BR Ambedkar: ಅಂಬೇಡ್ಕರ್ ಜಯಂತಿ ಕೈಬಿಟ್ಟ ಸರ್ಕಾರ: ಆರೋಪ

ಏಪ್ರಿಲ್, ಮೇನಲ್ಲಿ ಆಚರಿಸಬೇಕಾದ ಜಯಂತಿಗಳ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಪ್ರಕಟಿಸಿದ್ದು, ಡಾ.ಬಿ.ಆರ್‌. ಅಂಬೇಡ್ಕರ್ ಜಯಂತಿ ಆಚರಣೆ ಬಗ್ಗೆ ಉಲ್ಲೇಖಿಸಿಲ್ಲ ಎಂದು ಸರ್ಕಾರದ ಮೇಲೆ ಮತ್ತೊಂದು ಆರೋಪ ಕೇಳಿಬರುತ್ತಿದೆ.

BR Ambedkar: ಅಂಬೇಡ್ಕರ್ ಜಯಂತಿ ಕೈಬಿಟ್ಟ ಸರ್ಕಾರ: ಆರೋಪ
ಡಾ.ಬಿ.ಆರ್‌.ಅಂಬೇಡ್ಕರ್ (ಸಂಗ್ರಹ ಚಿತ್ರ)Image Credit source: boldsky.com
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 04, 2023 | 9:06 PM

ಬೆಂಗಳೂರು: ಏಪ್ರಿಲ್, ಮೇನಲ್ಲಿ ಆಚರಿಸಬೇಕಾದ ಜಯಂತಿಗಳ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ (Department of Kannada and Culture) ಮಂಗಳವಾರ ಪ್ರಕಟಿಸಿದ್ದು, ಡಾ.ಬಿ.ಆರ್‌. ಅಂಬೇಡ್ಕರ್ ಜಯಂತಿ ಆಚರಣೆ ಬಗ್ಗೆ ಉಲ್ಲೇಖಿಸಿಲ್ಲ. ಹಾಗಾಗಿ ಸರ್ಕಾರದ ವಿರುದ್ಧ ಆರೋಪಗಳು ಕೇಳಿಬರುತ್ತಿವೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಜಯಂತಿಗಳ ಪಟ್ಟಿಯಲ್ಲಿ ಅಂಬೇಡ್ಕರ್ ಜಯಂತಿಯೇ ನಾಪತ್ತೆ ಆಗಿದೆ. ಈ ಹಿನ್ನೆಲೆ ಜಯಂತಿ ಕೈ ಬಿಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಮತ್ತೊಂದು ಪ್ರಕರಣದಲ್ಲಿ ಜೈನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಬಾಬಾ ಸಾಹೇಬ್ ಅಂಬೇಡ್ಕರ್​ ಅವರಿಗೆ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಜನ ವಿದ್ಯಾರ್ಥಿಗಳನ್ನು ಸಿದ್ದಾಪುರ ಪೊಲೀಸರು ಬಂಧಸಿದ್ದರು. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳು.

ಘಟನೆ ಹಿನ್ನೆಲೆ

ಫೆಬ್ರವರಿ 8ರಂದು ಕಾಲೇಜ್ ಫೆಸ್ಟ್ ಒಂದರ ಮ್ಯಾಡ್ ಆ್ಯಡ್ ಸ್ಪರ್ಧೆಯಲ್ಲಿ ಜಾತಿ ವ್ಯವಸ್ಥೆಯನ್ನ ಖಂಡಿಸುವ ಸಂದೇಶ ನೀಡುವ ಭರದಲ್ಲಿ ವಿದ್ಯಾರ್ಥಿಗಳು ಬಿ. ಆರ್ ಅಂಬೇಡ್ಕರ್ ಅಲ್ಲ, ಬಿಯರ್ ಅಂಬೇಡ್ಕರ್. ಡೋಂಟ್ ಟಚ್ ಮಿ, ಟಚ್ ಮಿ ಅಂತ ಹಾಡು ಹಾಕಿ ಅವಮಾನ ಮಾಡಿದ್ದಾರೆಂದು ಆರೋಪಿಸಲಾಗಿತ್ತು. ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು ಎಂದು ‍ವಿವಾದಾತ್ಮಕ ಸ್ಕಿಟ್ ಪ್ರದರ್ಶನ ಮಾಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರು: ಜೈನ್ ವಿಶ್ವವಿದ್ಯಾಲಯದಲ್ಲಿ ಬಿ.ಆರ್ ಅಂಬೇಡ್ಕರ್​​ರಿಗೆ ಅವಮಾನ: 7 ವಿದ್ಯಾರ್ಥಿಗಳ ಬಂಧನ

ಜೈನ್ ವಿಶ್ವವಿದ್ಯಾಲಯದ ವಿರುದ್ಧ ಸಿಡಿದೆದ್ದ ದಲಿತ ಹಾಗೂ ವಿವಿಧ ಸಂಘಟನೆಗಳು

ಘಟನೆ ಹಿನ್ನೆಲೆ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಮೇಲೆ ದಲಿತ ಹಾಗೂ ವಿವಿಧ ಸಂಘಟನೆಗಳು ಸಿಡಿದೆದ್ದಿದ್ದರು. ದಲಿತ ಸಂಘಟನೆಗಳು, ಎನ್​ಎಸ್​​ಯೂಐ (NSUI)ಯಿಂದ ಯೂನಿವರ್ಸಿಟಿ ಮುಂದೆ ಪ್ರತಿಭಟನೆ ಮಾಡಲಾಗಿತ್ತು. ಅಂಬೇಡ್ಕರ್, ದಲಿತರ ಮೇಲೆ ಆಕ್ಷೇಪಾರ್ಹ ಹೇಳಿಕೆ ಆರೋಪ ಹಿನ್ನಲೆ ರಾಜ್ಯಾದ್ಯಂತ ಪ್ರತಿಭಟನೆಗೆ ದಲಿತ ಸಂಘಟನೆಗಳು ನಿರ್ಧರಿಸಿದ್ದವು.

ಜೈನ್​​​ ಕಾಲೇಜಿನ ಸ್ವಾಯತ್ತತೆಯನ್ನು ಸರ್ಕಾರ ರದ್ದು ಮಾಡಬೇಕು

ಜೈನ್​​​ ಕಾಲೇಜಿನ ಸ್ವಾಯತ್ತತೆಯನ್ನು ಸರ್ಕಾರ ರದ್ದು ಮಾಡಬೇಕು. ನಾಟಕ ಮಾಡಿದ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಅಂಬೇಡ್ಕರ್​ಗೆ ಅವಮಾನವಾದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ ರಾಜ್ಯ ಸರ್ಕಾರ ಜೀವಂತವಾಗಿದ್ದರೆ ಎಲ್ಲರನ್ನೂ ಜೈಲಿಗೆ ಕಳಿಸಬೇಕಿತ್ತು. ಜೈನ್​​ ಕಾಲೇಜಿನ ಆಡಳಿತ ಮಂಡಳಿಯನ್ನು ಜೈಲಿಗೆ ಕಳಿಸಬೇಕಿತ್ತು ಎಂದು ಪರಿಷತ್​ನ ಬಿಜೆಪಿ ಸದಸ್ಯ ಹೆಚ್​.ವಿಶ್ವನಾಥ್​ ಆಗ್ರಹಿಸಿದ್ದರು.

ಸರ್ಕಾರ ಸೂಲಿಬೆಲೆ, ರೋಹಿತ್​ ಚಕ್ರತೀರ್ಥರಂಥವರ ಮಾತು ಕೇಳುತ್ತೆ. ಭಾರತ ಮಾತೆ ದೇವಸ್ಥಾನ ಕಟ್ಟುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ. ಅಮಿತ್​ ಶಾರಿಂದ ರಾಷ್ಟ್ರೀಯತೆ ಬಗ್ಗೆ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ವಾಗ್ದಾಳಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:41 pm, Tue, 4 April 23

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್