ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ: ನೆಲಕ್ಕುರುಳಿದ ಕ್ರೇನ್​, ತಪ್ಪಿದ ಭಾರೀ ಅನಾಹುತ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 07, 2023 | 11:22 PM

ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್​ ಶುಕ್ರವಾರ ರಾತ್ರಿ ನೆಲಕ್ಕುರುಳಿ ಬಿದ್ದಿದೆ. ಆ ಮೂಲಕ ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 

ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ: ನೆಲಕ್ಕುರುಳಿದ ಕ್ರೇನ್​, ತಪ್ಪಿದ ಭಾರೀ ಅನಾಹುತ
ನೆಲಕ್ಕುರುಳಿದ ಕ್ರೇನ್
Follow us on

ಬೆಂಗಳೂರು: ಮೆಟ್ರೋ (metro) ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್​ ಶುಕ್ರವಾರ ರಾತ್ರಿ ನೆಲಕ್ಕುರುಳಿ ಬಿದ್ದಿದೆ. ಆ ಮೂಲಕ ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ ಸಂಭವಿಸಿದೆ. ಸಿಲ್ಕ್ ಬೋರ್ಡ್‌ನಿಂದ ಮಡಿವಾಳಕ್ಕೆ ಸಂಪರ್ಕಿಸುವ ಮಾರ್ಗದಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್​ ಜಾರಿ ಬಿಳ್ಳಲು ಕಾರಣ ಏನು ಎಂಬುವುದನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮಡಿವಾಳ ಕಡೆಗೆ ಬರುವವರು ಬಿಟಿಎಂ ಲೇಔಟ್​ ಮೂಲಕ ಸಂಚರಿಸಬೇಕು. ಅದೇ ರೀತಿಯಾಗಿ ಬಿಟಿಎಂ ಲೇಔಟ್​ನಿಂದ ಮಡಿವಾಳಕ್ಕೆ ಹೋಗುವವರು ಎಚ್​ಎಸ್​​ಆರ್​ 14ನೇ ಮುಖ್ಯ ರಸ್ತೆ ಮೂಲಕ ಸಾಗಬೇಕಿದೆ.​

ಇದನ್ನೂ ಓದಿ: Metro Pillar collapsed ಮೆಟ್ರೋ ಕಂಬಿ ಕುಸಿದು ತಾಯಿ, ಮಗು ಸಾವು ಪ್ರಕರಣ: ಐವರ ವಿರುದ್ಧ ಕೇಸ್ ಬುಕ್

ಇತ್ತೀಚೆಗೆ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​​ ಕುಸಿದು ಬಿದ್ದು, ಮಹಿಳೆ ಮತ್ತು ಎರಡು ವರ್ಷದ ಮಗು ಸಾವನ್ನಪ್ಪಿರುವಂತಹ ಘಟನೆ ನಗರದ ನಾಗವಾರದಲ್ಲಿ ನಡೆದಿತ್ತು. ಕಲ್ಯಾಣ್​ ನಗರದಿಂದ ಹೆಚ್​ಆರ್​ಬಿಆರ್​ ಲೇಔಟ್​ಗೆ ಹೋಗುವ ರಸ್ತೆಯಲ್ಲಿ ನಿರ್ಮಿಸಲಾಗುತ್ತಿದ್ದ ಮೆಟ್ರೊ ರೈಲ್ವೆ ಪಿಲ್ಲರ್​ನ ರಾಡ್​ಗಳು ರಸ್ತೆ ಮೇಲೆ ಕುಸಿದು ಬಿದ್ದ ಪರಿಣಾಮ ಅವಘಡ ಸಂಭವಿಸಿತ್ತು.

ಇದನ್ನೂ ಓದಿ: Bengaluru News: ಚರಣ್ ಸೌಹಾರ್ದ ಸಹಕಾರ ಬ್ಯಾಂಕ್ ವಿರುದ್ಧ ಎಫ್​ಐಆರ್ ದಾಖಲು

ಈ ಘಟನೆ ಮಾಸುವ ಮುನ್ನವೇ ನಮ್ಮ ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ ಉಂಟಾಗಿರುವುದು ಸಾರ್ವಜನಿಕರಲ್ಲಿ ಮತ್ತು ವಾಹನ ಸವಾರರಲ್ಲಿ ಆತಂಕ ಶುರುವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:10 pm, Fri, 7 July 23