AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಕ್ರ ವೆಲ್ತ್ ಮ್ಯಾನೇಜ್ಮೆಂಟ್: ಬೆಂಗಳೂರಿನಲ್ಲಿ ಮತ್ತೊಂದು ಕಂಪನಿಯಿಂದ ವಂಚನೆ! ಸುಮಾರು 40 ಜನರಿಗೆ 2 ಕೋಟಿ ನಾಮ!

ಬೆಂಗಳೂರಿನ ತಿಲಕನಗರದ ಸ್ವಾಗತ್ ರಸ್ತೆಯಲ್ಲಿದ್ದ ಇಕ್ರ ವೆಲ್ತ್ ಮ್ಯಾನೇಜ್ಮೆಂಟ್ ಎಂಬ ಕಂಪನಿ 2020 ರಿಂದ ಹಣ ಕಟ್ಟಿಸಿಕೊಂಡು ವಂಚನೆ ಎಸಗಿದೆ ಎಂಬ ಆರೋಪ ಕೇಳಿಬಂದಿದೆ. ಹಣ ಕಟ್ಟಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಸಾರ್ವಜನಿಕರು ಇದೀಗ ದೂರು ಸಲ್ಲಿಸಿದ್ದಾರೆ.

ಇಕ್ರ ವೆಲ್ತ್ ಮ್ಯಾನೇಜ್ಮೆಂಟ್: ಬೆಂಗಳೂರಿನಲ್ಲಿ ಮತ್ತೊಂದು ಕಂಪನಿಯಿಂದ ವಂಚನೆ! ಸುಮಾರು 40 ಜನರಿಗೆ 2 ಕೋಟಿ ನಾಮ!
ಇಕ್ರ ವೆಲ್ತ್ ಮ್ಯಾನೇಜ್ಮೆಂಟ್ ಕಂಪನಿ: ಬೆಂಗಳೂರಿನಲ್ಲಿ ಮತ್ತೊಂದು ಕಂಪನಿಯಿಂದ ವಂಚನೆ! ಸುಮಾರು 40 ಜನರಿಗೆ 2 ಕೋಟಿ ನಾಮ!
TV9 Web
| Updated By: ಸಾಧು ಶ್ರೀನಾಥ್​|

Updated on:Sep 11, 2021 | 1:14 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಹಣ ಹೂಡಿಕೆ ಕಂಪನಿಯಿಂದ ವಂಚನೆ ನಡೆದಿದೆ. ಇಕ್ರ ವೆಲ್ತ್ ಮ್ಯಾನೇಜ್​ಮೆಂಟ್​ ಕಂಪನಿಯಿಂದ ಭಾರೀ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಹೂಡಿಕೆ ಹಣಕ್ಕೆ ಅಧಿಕ ಬಡ್ಡಿ ಮತ್ತು ಲಾಭಾಂಶ ನೀಡುವುದಾಗಿ ಆಶ್ಔಆಸನೆ ಕೊಟ್ಟು ಲಕ್ಷ ಲಕ್ಷ ರೂಪಾಯಿ ಹಣ ಕಟ್ಟಿಸಿಕೊಂಡು ವಂಚನೆ ಎಸಗಿರುವುದು ವರದಿಯಾಗಿದೆ.

ಬೆಂಗಳೂರಿನ ತಿಲಕನಗರದ ಸ್ವಾಗತ್ ರಸ್ತೆಯಲ್ಲಿದ್ದ ಇಕ್ರ ವೆಲ್ತ್ ಮ್ಯಾನೇಜ್ಮೆಂಟ್ ಎಂಬ ಕಂಪನಿ 2020 ರಿಂದ ಹಣ ಕಟ್ಟಿಸಿಕೊಂಡು ವಂಚನೆ ಎಸಗಿದೆ ಎಂಬ ಆರೋಪ ಕೇಳಿಬಂದಿದೆ. ಹಣ ಕಟ್ಟಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಸಾರ್ವಜನಿಕರು ಇದೀಗ ದೂರು ಸಲ್ಲಿಸಿದ್ದಾರೆ. ಹೊರ ರಾಜ್ಯದವರಿಗೂ ವಂಚನೆ ಮಾಡಿರೋದು ಬೆಳಕಿಗೆ ಬಂದಿದ್ದು, ನಾಗಪುರ ಮೂಲದ ವ್ಯಕ್ತಿಗೆ 20 ಲಕ್ಷಕ್ಕೂ ಅಧಿಕ ಹಣ ವಂಚನೆಯಾಗಿದೆ.

ವಂಚನೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿರುವಾಗಿ ತಿಳಿದುಬಂದಿದೆ. ಸುಮಾರು 40 ಜನರಿಗೆ 2 ಕೋಟಿ ರೂಪಾಯಿಯಷ್ಟು ಹಣ ವಂಚಿಸಿರೋದು ಬೆಳಕಿಗೆ ಬಂದಿದೆ. ಅಬ್ದುಲ್ ನಜೀಮ್, ಹಿದಾಯತ್ ಉಲ್ಲಾ, ನಜೀಮ್, ಅಲಿಂ ಬಂಧಿತ ಆರೋಪಿಗಳು.

ತಿಲಕ್ ನಗರ ನಿವಾಸಿಯೊಬ್ಬರ ಬಳಿ‌ 10 ಲಕ್ಷ, ಅವರ ಸ್ನೇಹಿತರ ಬಳಿ 5 ಲಕ್ಷ ಹಣ ಕಟ್ಟಿಸಿಕೊಂಡು ಮೋಸ ಮಾಡಿದ್ದಾರೆ. ಅಲ್ಲದೆ ಸಾರ್ವಜನಿಕರಿಂದಲೂ ಲಕ್ಷ ಲಕ್ಷ ಹಣ ಕಟ್ಟಿಸಿಕೊಂಡು ವಂಚನೆ ಎಸಗಲಾಗಿದೆ. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಕ್ರ ಕಂಪನಿಯ ಅಬ್ದುಲ್ ನಾಜಿಮ್ ಮೇಖ್ರಿ ಸೇರಿ ನಾಲ್ವರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.

ಅಬ್ದುಲ್ ನಾಜಿಮ್ ಮೇಖ್ರಿ ಸೇರಿ ನಾಲ್ವರ ವಿರುದ್ಧ ಸೆಕ್ಷನ್ 21 ಬಡ್ಸ್ ಆಕ್ಟ್- 2019, ಸೆಕ್ಷನ್ 9 ಕೆಪಿಐಡಿ ಆಕ್ಟ್ ಹಾಗೂ ಐಪಿಸಿ 506, 420 ಅಡಿ ಕೇಸ್ ದಾಖಲಾಗಿದೆ. ಸಿಆರ್ ಪಿಸಿ 91ರ ಅಡಿ ಪೊಲೀಸರು ಪಬ್ಲಿಕ್ ನೋಟಿಸ್ ಹೊರಡಿಸಿದ್ದಾರೆ. ಇಕ್ರದಲ್ಲಿ ಹಣ ಇನ್ವೆಸ್ಟ್ ಮಾಡಿ ಕಳೆದುಕೊಂಡಿದ್ರೆ ತಿಲಕನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಪೊಲೀಸರು ಸೂಚಿಸಿದ್ದಾರೆ.

Also Read: ಅಮೆರಿಕಾದ ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು; 9/11 ದಾಳಿಯಿಂದ ಅಮೆರಿಕಾ ಕಲಿತ ಪಾಠವೇನು?

Also Read: ತಾಲಿಬಾನ್​ಗೆ ಧರ್ಮ ಸಂಕಟ! ಈ ಇಕ್ಕಟ್ಟಿನ ಪರಿಸ್ಥಿತಿಗೆ ಕಾರಣವಾಗಿರುವ ಭಾರತ ಕೈಗೊಳ್ಳುವುದೇ ದಿಟ್ಟ ಕ್ರಮ?

(another fraud case in bangalore 4 businessmen arrested by tilak nagar police)

Published On - 1:08 pm, Sat, 11 September 21

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ