ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಹೊತ್ತಿ ಉರಿದ ಶೂ, ಬಟ್ಟೆ ಮಳಿಗೆ

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ನಿನ್ನೆ (ನ.27) ರಾತ್ರಿ ಚಿಕ್ಕಜಾಲ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಶೂ ಮತ್ತು ಬಟ್ಟೆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಮಳಿಗೆ ಹೊತ್ತಿ ಉರಿದಿದೆ. ಅಗ್ನಿ ಅವಘಡದಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿವೆ. ವಿದ್ಯುತ್​​​​ ಶಾರ್ಟ್ ಸರ್ಕ್ಯೂಟ್​​​​​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಹೊತ್ತಿ ಉರಿದ ಶೂ, ಬಟ್ಟೆ ಮಳಿಗೆ
ಬೆಂಗಳೂರು ಅಗ್ನಿ ಅವಘಡ
Follow us
TV9 Web
| Updated By: ಆಯೇಷಾ ಬಾನು

Updated on: Nov 28, 2023 | 7:04 AM

ಬೆಂಗಳೂರು, ನ.28: ಸಿಲಿಕಾನ್ ಸಿಟಿಯಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತಿವೆ. ವಾರದ ಹಿಂದಷ್ಟೇ ನಗರದ ಕುಂಬಾರಪೇಟೆಯ ಗೋದಾಮಿನಲ್ಲಿ ಅಗ್ನಿ(Fire) ಅವಘಡ ಸಂಭವಿಸಿತ್ತು. ಈಗ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ನಿನ್ನೆ (ನ.27) ರಾತ್ರಿ ಚಿಕ್ಕಜಾಲ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಶೂ ಮತ್ತು ಬಟ್ಟೆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಮಳಿಗೆ ಹೊತ್ತಿ ಉರಿದಿದೆ. ಅಗ್ನಿ ಅವಘಡದಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿವೆ. ವಿದ್ಯುತ್​​​​ ಶಾರ್ಟ್ ಸರ್ಕ್ಯೂಟ್​​​​​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಕಿ ಕಾಣಿಸಿಕೊಳ್ಳತಿದ್ದಂತೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಲಾಗಿದೆ. ಅಗ್ನಿ ಶಾಮಕದಳ ಸಿಬ್ಬಂದಿ ಮಳಿಗೆಗೆ ಹೊತ್ತಿಕೊಂಡಿದ್ದ ಬೆಂಕಿ ನಂದಿಸಿದ್ದಾರೆ. ಕೆಲವು ವಸ್ತುಗಳು ಸುಟ್ಟು ಕರಕಲಾಗಿವೆ. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕುಂಬಾರಪೇಟೆಯಲ್ಲಿ ಅಗ್ನಿ ಅವಘಡ

ಬೆಂಗಳೂರಿನ ಕುಂಬಾರಪೇಟೆಯ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಆದಿಲ್ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ಗೋದಾಮು ಬೆಂಕಿಗಾಹುತಿಯಾಗಿತ್ತು. ನವೆಂಬರ್ 20ರ ಮಧ್ಯಾಹ್ನ ಹೊತ್ತಿಕೊಂಡ ಬೆಂಕಿ, ಮರು ದಿನವೂ ಸಹ ಧಗಧಗಿಸುತ್ತಿತ್ತು. ಆರಂಭದಲ್ಲಿ ಪ್ಲಾಸ್ಟಿಕ್ ಗೋದಾಮಿನ 3, 4ನೇ ಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಬಳಿಕ ಅದು ಐದನೇ ಮಹಡಿಗೂ ವ್ಯಾಪಿಸಿಕೊಂಡಿತ್ತು. ಐದನೇ ಫ್ಲೋರ್​ನಲ್ಲಿ ಮತ್ತೆ ಮತ್ತೆ ಬೆಂಕಿ ಕಾಣಿಸಿಕೊಳ್ಳುತ್ತಿರುವುದರಿಂದ ಅಗ್ನಿಶಾಮಕ ದಳದ ಸಿಬ್ಬಂದಿ ನಂದಿಸಲು ಹರಸಾಹಸಪಟ್ಟಿದ್ದರು.

ಇದನ್ನೂ ಓದಿ: ಬೆಂಗಳೂರು: ಕುಂಬಾರಪೇಟೆಯಲ್ಲಿ ಅಗ್ನಿ ಅವಘಡ, 5ನೇ ಫ್ಲೋರ್​ನಲ್ಲಿ ಇನ್ನೂ ನಿಯಂತ್ರಣಕ್ಕೆ ಬಾರದ ಬೆಂಕಿ

ಆಕಸ್ಮಿಕ ಬೆಂಕಿ: ಮೇಲ್ಚಾವಣಿ, ರಬ್ಬರ್‌ ಶೀಟು ಆಹುತಿ

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿಯ ಹಾಳು ಕರುಗುಂದದ ಜೋಸೆಫ್‌ ಎಂಬುವರ ಮನೆಯಲ್ಲಿ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಅಡಿಗೆ ಮನೆಯ ಪಕ್ಕದಲ್ಲಿಟ್ಟದ್ದ 2 ಕ್ವಿಂಟಾಲ್ ರಬ್ಬರ್‌, ಮನೆಯ ಮೇಲ್ಚಾವಣಿ, ಮಂಚ, ಪ್ಯಾನ್‌ ಸೇರಿದಂತೆ ಇತರೆ ವಸ್ತುಗಳು ಸುಟ್ಟು ಹೋಗಿದ್ದವು. ಅಡುಗೆ ಮನೆ ಒಲೆಯ ಬೆಂಕಿಯ ಕಿಡಿ ಸಮೀಪದಲ್ಲಿ ಕೂಡಿಟ್ಟಿದ್ದ ರಬ್ಬರ್‌ ಸೀಟುಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ಕಂಡ ಕೂಡಲೇ ಅಕ್ಕ ಪಕ್ಕದ ಮನೆಯವರು ಆಗಮಿಸಿ ಬೆಂಕಿ ನಂದಿಸಿದರು. 1.50 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ