ಬೆಂಗಳೂರಿನಲ್ಲಿ ಡೆಂಗ್ಯೂಗೆ ಮತ್ತೊಂದು ಬಲಿ: ಆರೋಗ್ಯ ಸಮೀಕ್ಷೆಯಲ್ಲಿ ಕಂಡುಬಂತು ಆಘಾತಕಾರಿ ಅಂಶ

ರಾಜ್ಯದಲ್ಲಿ ಡೆಂಗ್ಯೂವಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಡೆಂಗ್ಯೂ ರೋಗದಿಂದ ಬಳಲುತ್ತಿರವವರ ಸಂಖ್ಯೆ ಬೆಂಗಳೂರಿನಲ್ಲಿ ಅಧಿಕವಾಗಿದೆ. ಅಲ್ಲದೆ ಕಳೆದ ನಾಲ್ಕು ದಿನಗಳಲ್ಲಿ ಇಬ್ಬರು ಡೆಂಗ್ಯೂವಿನಿಂದ ಮೃತಪಟ್ಟಿದ್ದಾರೆ. ಇದೀಗ ಮತ್ತೊಬ್ಬರು ಮೃತಪಟ್ಟಿದ್ದಾರೆ. ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿರುವುದಕ್ಕೆ ಕಾರಣ ಹುಡುಕಿಕೊಂಡು ಹೋದ ಆರೋಗ್ಯ ಇಲಾಖೆಗೆ ಆಘಾತಕಾರಿ ಅಂಶವೊಂದು ತಿಳಿದಿದೆ.

ಬೆಂಗಳೂರಿನಲ್ಲಿ ಡೆಂಗ್ಯೂಗೆ ಮತ್ತೊಂದು ಬಲಿ: ಆರೋಗ್ಯ ಸಮೀಕ್ಷೆಯಲ್ಲಿ ಕಂಡುಬಂತು ಆಘಾತಕಾರಿ ಅಂಶ
ಡೆಂಗ್ಯೂ
Follow us
TV9 Web
| Updated By: ವಿವೇಕ ಬಿರಾದಾರ

Updated on: Jul 01, 2024 | 10:55 AM

ಬೆಂಗಳೂರು, ಜುಲೈ 01: ನಗರದಲ್ಲಿ ಡೆಂಗ್ಯೂಗೆ (Dengue) ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಮೂಲಕ ಡೆಂಗ್ಯೂಯಿಂದ ಸಾವಿಗೀಡಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಶುಕ್ರವಾರ (ಜೂ.29) ರಂದು ಇಬ್ಬರು ಡೆಂಗ್ಯೂ ಸೋಂಕಿತರು ಮೃತಪಟ್ಟಿದ್ದರು. ಇದೀಗ ಕಗ್ಗದಾಸಪುರದ 27 ವರ್ಷದ ಯುವಕ ಮೃತಪಟ್ಟಿದ್ದಾನೆ ಬಿಬಿಎಂಪಿ ಮಾಹಿತಿ ನೀಡಿದೆ. ಶುಕ್ರವಾರ ಮೃತಪಟ್ಟ 80 ವರ್ಷದ ವೃದ್ದೆಯ ಸಾವಿಗೆ ಡೆಂಗ್ಯೂ ಕಾರಣವಲ್ಲ, ಕ್ಯಾನ್ಸರ್ ಕಾರಣ ಅಂತ ಬಿಬಿಎಂಪಿ (BBMP) ಹೆಲ್ತ್ ಆಡಿಟ್ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಅಡಕವಾಗಿದೆ. ಹೊಸದಾಗಿ 213 ಡೆಂಗ್ಯೂ ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಲ್ಲಿ ಡೆಂಗ್ಯೂ ಸೊಂಕು ದೃಢವಾಗಿದೆ.

ಡೆಂಗ್ಯೂ ಹರಡುವಿಕೆ ಮತ್ತು ಭೀತಿ ನಿಯಂತ್ರಣಕ್ಕಾಗಿ ಮತ್ತು ಸಾವಿನ ನಿಖರವಾದ ಕಾರಣವನ್ನು ಪತ್ತೆಹಚ್ಚಲು ಆರೋಗ್ಯ ಇಲಾಖೆಯು ಹೆಲ್ತ್​​ ಆಡಿಟ್ ನಡೆಸಿತು. ಬೆಂಗಳೂರಿನಲ್ಲಿ ಇತ್ತೀಚೆಗೆ ಸಂಭವಿಸಿದ ಎರಡು ಸಾವುಗಳು ಡೆಂಗ್ಯೂ ಕಾರಣ ಎಂದು ಶಂಕಿಸಲಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಹೆಲ್​ ಅಡಿಟ್​ನಲ್ಲಿ ಮಹಿಳೆಯರು ಮತ್ತು ಮಕ್ಕಳು ಡೆಂಗ್ಯೂ ಸೋಂಕಿಗೆ ಬೇಗ ತುತ್ತಾಗುತ್ತಿದ್ದಾರೆ. ಗರ್ಭಿಣಿಯರಿಗೆ ಬೇಗ ಡೆಂಗ್ಯೂ ಹರಡುತ್ತಿದ್ದು ಎಚ್ಚರವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ ಎಂದು ಮೂಲಗಳಿಂದ ಅಧಿಕೃತ ಮಾಹಿತಿ ದೊರೆತಿದೆ.

ಇದನ್ನೂ ಓದಿ: ಪ್ರತಿ 2 ಗಂಟೆಗೆ ಇಬ್ಬರಲ್ಲಿ ಡೆಂಗ್ಯೂ ಲಕ್ಷಣ ಪತ್ತೆ; ಬೆಂಗಳೂರಿನಲ್ಲಿ 2457 ಪ್ರಕರಣ

ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ರಾಜ್ಯಾದ್ಯಂತ ಒಟ್ಟು 93,012 ಶಂಕಿತ ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಜನವರಿಯಿಂದ ಇಲ್ಲಿಯವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ 5,878 ಜನರಿಗೆ ಡೆಂಗ್ಯೂ ರೋಗ ಬಂದಿದೆ.  ಬೆಂಗಳೂರು ನಗರ 310 ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ 467 ಜನರಿಗೆ ಡೆಂಗ್ಯೂವಕ್ಕರಿಸಿದೆ. ಆರೋಗ್ಯ ಇಲಾಖೆಯು ಒಳಾಂಗಣ ಮತ್ತು ಹೊರಾಂಗಣದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ಸ್ಥಳಗಳಲ್ಲಿ ನಿಯಮಿತ ತಪಾಸಣೆ ನಡೆಸಿದೆ. ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತರು ನಗರ ಮತ್ತು ಗ್ರಾಮೀಣ ವ್ಯವಸ್ಥೆಗಳಲ್ಲಿ ತಪಾಸಣೆ ನಡೆಸಿದ್ದಾರೆ.

​ಜಿಲ್ಲಾವಾರು ಡೆಂಗ್ಯೂ ಪ್ರಕರಣಗಳ ವಿವರ

ತುಮಕೂರು ಜಿಲ್ಲೆಯಲ್ಲಿ ಆರೇ ತಿಂಗಳಲ್ಲಿ 170 ಪ್ರಕರಣಗಳು ಪತ್ತೆಯಾಗಿದ್ದರೆ, ಗದಗದಲ್ಲಿ ಇದೇ ತಿಂಗಳಲ್ಲಿ ಒಟ್ಟು 31 ಮಕ್ಕಳಿಗೆ ಡೆಂಗ್ಯೂ ಶಂಕೆ ವ್ಯಕ್ತವಾಗಿದೆ. ಇನ್ನು ಮಂಡ್ಯದಲ್ಲಿ ಎರಡು ತಿಂಗಳಲ್ಲಿ 150ಕ್ಕೂ ಹೆಚ್ಚು ಜನರಿಗೆ, ಹಾವೇರಿಯಲ್ಲಿ 500 ಜನರಿಗೆ ಡೆಂಗ್ಯೂವಕ್ಕರಸಿಕೊಂಡಿದೆ. ಕೇವಲ 6 ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ.140ರಷ್ಟು ಹೆಚ್ಚಾಗಿದೆಯಂತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ