ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಬನಶಂಕರಿಯಲ್ಲಿರುವ ಶೋಭಾ ವ್ಯಾಲಿ ಅಪಾರ್ಟ್‌ಮೆಂಟ್‌ನಲ್ಲಿ 11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಬನಶಂಕರಿಯಲ್ಲಿರುವ ಶೋಭಾ ವ್ಯಾಲಿ ಅಪಾರ್ಟ್‌ಮೆಂಟ್‌ನ ಬಾಲ್ಕನಿಯಲ್ಲಿ 10 ವರ್ಷದ ಗಗನ್ ಆಟವಾಡುತ್ತಿದ್ದ. ನಿನ್ನೆ ಮಧ್ಯಾಹ್ನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಟೆರೇಸ್ ಮೇಲೆ ಆಟ ಆಡಲು ಬಾಲಕ ತೆರಳಿದ್ದ ಎಂದು ತಿಳಿದುಬಂದಿದೆ.
ಈ ವೇಳೆ ಹನ್ನೊಂದನೇ ಮಹಡಿಯಿಂದ ಕೆಳಗೆ ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ. ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಗದಗ: ಮಗು ಜತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಯತ್ನ ಪ್ರಕರಣ; ಮಲಪ್ರಭಾ ನದಿಯಲ್ಲಿ ಮಗುವಿನ ಶವ ಪತ್ತೆ
ಇದನ್ನೂ ಓದಿ: ಉಳುಮೆ ವೇಳೆ ಹೆದರಿದ ಜೋಡೆತ್ತುಗಳು ರೈತನ ಕಣ್ಮುಂದೆಯೇ ಬಾವಿಗೆ ಬಿದ್ದು ದಾರುಣ ಸಾವು