Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಅಪಘಾತವಾಗಿದ್ದು, ಅಪರಿಚಿತ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ನಡೆದಿದೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ
ಅಪಘಾತ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 25, 2023 | 10:09 AM

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇ(Bengaluru Mysuru Expressway)ನಲ್ಲಿ ಮತ್ತೊಂದು ಅಪಘಾತವಾಗಿದ್ದು, ಅಪರಿಚಿತ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ(Mandya) ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ನಡೆದಿದೆ. ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಅಪಘಾತವಾಗಿದ್ದು, ಅಪರಿಚಿತ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ನಡೆದಿದೆ. ಬೈಕ್​ನಲ್ಲಿದ್ದ ಮಣಿ(25), ಜನಾರ್ದನ ಪೂಜಾರಿ(21) ಸಾವನ್ನಪ್ಪಿದ್ದಾರೆ. ಮೃತರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇನ್ನು ಸ್ಥಳಕ್ಕೆ ಮದ್ದೂರು ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ಯುವಕರ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

ಜನವರಿಯಿಂದ ಇಲ್ಲಿಯವರೆಗಿನ ಅಪಘಾತ

ಇತ್ತೀಚೆಗೆ ಬೆಂಗಳೂರು-ಮೈಸೂರು ನಗರಗಳನ್ನು ಬೆಸೆಯುವ ಈ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಜನವರಿಯಿಂದ ಇಲ್ಲಿಯವರೆಗೂ 110 ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೌದು ರಾಮನಗರ ಜಿಲ್ಲೆಯಲ್ಲಿಯೇ 243 ಅಪಘಾತಗಳು ಸಂಭವಿಸಿದ್ದು, 50 ಜನ ಸಾವನ್ನಪ್ಪಿದರೆ, 190 ಜನರಿಗೆ ಗಾಯಗಳಾಗಿವೆ. ಇನ್ನು ಮಂಡ್ಯ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 575 ಅಪಘಾತಗಳಾಗಿದ್ದು, 60 ಮಂದಿ ಜನ ಸಾವನ್ನಪ್ಪಿದ್ದಾರೆ. 54 ಮಂದಿಗೆ ತೀವ್ರ ಪೆಟ್ಟು ಬಿದ್ದಿದ್ದರೆ, 189 ಮಂದಿಗೆ ಕೈ ಕಾಲು ಮುರಿತವಾಗಿದ್ದು, 295 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಮೂಲಕ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇ ಸಾವಿನ ಹೆದ್ದಾರಿಯಾಗಿ ಮಾರ್ಪಾಡುತ್ತಿದೆ.

ಇದನ್ನೂ ಓದಿ:Udupi News: ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಲಾರಿ ಹರಿದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ಮೈಸೂರು: ಲಾರಿ ಹರಿದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ನಂಜನಗೂಡು ತಾಲೂಕಿನ ಕಳಲೆ ಗೇಟ್ ಬಳಿ ನಡೆದಿದೆ. ಕಳಲೆ ಗ್ರಾಮದ ಶಿವರಾಜ್(50), ಪಿ.ಮಹೇಶ್(33) ಮೃತ ರ್ದುದೈವಿಗಳು. ಗುಂಡ್ಲುಪೇಟೆ ಕಡೆಗೆ ಹೋಗುತ್ತಿದ್ದ ಲಾರಿಯ ಹಿಂಬದಿಯ ಚಕ್ರ ಬೈಕ್​ನಲ್ಲಿದ್ದ ಇಬ್ಬರು ಸವಾರರ ಮೇಲೆ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಹಿಂದೆಯಿಂದ ಮತ್ತೊಂದು ಬೈಕ್​ನಲ್ಲಿ ಬರುತ್ತಿದ್ದ ಮಹದೇವ್ ಮತ್ತು ಚಿಕ್ಕದೇವಮ್ಮ ಅವರಿಗೂ ಲಾರಿ ಡಿಕ್ಕಿಯಾಗಿ ಗಾಯಗಳಾಗಿದ್ದು, ಅವರನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಲಾರಿ ಚಾಲಕನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಸರ್ಕಾರಿ ಬಸ್, ಬೈಕ್ ನಡುವೆ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಮಂಚೇನಹಳ್ಳಿ ತಾಲೂಕಿನ ಹೊನ್ನಪ್ಪನಹಳ್ಳಿ ಗ್ರಾಮದ ಬಳಿ ಸರ್ಕಾರಿ ಬಸ್​ ಡಿಕ್ಕಿಯಾಗಿ ಬೈಕ್ ಸವಾರ ನಾಗರಾಜು(45) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ನಾಗರಾಜು ಪತ್ನಿ ಬಚಾವ್ ಆಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಈ ಕುರಿತು ಅಂಬ್ಯುಲೆನ್ಸ್​ಗೆ ಮಾಹಿತಿ ನೀಡಿದರೂ, ಗಂಟೆಗಳಾದ್ರು ಸ್ಥಳಕ್ಕೆ ಬಂದಿಲ್ಲ. ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬಾರದ ಅಂಬುಲೆನ್ಸ್ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:Viral Video: ಭೀಕರ ರಸ್ತೆ ಅಪಘಾತ, ಸೀಟ್​​ ಬೆಲ್ಟ್​ ಹಾಕದೇ ಇದ್ದಿದ್ದಕ್ಕೆ ಚಾಲಕನ ಸ್ಥಿತಿ ಏನಾಯ್ತು ನೋಡಿ

ದೇಗುಲದ ಬೀಗ ಮುರಿದು, ಆಭರಣ ಕದ್ದು ಕಳ್ಳರು ಪರಾರಿ

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದ ಲಕ್ಷ್ಮಿರಂಗನಾಥಸ್ವಾಮಿ ದೇಗುಲದ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಆಭರಣಗಳಾದ ಬೆಳ್ಳಿಕುದುರೆ, ಕಿರೀಟ‌, ಕಣ್ಣು ಸೇರಿ ಬೆಲೆಬಾಳುವ ವಸ್ತುಗಳು ಕಳ್ಳತನ ಮಾಡಲಾಗಿದ್ದು, ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ‌ಘಟನೆ ನಡೆದಿದೆ.

ಕುರಿ, ಮೇಕೆಗಳ ಮೇಲೆ ಕಾಡು ಪ್ರಾಣಿಗಳ ದಾಳಿ; ಪ್ರಾಣಿಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಮೈಸೂರು: ಜಿಲ್ಲೆಯ ಮೆಲ್ಲಹಳ್ಳಿ ಗ್ರಾಮದ ಜಮೀನಿನ ಕೊಟ್ಟಿಗೆಯಲ್ಲಿದ್ದ ಕುರಿ, ಮೇಕೆಗಳ ಮೇಲೆ ಕಾಡು ಪ್ರಾಣಿಗಳು ದಾಳಿ ಮಾಡಿದ್ದುಮ ಒಂದು ಕುರಿ ಸಾವನ್ನಪ್ಪಿದ್ದು, ಎರಡು ಕಾಡು ಪ್ರಾಣಿಗಳನ್ನು ಎಳೆದೊಯ್ದಿದೆ. ಜಮೀನಿನಲ್ಲಿ ಕಾಡು ಪ್ರಾಣಿಯ ಹೆಜ್ಜೆ ಗುರುತು ಪತ್ತೆಯಾಗಿದೆ. ಹುಲಿ ಅಥವಾ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಗ್ರಾಮಸ್ಥರೆಲ್ಲರು ಕಾಡು ಪ್ರಾಣಿಗಳನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ