ಬಿಎಂಟಿಸಿಗೆ ಇನ್ನೊಂದು ಬಲಿ; ತಾಯಿ ಸಾವು, ಕೂದಲೆಳೆ ಅಂತರದಲ್ಲಿ ಅಪ್ಪ-ಮಗಳು ಪಾರು

Killer BMTC: ಪ್ರೋ ಕಬಡಿ ಪಂದ್ಯ ವೀಕ್ಷಿಸಲು ಹೋಗುವಾಗ ನಿನ್ನೆ ಸಂಜೆ 6.30ರ ಸುಮಾರಿಗೆ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಮಡಿವಾಳ ಫ್ಲೈಓವರ್ ಮೇಲೆ BMTC ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ದಂಪತಿ ಹಾಗೂ ಪುಟ್ಟ ಮಗು ಕೆಳಗೆ ಬಿದ್ದಿದ್ದು ಮಹಿಳೆ ಮೇಲೆ ಬಸ್ ಹರಿದು ಸ್ಥಳದಲ್ಲೇ ಮೃತಪೊಟ್ಟಿದ್ದಾರೆ.

ಬಿಎಂಟಿಸಿಗೆ ಇನ್ನೊಂದು ಬಲಿ; ತಾಯಿ ಸಾವು, ಕೂದಲೆಳೆ ಅಂತರದಲ್ಲಿ ಅಪ್ಪ-ಮಗಳು ಪಾರು
ಸೀಮಾ
Follow us
Jagadisha B
| Updated By: ಆಯೇಷಾ ಬಾನು

Updated on: Dec 14, 2023 | 12:03 PM

ಬೆಂಗಳೂರು, ಡಿ.14: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಡಿಕ್ಕಿಯಾಗಿ (BMTC Accident) ಗೃಹಿಣಿ ಮೃತಪಟ್ಟ ಘಟನೆ ನಡೆದಿದೆ. ಪ್ರೋ ಕಬಡಿ ನೋಡಲು ಹೋಗುತಿದ್ದ ದಂಪತಿಗೆ ಯಮನಂತೆ ಬಂದ ಬಿಎಂಟಿಸಿ ಮಹಿಳೆಯ ಪ್ರಾಣ (Death) ತೆಗೆದುಕೊಂಡಿದೆ. ಸೀಮಾ ಮೃತ ಗೃಹಿಣಿ. ನಿನ್ನೆ ಸಂಜೆ 6.30ರ ಸುಮಾರಿಗೆ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಮಡಿವಾಳ ಫ್ಲೈಓವರ್ ಮೇಲೆ ಘಟನೆ ನಡೆದಿದೆ. BMTC ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು ಅಪಘಾತದ ಬಳಿಕ ಬಸ್ ಬಿಟ್ಟು ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ.

ಕಳೆದ ಎರಡೂವರೆ ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿ ಸಿಂಗಸಂಧ್ರದಲ್ಲಿ ವಾಸವಾಗಿದ್ದರು. ನಿನ್ನೆ ಸಂಜೆ ಪ್ರೋ ಕಬಡಿ ಪಂದ್ಯ ವೀಕ್ಷಿಸಲು ತಮ್ಮ ಪುಟ್ಟ ಮಗುವಿನ ಜೊತೆ ಬೈಕ್​ನಲ್ಲಿ ಹೋಗುವಾಗ ಬಸ್​ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ ಮೂವರು ಕೆಳಗೆ ಬಿದ್ದಿದ್ದಾರೆ. ಬಿಎಂಟಿಸಿ ಬಸ್​ನ ಚಕ್ರದಡಿ ಸಿಲುಕಿದ ಸೀಮಾ(21) ಹೆಲ್ಮೆಟ್ ಧರಿಸಿದ್ದರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮಗು ಗಾನವಿ, ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ.

ಇದನ್ನೂ ಓದಿ: ಉಡುಪಿ: ದತ್ತು ಮಗಳು ನಾಪತ್ತೆ, ಮನನೊಂದ ರಂಗಭೂಮಿ ಕಲಾವಿದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು

ಇನ್ನು ಘಟನೆ ಸಂಬಂಧ ಮಾತನಾಡಿದ ಮೃತಳ ಪತಿ ಗುರುಮೂರ್ತಿ, ಸಂಜೆ ಪ್ರೋ ಕಬಡಿ ನಡೆಯುತಿತ್ತು. ಪತ್ನಿ ಮಗು ಕರೆದುಕೊಂಡು ಹೊಗ್ತಿದ್ದೆ. ಈ ವೇಳೆ ವೇಗವಾಗಿ ಬಸ್ ತಿರುಗಿಸಿ ಡಿಕ್ಕಿ ಹೊಡೆದಿದ್ದಾರೆ. ಪತ್ನಿ ಸಾವು ಸಂಭವಿಸುತಿದ್ದಂತೆ ಚಾಲಕ, ಕಂಡಕ್ಟರ್ ಇಬ್ಬರು ಪರಾರಿಯಾಗಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ. ಘಟನೆ ಬಳಿಕ ಯಾವ ಒಬ್ಬ ಬಿಎಂಟಿಸಿ ಅಧಿಕಾರಿಯೂ ಬಂದಿಲ್ಲ. ನ್ಯಾಯ ಕೊಡಿಸುವಂತೆ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಮೂಲತಃ ವಿಜಯನಗರ ಜಿಲ್ಲೆಯ ಶ್ರೀಕಂಠಪುರ ತಾಂಡಾದ ನಿವಾಸಿಗಳಾದ ದಂಪತಿ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿದ್ದರು. ಬೆಸ್ಕಾಂನಲ್ಲಿ ಲೈನ್​ಮ್ಯಾನ್​ ಆಗಿ‌‌ ಗುರುಮೂರ್ತಿ ಕೆಲಸ ಮಾಡುತ್ತಿದ್ದಾರೆ. ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಗೃಹಿಣಿ ಸೀಮಾ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ