ ನಾಳೆಯಿಂದ(ಜುಲೈ 01) ಅನ್ನಭಾಗ್ಯ ಯೋಜನೆ (Anna Bhagya Scheme) ಜಾರಿಯಾಗಲಿದೆ.  5 ಕೆಜಿ ಅಕ್ಕಿ (Rice) ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ(Money) ನೀಡುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್​.ಮುನಿಯಪ್ಪ(KH Muniyappa) ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು (ಜೂನ್ 30) ಸುದ್ದಿಗಾರರೊಮದಿಗೆ ಮಾತನಾಡಿದ ಮುನಿಯಪ್ಪ,  5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ 170 (ಪ್ರತಿ ಕೆ.ಜಿಗೆ 34) ನೀಡುತ್ತೇವೆ. 90 ಪರ್ಸೆಂಟ್​ ಅಕೌಂಟ್ ಇದ್ದಾವೆ. ಅಕೌಂಟ್ ಇಲ್ಲದವರು  ಮಾಡಿಸಬೇಕು. ಒಬ್ಬರಿಗೆ 170 ರೂಪಾಯಿ ಕೊಡುತ್ತೇವೆ. ಅಕ್ಕಿ ಸಿಗುವರೆಗೆ ಮಾತ್ರ ಈ ಹಣ ನೀಡುತ್ತೇವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದಲೇ ಗೃಹಜ್ಯೋತಿ ಯೋಜನೆ ಆರಂಭ, ಯಾರಿಗೆ ವಿದ್ಯುತ್ ಫ್ರೀ, ಯಾರು ಬಿಲ್ ಕಟ್ಬೇಕು​? ಇಲ್ಲಿದೆ ವಿವರ

ಹೆಚ್ಚುವರಿ 5 ಕೆಜಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ಜಮೆ ಮಾಡುತ್ತೇವೆ. ಎಂಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ. ಅಕ್ಕಿ ಕೊಡಲು ನಾವು ಸಿದ್ದವಾಗಿದ್ದೇವೆ ಆದ್ರೆ ಕೇಂದ್ರ ಅಕ್ಕಿ ಕೊಟ್ಟಿಲ್ಲ. ಈಗಾಗಲೇ ಈ ಬಗ್ಗೆ ನಿಮಗೆ ಗೊತ್ತಿದೆ. ಅಕ್ಕಿ ಸಿಕ್ಕ ಬಳಿಕ ಅಕ್ಕಿ ಕೊಡುತ್ತೇವೆ. ಸಿಎಂ ಕೂಡ ಧಾನ್ಯ ಕೊಡುತ್ತೇವೆ ಎಂದಿದ್ದಾರೆ. ಅದರಂತೆ ದಕ್ಷಿಣದಲ್ಲಿ ರಾಗಿ ಕೊಡುತ್ತೇವೆ. ಉತ್ತರದಲ್ಲಿ ಜೋಳ ಕೊಡುತ್ತೇವೆ. ರಾಗಿ ದಾಸ್ತಾನು ಇದೆ, ಜೋಳ ದಾಸ್ತಾನು ಇಲ್ಲ. ದಾಸ್ತಾನು ಆದ ಬಳಿಕ ಧಾನ್ಯಗಳ ಹಂಚಿಕೆ ಮಾಡುತ್ತೇವೆ. ಎಂಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ. ಮಾತು ಕೊಟ್ಟಂತೆ ಜುಲೈ 1ರಿಂದ ಯೋಜನೆ ಜಾರಿ ಆಗುತ್ತೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಮನಸ್ಸು ಬದಲಾಯಿಸಿ ಅಕ್ಕಿ ಕೊಟ್ರೆ‌ ನಾವು ಅಕ್ಕಿ ಹಂಚಿಕೆ ಮಾಡುತ್ತೇವೆ. ಕೇಂದ್ರ ದ ಬಳಿ ಅಕ್ಕಿ ದಾಸ್ತಾನು ಇದೆ. ಇಲ್ಲವೆ ಟೆಂಡರ್ ಕರೆದು ಅಕ್ಕಿ ಖರೀದಿ ಮಾಡುತ್ತೇವೆ. ಹಣ ರೆಡಿ ಇದೆ, ಅಕೌಂಟ್ ಗೆ ವರ್ಗಾವಣೆ ಆಗುತ್ತೆ. ನಾಳೆಯಿಂದನೆ ಅಕೌಂಟ್ ಗೆ ಹಣ ಹೋಗುತ್ತೆ. ಅನ್ನಭಾಗ್ಯ ಯೋಜನೆ ಜಾರಿಗೆಗೆ ಸಮಾವೇಶ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ನಾಳೆಯಿಂದಲೇ ಅನ್ನಭಾಗ್ಯದಡಿ 5ಕೆಜಿ ಅಕ್ಕಿಗೆ ಹಣ!

ಜುಲೈ 1ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ರು. ಆದ್ರೆ, ಅಗತ್ಯವಿರುವಷ್ಟು ಅಕ್ಕಿ ಸಿಕ್ಕಿಲ್ಲ. ಅದಕ್ಕಾಗಿ ರಾಜ್ಯ ನೀಡುವ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡಲಾಗುತ್ತದೆ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ. ನಾಳೆಯೇ ಅನ್ನಭಾಗ್ಯ ಯೋಜನೆಯೂ ಕೂಡ ಜಾರಿಯಾಗಬೇಕಿದೆ. ಬಿಪಿಎಲ್​ ಕಾರ್ಡ್​​ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಕೆಜಿಗೆ 34 ರೂಪಾಯಿಯಂತೆ ತಲಾ 170ಹಣ ಪಾವತಿಸಬೇಕಾಗಿದೆ. ಪಡಿತರ ಚೀಟಿಯಲ್ಲಿ ಇಬ್ಬರಿದ್ದರೆ ಅವರು 340 ರೂಪಾಯಿ ಸಿಗಲಿದೆ. ಒಂದು ವೇಳೆ ಕುಟುಂಬದಲ್ಲಿ ಐವರು ಇದ್ದರೇ ಮಾಸಿಕ 850 ರೂಪಾಯಿ ನೀಡಲಾಗುತ್ತದೆ. ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲು ಸರ್ಕಾರ ವ್ಯವಸ್ಥೆ ಮಾಡಿದೆ.

ಅನ್ನ ಭಾಗ್ಯ ಯೋಜನೆ ಹಣ ವರ್ಗಾವಣೆ ಮಾಹಿತಿ

ರಾಜ್ಯದಲ್ಲಿ ಒಟ್ಟು 1 ಕೋಟಿ 28 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರು ಇದ್ದು, 4 ಕೋಟಿ 42 ಲಕ್ಷ ಫಲಾನುಭವಿಗಳಿದ್ದಾರೆ. 1 ಕೋಟಿ 28 ಲಕ್ಷ ಕಾರ್ಡ್ ಗಳ ಪೈಕಿ 99.99% ಆಧಾರ್ ಸೀಡಿಂಗ್ ಆಗಿದೆ. ಇನ್ನು 1.22 ಕಾರ್ಡ್‌ದಾರರ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆ. ಇನ್ನುಳಿದ ಬಾಕಿ ಉಳಿದಿರುವ 6 ಲಕ್ಷ ಕಾರ್ಡ್‌ಗಳು ಆಧಾರ್ ಲಿಂಕ್ ಆಗಬೇಕು. ಆಧಾರ್ ಲಿಂಕ್ ಆಗುತ್ತಿದ್ದಂತೆಯೇ ಬ್ಯಾಂಕ್ ಅಕೌಂಟ್ ಕೂಡ ಕಾರ್ಡ್ ಗಳಿಗೆ ಅಪ್ಡೇಟ್ ಆಗತ್ತೆ. ಹೀಗಾಗಿ ಹೆಚ್ಚು ಗೊಂದಲಕ್ಕೆ ಅವಕಾಶ ಇಲ್ಲ.

ಆಧಾರ್ ಲಿಂಕ್ ಆಗುವುದರಿಂದ ಇ ಗೌರ್ನೆನ್ಸ್ ಮೂಲಕ ಅಕೌಂಟ್ ಮಾಹಿತಿ ಕೂಡ ಸರ್ಕಾರಕ್ಕೆ ಲಭ್ಯ ಆಗಲಿದ್ದು, ಈ ಅಕೌಂಟ್ ಲಿಂಕ್ ಆಗಿರುವ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ. ಇದರಿಂದ ಹಣ ಅಕೌಂಟ್ ಗೆ ಹಾಕುವುದಕ್ಕೆ ಹೆಚ್ಚು ಸಮಸ್ಯೆ ಆಗುವುದಿಲ್ಲ ಎನ್ನುವುದು ಅಧಿಕಾರಿಗಳ ಮಾತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:01 pm, Fri, 30 June 23