AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಟಿಕೆಟ್ ರೋಲ್ ಕದ್ದು ತರಕಾರಿ ಅಂಗಡಿಗೆ ಮಾರಿರುವ ಕಿಲಾಡಿಗಳು: ತರಕಾರಿ ಬಿಲ್ ನೀಡಲು ಬಳಕೆ!

ಜಾಹೀರಾತಿನ ಹೆಸರಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪದಲ್ಲಿ ಐದು ಜನ ಬಿಎಂಟಿಸಿ ಅಧಿಕಾರಿಗಳ ಮೇಲೆ ಕಳೆದ ವಾರವಷ್ಟೇ ಎಫ್ಐಆರ್ ಆಗಿತ್ತು. ಇದೀಗ ಪ್ರಯಾಣಿಕರಿಗೆ ನೀಡುವ ಟಿಕೆಟ್ ರೋಲ್ ಅನ್ನು ಕೂಡ ಕದ್ದು ತರಕಾರಿ ಅಂಗಡಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಆ ಮೂಲಕ ಮತ್ತೊಂದು ಅಕ್ರಮ ಬಯಲಾದಂತಾಗಿದೆ.

ಬಿಎಂಟಿಸಿ ಟಿಕೆಟ್ ರೋಲ್ ಕದ್ದು ತರಕಾರಿ ಅಂಗಡಿಗೆ ಮಾರಿರುವ ಕಿಲಾಡಿಗಳು: ತರಕಾರಿ ಬಿಲ್ ನೀಡಲು ಬಳಕೆ!
ಬಿಎಂಟಿಸಿ ಟಿಕೆಟ್ ರೋಲ್
Kiran Surya
| Edited By: |

Updated on: Feb 05, 2025 | 7:22 AM

Share

ಬೆಂಗಳೂರು, ಫೆಬ್ರವರಿ 5: ಸಾಮಾನ್ಯವಾಗಿ ‌ಟಿಕೆಟ್ ಪೇಪರ್ ರೋಲ್​ಗಳನ್ನು ಪ್ರಯಾಣಿಕರಿಗೆ ಟಿಕೆಟ್ ನೀಡಲು ಬಳಸುತ್ತಾರೆ. ಆದರೆ, ಟಿಕೆಟ್ ನೀಡಲು ಬಳಸುವ ಎಲೆಕ್ಟ್ರಿಕ್ ಬಸ್​ನ ಪೇಪರ್ ಟಿಕೆಟ್ ರೋಲ್ ಅನ್ನು ಇಲ್ಲೊಬ್ಬ ವ್ಯಾಪಾರಿ ಹಣ್ಣು ಹಾಗೂ ತರಕಾರಿ ಅಂಗಡಿಯಲ್ಲಿ ಗ್ರಾಹಕರಿಗೆ ಬಿಲ್ ಕೊಡಲು ಬಳಸುತ್ತಿದ್ದಾನೆ!

ಯಲಹಂಕದ ತರಕಾರಿ ಮಳಿಗೆಯಲ್ಲಿ ಬಿಎಂಟಿಸಿ ಟಿಕೆಟ್ ರೋಲ್

ಬೆಂಗಳೂರಿನ ಯಲಹಂಕದ ಅಟ್ಟೂರು ಲೇಔಟ್​​ನ ಎಸ್​ಆರ್​ಎಸ್ ತರಕಾರಿ ಹಾಗೂ ಹಣ್ಣು ವ್ಯಾಪಾರಿ ಮಳಿಗೆಯಲ್ಲಿ ಟಿಕೆಟ್ ರೋಲ್ ಉಪಯೋಗಿಸಿ, ತರಕಾರಿ ಹಾಗೂ ಹಣ್ಣಿನ ರೇಟ್ ಮುದ್ರಿಸಿ ಕೊಟ್ಟಿದ್ದ. ಈ ಬಗ್ಗೆ ಸಾರ್ವಜನಿಕರು ಸೋಶಿಯಲ್ ಮೀಡಿಯಾದಲ್ಲಿ ಬಿಎಂಟಿಸಿಗೆ ಮಾಹಿತಿ ನೀಡಿದ್ದರು. ಬಿಎಂಟಿಸಿ ಅಧಿಕಾರಿಗಳು ಅಂಗಡಿಗೆ ಹೋಗಿ ಪರಿಶೀಲಿಸಿದಾಗ ಎರಡು ಟಿಕೆಟ್ ರೋಲ್ ಪತ್ತೆಯಾಗಿದೆ.

ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು

ವ್ಯಾಪಾರಿ ಮುರಳಿಕೃಷ್ಣ ಮೇಲೆ ಯಲಹಂಕ ನ್ಯೂ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮಾತನಾಡಿದ ಸಾರಿಗೆ ನೌಕರರ ಮುಖಂಡರು, ಇದು ಬಿಎಂಟಿಸಿ ಭದ್ರತಾ ಮತ್ತು ಜಾಗೃತದಳದ ಅಧಿಕಾರಿಗಳ ನಿರ್ಲಕ್ಷ್ಯ ಎಂದಿದ್ದಾರೆ.

ಈ ಸಂಬಂಧ ಯಲಹಂಕ ಪೋಲಿಸ್ ಸ್ಟೇಷನ್​ಗೆ ಬಿಎಂಟಿಸಿ ದೂರು ನೀಡಿದೆ. ಯಲಹಂಕದ ಸುತ್ತಮುತ್ತಲಿನ ಸಾಕಷ್ಟು ಅಂಗಡಿಯಲ್ಲಿ ಬಿಎಂಟಿಸಿ ಟಿಕೆಟ್​ ರೋಲ್​ನಲ್ಲಿ ತಮ್ಮ ಅಂಗಡಿಯ ಬಿಲ್ ಗಳನ್ನು ನೀಡುತ್ತಿರುವ ಆರೋಪ ಕೇಳಿ ಬಂದಿದೆ.

ಈ ಹಿಂದೆ ಇನ್ಸೆಂಟಿವ್​ಗಾಗಿ ಕಂಡಕ್ಟರ್​ಗಳು ಬಿಎಂಟಿಸಿಯ ಶಕ್ತಿ ಯೋಜನೆಯ ಟಿಕೆಟ್​​ಗಳನ್ನು ದುರ್ಬಳಕೆ ಮಾಡಿಕೊಂಡಿದ್ದ ಆರೋಪ ಕೇಳಿಬಂದಿತ್ತು. ಇದೀಗ ಟಿಕೆಟ್ ರೋಲ್ ಅಕ್ರಮ ಬಯಲಾಗಿದೆ.

ಸಿಕ್ಕಿಬಿದ್ದರೆ ಅಮಾನತಾಗುವುದು ಖಚಿತ

ಬಿಎಂಟಿಸಿ ಟಿಕೆಟ್ ರೋಲ್​ಗಳನ್ನು ಕದ್ದು ಮಾರಾಟ ಮಾಡಿದವರು ಸಿಕ್ಕಿಬಿದ್ದರೆ ಅಮಾನತಾಗುವುದು ಖಚಿತ ಎಂದು ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಭಾಕರ್ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: Aero India 2025: ಏರ್ ಶೋಗೆ ಬರುವವರಿಗೆ ಬಿಎಂಟಿಸಿ ಉಚಿತ ಬಸ್ ವ್ಯವಸ್ಥೆ, ಈ ಜಾಗದಲ್ಲಿ ಪಾರ್ಕಿಂಗ್

ಒಟ್ಟಿನಲ್ಲಿ ಕಳೆದ ವಾರವಷ್ಟೇ ಬಿಎಂಟಿಸಿ ಬಸ್​ಗಳ ಮೇಲೆ ಜಾಹೀರಾತು ಹಾಕುವ ವಿಚಾರದಲ್ಲಿ ಅಕ್ರಮವೆಸಗಿದ್ದು ಬಯಲಿಗೆ ಬಂದಿತ್ತು. ಇದೀಗ ಪ್ರಯಾಣಿಕರಿಗೆ ನೀಡುವ ಟಿಕೆಟ್​ಗೆ ಬೇಕಿರುವ ರೋಲ್​ ಅನ್ನು ಮಾರಾಟ ಮಾಡುತ್ತಿರುವುದು ಬಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ