ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಖಾಸಗಿ ವಿಧೇಯಕ ಮಂಡನೆಗೆ ನಿರ್ಧಾರ

ಮತಾಂತರವನ್ನು ಕಾನೂನು ವ್ಯಾಪ್ತಿಗೆ ಒಳಪಡಿಸುವ ಪ್ರಸ್ತಾವನೆಯನ್ನು ಈ ವಿಧೇಯಕ ಒಳಗೊಳ್ಳಲಿದೆ. ಈ ಕುರಿತು ತುಳಸಿ ಮುನಿರಾಜು ಅವರು ವಿಧಾನ ಪರಿಷತ್ ಸಭಾಪತಿಗೆ ಸೂಚನೆಯನ್ನೂ ಸಲ್ಲಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಖಾಸಗಿ ವಿಧೇಯಕ ಮಂಡನೆಗೆ ನಿರ್ಧಾರ
ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜುಗೌಡ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 06, 2021 | 10:31 PM

ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಮತಾಂತರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಅಧಿವೇಶನದಲ್ಲಿ ಖಾಸಗಿ ವಿಧೇಯಕ ಮಂಡಿಸಲು ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜುಗೌಡ ನಿರ್ಧರಿಸಿದ್ದಾರೆ. ಸದನದಲ್ಲಿ ಖಾಸಗಿ ಸದಸ್ಯರ ವಿಧೇಯಕ ಮಂಡಿಸಲು ಅವರು ಸಿದ್ಧತೆ ಮಾಡಿಕೊಂಡಿದ್ದಾರೆ. ಮತಾಂತರವನ್ನು ಕಾನೂನು ವ್ಯಾಪ್ತಿಗೆ ಒಳಪಡಿಸುವ ಪ್ರಸ್ತಾವನೆಯನ್ನು ಈ ವಿಧೇಯಕ ಒಳಗೊಳ್ಳಲಿದೆ. ಈ ಕುರಿತು ತುಳಸಿ ಮುನಿರಾಜು ಅವರು ವಿಧಾನ ಪರಿಷತ್ ಸಭಾಪತಿಗೆ ಸೂಚನೆಯನ್ನೂ ಸಲ್ಲಿಸಿದ್ದಾರೆ.

ಮತಾಂತರ ಆರೋಪ; ಹಾಸನದಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ ಹಾಸನ: ಹಿಂದೂ ಧರ್ಮದ ಜನರನ್ನು ಪುಸಲಾಯಿಸಿ ಮತಾಂತರ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಪ್ರಾರ್ಥನಾ ಕೇಂದ್ರದ ಎದುರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರಾರ್ಥನಾ ನಿರತರು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ. ನಾವು ಪ್ರಾರ್ಥನೆಗೆ ಬಂದಿದ್ದೇವೆ. ಅದನ್ನು ಕೇಳೋಕೆ ನೀವ್ಯಾರು ಅಂತ ಮಹಿಳೆಯರು ಗಲಾಟೆ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಬಿಕ್ಕೋಡು ರಸ್ತೆಯಲ್ಲಿ ಈ ಘಟನೆ ನಡೆದಿದೆ.

ತಾಲೂಕಿನಲ್ಲಿ ಅಕ್ರಮವಾಗಿ ಪ್ರಾರ್ಥನಾ ಕೇಂದ್ರ ತೆರೆದು ಜನರನ್ನು ಪುಸಲಾಯಿಸಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿರುವ ಹಿಂದೂ ಪರ ಸಂಘಟನೆಗಳ ಮುಖಂಡರು ಸೂಕ್ತ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ಜಾರಿಗೆ ಆಗ್ರಹ ಮತಾಂತರ ಕಾಯ್ದೆ ಜಾರಿ ವಿಚಾರವಾಗಿ ಚರ್ಚಿಸಲು ನವೆಂಬರ್ 12ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ಶ್ರೀಗಳ ನಿಯೋಗ ಮತ್ತು ಪ್ರಮೋದ್ ಮುತಾಲಿಕ್ ಆಗಮಿಸಿದ್ದರು. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿ ಸ್ವಾಮೀಜಿಗಳು ಹಾಗೂ ಪ್ರಮೋದ್ ಮುತಾಲಿಕ್ ಆಗ್ರಹ ವ್ಯಕ್ತಪಡಿಸಿದ್ದರು. ಕಾಯ್ದೆ ಜಾರಿಗೆ ತರುವಂತೆ ಸಿಎಂಗೆ ಮಾದಾರ ಚನ್ನಯ್ಯ, ಸೇವಾಲಾಲ್ ಸ್ವಾಮೀಜಿ, ಸಿದ್ದಲಿಂಗಶ್ರೀ ಹಾಗೂ ಸುಮಾರು 50ಕ್ಕೂ ಹೆಚ್ಚು ಸ್ವಾಮೀಜಿಗಳ ನಿಯೋಗ ಮನವಿ ಮಾಡಿದೆ. ಕಾಯ್ದೆ ಮಾಡದಿದ್ದರೆ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಅಂತ ಎಚ್ಚರಿಕೆ ನೀಡಿದ್ದಾರೆ.

ಮತಾಂತರ ದೇಶಾದ್ಯಂತ ನಡೆಯುತ್ತಿದೆ. ಇದು ಬ್ರಿಟೀಷರಿಂದ ಪ್ರಾರಂಭವಾಗಿದೆ. ನಿಷೇಧ ಕಾಯ್ದೆ ಮಾಡ್ತಾರೆ ಅಂತ ಗೊತ್ತಾಗ್ತಿದ್ದಂತೆ ಪಾದ್ರಿಗಳು ಸಿಎಂ ಭೇಟಿಯಾಗಿದ್ದಾರೆ. ಇದು ಸರಿಯಲ್ಲ ಎಂದು ಸ್ವಾಮೀಜಿಗಳು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಶಿಯಾ ವಕ್ಫ್​ ಮಂಡಳಿ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಹಿಂದು ಧರ್ಮಕ್ಕೆ ಮತಾಂತರ; ಜೀವ ಬೆದರಿಕೆ ಹೆಚ್ಚಾದ ಬೆನ್ನಲ್ಲೇ ಧರ್ಮ ಬದಲಾವಣೆ ಇದನ್ನೂ ಓದಿ: Mohan Bhagwat: ಯಾರನ್ನೂ ಮತಾಂತರಗೊಳಿಸಬೇಕಾಗಿಲ್ಲ, ಹೇಗೆ ಬದುಕಬೇಕೆಂಬುದನ್ನು ಕಲಿಸಿ; ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್