AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ಅಪಹರಣ​ ಪ್ರಕರಣ; ಕನ್ನಡ ಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ ಎಫ್​ಐಆರ್

ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿ ಕಿಡ್ನಾಪ್ ಕೇಸ್​ನಲ್ಲಿ ಕನ್ನಡ ಪರ ಸಂಘಟನೆ ಅಧ್ಯಕ್ಷ ಪ್ರಕಾಶ್ ಹೆಸರು ಕೇಳಿ ಬಂದಿದೆ. ಮಹಿಳೆಯೋರ್ವರಿಂದ ಸಾಲ ಪಡೆದು ವಾಪಾಸ್ ನೀಡಲು ಸತಾಯಿಸಿದಕ್ಕೆ ಮಹಿಳೆ ಕನ್ನಡ ಪರ ಅಧ್ಯಕ್ಷನ ಜೊತೆ ಸೇರಿಕೊಂಡು ಕಿಡ್ನಾಪ್ ಮಾಡಿಸಿದ್ದರು. ಸದ್ಯ 6 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಮತ್ತೊಂದು ಅಪಹರಣ​ ಪ್ರಕರಣ; ಕನ್ನಡ ಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ ಎಫ್​ಐಆರ್
ಕಿಡ್ನಾಪ್ ಕೇಸ್: ಕನ್ನಡ ಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ FIR
Shivaprasad B
| Updated By: ಆಯೇಷಾ ಬಾನು|

Updated on: Jun 30, 2024 | 10:19 AM

Share

ಬೆಂಗಳೂರು, ಜೂನ್.30: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಅಪಹರಣ​ (Kidnap) ಪ್ರಕರಣ ಬೆಳಕಿಗೆ ಬಂದಿದೆ. ಈ ಅಪಹರಣ ಪ್ರಕರಣದಲ್ಲಿ ಲೇಡಿ ಗ್ಯಾಂಗ್ ಜೊತೆ ಕನ್ನಡ ಪರ ಸಂಘಟನೆ ಅಧ್ಯಕ್ಷ ಪ್ರಕಾಶ್ ಹೆಸರು ಸಹ ಕೇಳಿ ಬಂದಿದೆ. ಘಟನೆ ಸಂಬಂಧ ಶಂಕರಪುರ ಪೊಲೀಸ್ ಠಾಣೆಯಲ್ಲಿ (Shankarapura Police Station) ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಪ್ರಕಾಶ್ ಅಲಿಯಾಸ್ ಕನ್ನಡ ಪ್ರಕಾಶ್ & ಗ್ಯಾಂಗ್​ ವಿರುದ್ಧ ಪ್ರಕರಣ ದಾಖಲಾಗಿದೆ.

ಬ್ಯಾಂಕ್ ಉದ್ಯೋಗಿಯಾಗಿರುವ ಮಂಜುನಾಥ್ ಅವರನ್ನು ಪ್ರಕಾಶ್ & ಗ್ಯಾಂಗ್ ಅಪಹರಿಸಿತ್ತು. ಕಿಡ್ನಾಪ್ ಮಾಡಿದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಕನ್ನಡ ಪ್ರಕಾಶ್​ಗೆ ಸೇರಿದ ಕಚೇರಿಯಲ್ಲಿ ಮಂಜುನಾಥ್ ಅವರನ್ನು ಕರೆದುಕೊಂಡು ಬಂದು ಥಳಿಸಲಾಗಿತ್ತು. ಅಪಹರಿಸಿ ಹಣ, ಮನೆ ದಾಖಲೆಗಳನ್ನು ಕಸಿದುಕೊಂಡ ಆರೋಪ ಕೇಳಿ ಬಂದಿದೆ.

ಇನ್ನು ಮತ್ತೊಂದೆಡೆ ಅಪಹರಣಕ್ಕೊಳಗಾದ ಮಂಜುನಾಥ್ ಅವರು ಮಂಜುಳಾ ಎಂಬುವರ ಬಳಿ 8 ಲಕ್ಷ ಸಾಲ ಪಡೆದಿದ್ದರು. ಆದರೆ ಸಾಲ ಪಡೆದಿದ್ದ ಹಣ ವಾಪಸ್ ನೀಡದೆ ಮಂಜುನಾಥ್ ಸತಾಯಿಸಿದ್ದರು. ಹೀಗಾಗಿ ಮಂಜುಳಾ ಅವರು ಕನ್ನಡ ಪ್ರಕಾಶ್ ಜೊತೆ ಸೇರಿ ಕಿಡ್ನ್ಯಾಪ್​ ಪ್ಲ್ಯಾನ್​ ಮಾಡಿದ್ದರು. ಮಂಜುನಾಥ್​ನನ್ನು ಕಿಡ್ನ್ಯಾಪ್ ಮಾಡಿ ದಾಖಲೆ ಕಿತ್ತುಕೊಂಡಿದ್ದರು. ಸದ್ಯ ಮಂಜುಳಾ, ಪ್ರಕಾಶ್, ಚಲಪತಿ ಸೇರಿ 6 ಆರೋಪಿಗಳ ವಿರುದ್ಧ FIR ದಾಖಲಾಗಿದೆ.

ಇದನ್ನೂ ಓದಿ: New Criminal Laws: ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

ಜೂಜಾಟದಲ್ಲಿ ತೊಡಗಿದ್ದ 22 ಆರೋಪಿಗಳು ಪೊಲೀಸರ ವಶಕ್ಕೆ

ಚಿತ್ರದುರ್ಗದಲ್ಲಿ ಬಿಗ್ ಬಾಸ್ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದು ಜೂಜಾಟದಲ್ಲಿ ತೊಡಗಿದ್ದ 22 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು 85 ಸಾವಿರ ರೂ.‌ ಮೌಲ್ಯದ ಟೋಕನ್ ವಶಕ್ಕೆ ಪಡೆದಿದ್ದಾರೆ. ಬಿಗ್ ಬಾಸ್ ಹೋಟೆಲ್‌ನ 4ನೇ ಮಹಡಿಯಲ್ಲಿರುವ ಫೋರ್ಟ್ ಸಿಟಿ ರಿಕ್ರಿಯೇಷನ್ ಕ್ಲಬ್ ಹೆಸರಿನಲ್ಲಿ ಜೂರಾಟ ನಡೆಯುತ್ತಿತ್ತು. ಡಿವೈಎಸ್​ಪಿ ದಿನಕರ್, ಸಿಪಿಐ ದೊಡ್ಡಣ್ಣ ನೇತೃತ್ವದಲ್ಲಿ ದಾಳಿ ನಡೆದಿದ್ದು 22 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಚಿತ್ರದುರ್ಗದ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ